ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಈ ಬೀಜಗಳನ್ನು ಸೇವನೆ ಮಾಡಿ

ಅಗಸೆ ಬೀಜಗಳ ನಿಯಮಿತ ಸೇವನೆಯು ಮಹಿಳೆಯರಲ್ಲಿ ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಋತುಚಕ್ರದ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ. ಅಗಸೆ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿರುವುದರಿಂದ ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಉರಿಯೂತ ಕಡಿಮೆಯಾಗುತ್ತದೆ. ಕೂದಲು ಆರೋಗ್ಯಕರ ಮತ್ತು ಬಲವಾಗಿ ಬೆಳೆಯುತ್ತದೆ.

ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಈ ಬೀಜಗಳನ್ನು ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 01, 2025 | 2:49 PM

ಇತ್ತೀಚಿನ ವರ್ಷಗಳಲ್ಲಿ ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಾನಾ ರೀತಿಯ ಹರಸಾಹಸಗಳನ್ನು ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೈ ಫ್ರೂಟ್ಸ್ ಜೊತೆಗೆ ಬೀಜಗಳನ್ನು ಪ್ರತಿನಿತ್ಯ ಸೇವನೆ ಮಾಡುವುದನ್ನು ರೂಢಿಸಿಕೊಂಡಿದ್ದಾರೆ. ಇವು ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಅನುಕೂಲ ಮಾಡಿಕೊಡುತ್ತದೆ. ಇದರ ಜೊತೆಗೆ ನೀವು ಅಗಸೆ ಬೀಜಗಳನ್ನು ಸೇವನೆ ಮಾಡುತ್ತಿದ್ದರೆ ನಿಮಗಿಂತ ಆರೋಗ್ಯವಂತರಿರುವುದಿಲ್ಲ. ಇವು ನೋಡುವುದಕ್ಕೆ ಚಿಕ್ಕದಾಗಿದ್ದರೂ ಕೂಡ, ಅನೇಕ ರೀತಿಯ ಪೋಷಕಾಂಶಗಳಿಂದ ತುಂಬಿದೆ. ಈ ಬೀಜಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್,ಪ್ರೋಟೀನ್ಗಳು, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಅಗಸೆ ಬೀಜಗಳಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ರಕ್ತದೊತ್ತಡವನ್ನು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ಹೃದ್ರೋಗದ ಅಪಾಯವನ್ನು ಕೂಡ ತಡೆಯುವ ಗುಣವನ್ನು ಹೊಂದಿದೆ. ಹಾಗಾದರೆ ಇದನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಅಗಸೆ ಬೀಜಗಳಲ್ಲಿರುವ ಫೈಬರ್ ಮಲಬದ್ಧತೆಯನ್ನು ತಡೆಯುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ.
  • ಈ ಬೀಜಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿದ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆ ಮೂಲಕ ಅಗಸೆ ಬೀಜಗಳು ಮಧುಮೇಹಿಗಳಿಗೆ ಅಮೃತವಾಗಿ ಕಾರ್ಯನಿರ್ವಹಿಸುತ್ತವೆ.
  • ಅಗಸೆ ಬೀಜಗಳಲ್ಲಿರುವ ಲಿಗ್ನಾನ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತವೆ. ಸ್ತನ, ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವಲ್ಲಿ ಅಗಸೆ ಬೀಜಗಳು ಪ್ರಮುಖ ಪಾತ್ರವಹಿಸುತ್ತವೆ.
  • ಅಗಸೆ ಬೀಜಗಳಲ್ಲಿನ ಫೈಬರ್ ಅಂಶವು ನಿಮಗೆ ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ನೀವು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು.
  • ಅಗಸೆ ಬೀಜಗಳಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಚರ್ಮವನ್ನು ತೇವಾಂಶದಿಂದ ಕೂಡಿರುವಂತೆ ನೋಡಿಕೊಳ್ಳುತ್ತದೆ. ಜೊತೆಗೆ ಚರ್ಮದ ಸಮಸ್ಯೆಗಳನ್ನು ತಡೆಯುತ್ತದೆ. ಅಲ್ಲದೆ ಈ ಬೀಜಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ, ಉರಿಯೂತ ಕಡಿಮೆಯಾಗುತ್ತದೆ. ಕೂದಲು ಆರೋಗ್ಯಕರ ಮತ್ತು ಬಲವಾಗುತ್ತದೆ.
  • ಅಗಸೆ ಬೀಜಗಳ ನಿಯಮಿತ ಸೇವನೆಯು ಮಹಿಳೆಯರಲ್ಲಿ ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಋತುಚಕ್ರದ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.

ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ, ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ಫ್ರಾನ್ಸ್​ ಮಹಾಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಪ್ರಧಾನಿ ಮೋದಿ ನಮನ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ
ಎಐ ಆ್ಯಪ್​ಗಳ ಲೋಪ ಎತ್ತಿತೋರಿಸಿದ ಮೋದಿ