AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ

ಮೌತ್ ಅಲ್ಸರ್ ಅಥವಾ ಬಾಯಿಯ ಹುಣ್ಣು ತುಟಿಗಳ ಕೆಳಗೆ, ದವಡೆ ಅಥವಾ ಕೆನ್ನೆಯ ಒಳ ಭಾಗ ಮತ್ತು ನಾಲಿಗೆಯಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ.

Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ
ಬಾಯಿ ಹುಣ್ಣು
TV9 Web
| Edited By: |

Updated on: Jun 16, 2021 | 11:01 AM

Share

ಬಾಯಿಯಲ್ಲಿ ಉಂಟಾಗುವ ಹುಣ್ಣಿನಿಂದಾಗಿ ಅನೇಕ ಜನರು ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಬಾಯಿಯಲ್ಲಿ ಹುಣ್ಣಾದಾಗ ಆಹಾರ ಸೇವಿಸಲು, ಮಾತನಾಡಲು, ನೀರು ಕುಡಿಯಲು ಕಷ್ಟ ಪಡಬೇಕಾಗುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯ ಹುಣ್ಣು ತುಟಿಗಳ ಕೆಳಗೆ, ದವಡೆ ಅಥವಾ ಕೆನ್ನೆಯ ಒಳ ಭಾಗ ಮತ್ತು ನಾಲಿಗೆಯಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಉಷ್ಣತೆ ಹೆಚ್ಚಾದಾಗ ಬಾಯಿಯಲ್ಲಿ ಹುಣ್ಣು ಕಾಣಿಸಿಕೊಳ್ಳುತ್ತದೆ. ಆದರೆ ಇದಕ್ಕೆ ನಿಖರವಾದ ಔಷಧಿ ಸಿಗದೆ ಹಲವರು ನೋವನ್ನು ಸಹಿಸಿಕೊಳ್ಳುತ್ತಿದ್ದಾರೆ. ಚಿಂತೆಗೀಡಾಗುವುದು ಬೇಡ ಈ ಸರಳ ವಿಧಾನವನ್ನು ಅನುಸರಿಸಿ ಮತ್ತು ಬಾಯಿ ಹುಣ್ಣಿನಿಂದ ಮುಕ್ತಿ ಪಡೆಯಿರಿ.

ಜೇನುತುಪ್ಪ ಬಾಯಿಯ ಹುಣ್ಣುಗಳನ್ನು ಕಡಿಮೆ ಮಾಡಲು ಜೇನುತುಪ್ಪವು ಶಕ್ತಿಯುತವಾಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪದ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳು ಬಾಯಿಯ ಹುಣ್ಣುಗಳನ್ನು ಗುಣಪಡಿಸುವಲ್ಲಿ ನೆರವಾಗುತ್ತದೆ. ಹುಣ್ಣುಗಳ ಮೇಲೆ ಜೇನುತುಪ್ಪವನ್ನು ಹಚ್ಚುವುದರಿಂದ ನೋವು ಕಡಿಮೆಯಾಗುತ್ತದೆ. ಹುಣ್ಣು ಉಂಟು ಮಾಡುವ ಬ್ಯಾಕ್ಟೀರಿಯಾವನ್ನು ಕೂಡ ಜೇನುತುಪ್ಪ ದೂರ ಮಾಡುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಯನ್ನು ಬಾಯಿಯಲ್ಲಿರುವ ಹುಣ್ಣುಗಳ ಮೇಲೆ ಹಚ್ಚುವುದರಿಂದ ಉರಿಯೂತ ಕಡಿಮೆಯಾಗುತ್ತದೆ. ಜತೆಗೆ ನೋವನ್ನು ನಿವಾರಿಸುತ್ತದೆ. ಒಣಗಿದ ಕೊಬ್ಬರಿಯನ್ನು ಸೇವಿಸುವುದರಿಂದ ಕೂಡ ಹುಣ್ಣು ಕಡಿಮೆಯಾಗುತ್ತದೆ. ತೆಂಗಿನ ನೀರು ಕುಡಿಯುವುದರಿಂದಲೂ ಹುಣ್ಣನ್ನು ಹೋಗಲಾಡಿಸಬಹುದು.

ಆ್ಯಪಲ್ ಸೈಡರ್ ವಿನೆಗರ್ ಆ್ಯಪಲ್ ಸೈಡರ್ ವಿನೆಗರ್ ಬಾಯಿ ನೋವನ್ನು ತ್ವರಿತವಾಗಿ ಗುಣಪಡಿಸುತ್ತದೆ. ಇದು ಹುಣ್ಣುಗಳಿಗೆ ಕಾರಣವಾಗುವ ಸೂಕ್ಷ್ಮಜೀವಿಗಳನ್ನು ನಾಶಪಡಿಸುತ್ತದೆ. ಮೂರು ಚಮಚೆ ಆ್ಯಪಲ್ ಸೈಡರ್ ವಿನೆಗರ್ ಅನ್ನು ಸ್ವಲ್ಪ ನೀರಿನಲ್ಲಿ ಹಾಕಿ 30 ಸೆಕೆಂಡುಗಳ ಕಾಲ ನಿಮ್ಮ ಬಾಯಿಯಲ್ಲಿ ಇರಿಸಿ. ಇದು ಬಾಯಿ ಹುಣ್ಣುಗಳಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ.

ಉಪ್ಪು ನೀರು ಬಾಯಿ ಹುಣ್ಣನ್ನು ಕಡಿಮೆ ಮಾಡಲು ಉಪ್ಪು ನೀರು ಚೆನ್ನಾಗಿ ಕೆಲಸ ಮಾಡುತ್ತದೆ. ಬಾಯಿ ಹುಣ್ಣುಗಳನ್ನು ಗುಣಪಡಿಸಲು ಈ ವಿಧಾನವನ್ನು ಪ್ರಾಚೀನ ಕಾಲದಿಂದಲೂ ಬಳಸಲಾಗುತ್ತದೆ. ಉಪ್ಪು ನೀರಿನಿಂದ ಬಾಯಿಯನ್ನು ತೊಳೆಯುವುದರಿಂದ ಈ ಸಮಸ್ಯೆಯನ್ನು ತ್ವರಿತವಾಗಿ ಗುಣಪಡಿಸಬಹುದು.

ಬೆಳ್ಳುಳ್ಳಿ ಬೆಳ್ಳುಳ್ಳಿ ಪ್ರತಿಜೀವಕವಾಗಿ ಕಾರ್ಯನಿರ್ವಹಿಸುತ್ತದೆ. ಬೆಳ್ಳುಳ್ಳಿ ಬಾಯಿಯ ನೋವನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿನ ಶಕ್ತಿಯುತವಾದ ಆಲಿಸಿನ್ ನೋವು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸ್ವಲ್ಪ ಬೆಳ್ಳುಳ್ಳಿ ಪೇಸ್ಟ್ ತೆಗೆದುಕೊಂಡು 10ರಿಂದ20 ನಿಮಿಷಗಳ ಕಾಲ ನೋಯುತ್ತಿರುವ ಸ್ಥಳದಲ್ಲಿ ಬಿಟ್ಟು ನಂತರ ಬಾಯಿಯನ್ನು ತೊಳೆಯಿರಿ.

ಇದನ್ನೂ ಓದಿ:

Gourd Juice Side Effects: ಸೋರೆಕಾಯಿ ಜ್ಯೂಸ್​ ಸೇವಿಸುವ ಮೊದಲು ಅದರಿಂದ ಉಂಟಾಗುವ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ

Toothpaste Benefits: ಹಲ್ಲುಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ಟೂತ್​ಪೇಸ್ಟ್ ಮುಖದ ಸೌಂದರ್ಯವನ್ನೂ ಹೆಚ್ಚಿಸುತ್ತದೆ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ