Tips to Boost Mental Health: ಮಾನಸಿಕ ಒತ್ತಡದಿಂದ ಹೊರಬರಲು ಈ ಮೂರು ಕೆಲಸಗಳನ್ನು ಮಾಡಿ

| Updated By: preethi shettigar

Updated on: Jan 15, 2022 | 7:46 AM

ಮಾನಸಿಕವಾಗಿ ಆರೋಗ್ಯವಾಗಿರುವ (Mental Health) ವ್ಯಕ್ತಿಯು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಕಾರ್ಯಕ್ಷಮತೆಯನ್ನು ನೀಡಲು ಸಾಧ್ಯವಾಗುತ್ತದೆ. ಒತ್ತಡ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಂದ ನಮ್ಮನ್ನು ನಾವು ಸುಲಭವಾಗಿ ದೂರವಿಡುವುದು ಹೇಗೆ ಎಂಬುದನ್ನು ತಿಳಿಯಿರಿ.

Tips to Boost Mental Health: ಮಾನಸಿಕ ಒತ್ತಡದಿಂದ ಹೊರಬರಲು ಈ ಮೂರು ಕೆಲಸಗಳನ್ನು ಮಾಡಿ
ಸಾಂದರ್ಭಿಕ ಚಿತ್ರ
Follow us on

ಇತ್ತೀಚಿನ ದಿನಗಳಲ್ಲಿ ದೈನಂದಿನ ಓಡಾಟ ಮತ್ತು ಕೆಲಸದ ಹೊರೆಯಿಂದಾಗಿ ಜನರು ಹೆಚ್ಚಾಗಿ ಒತ್ತಡದಿಂದ ಬಳಲುತ್ತಿದ್ದಾರೆ. ಮಾನಸಿಕ ಒತ್ತಡದಿಂದಾಗಿ ಜನರು ಆತಂಕ ಮತ್ತು ಹತಾಶೆಯಂತಹ ಭಾವನೆಗಳನ್ನು ಅನುಭವಿಸಲು ಪ್ರಾರಂಭಿಸುತ್ತಾರೆ. ಖಿನ್ನತೆ (Depression) ಎಂದು ಕರೆಯಲ್ಪಡುವ ಮಾನಸಿಕ ಆರೋಗ್ಯ ಸಮಸ್ಯೆ (Mental Health Issue) ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಯುವಜನರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಇನ್ನೂ ಕೊರೊನಾ ಸೋಂಕಿನಿಂದಾಗಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೂಡ ಅನೇಕರಲ್ಲಿ ಕಾಣಿಸಿಕೊಂಡಿವೆ. ನೀವು ಸಹ ಮಾನಸಿಕ ಒತ್ತಡದಂತಹ ಸಮಸ್ಯೆ ಎದುರಿಸುತ್ತಿದ್ದರೆ, ಇದರಿಂದ ಹೊರಬರಲು ಪ್ರಯತ್ನಿಸುವುದು ಉತ್ತಮ. ಮಾನಸಿಕವಾಗಿ ಆರೋಗ್ಯವಾಗಿರುವ (Mental Health) ವ್ಯಕ್ತಿಯು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಕಾರ್ಯಕ್ಷಮತೆಯನ್ನು ನೀಡಲು ಸಾಧ್ಯವಾಗುತ್ತದೆ. ಒತ್ತಡ ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳಿಂದ ನಮ್ಮನ್ನು ನಾವು ಸುಲಭವಾಗಿ ದೂರವಿಡುವುದು ಹೇಗೆ ಎಂಬುದನ್ನು ತಿಳಿಯಿರಿ.

ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಿ
ಸಾಮಾನ್ಯವಾಗಿ ಜನರು ಡೈರಿ ಬರೆಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಯಾರೊಂದಿಗೂ ನಮ್ಮ ಖಾಸಗಿ ವಿಷಯಗಳನ್ನು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಇಂತಹ ಸಮಯದಲ್ಲಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಿ. ನೀವು ಡೈರಿಯಲ್ಲಿ ನಿಮ್ಮ ಮಾನಸಿಕ ತೊಳಲಾಟಗಳನ್ನು ಬರೆದರೆ, ಇದು ಒತ್ತಡವನ್ನು ನಿವಾರಿಸುತ್ತದೆ.

ಪ್ರಾಣಾಯಾಮ ಮಾಡಿ
ಉಸಿರಾಟದ ವ್ಯಾಯಾಮವು ಒತ್ತಡವನ್ನು ಕಡಿಮೆ ಮಾಡುವುದಲ್ಲದೆ, ದೇಹದ ಪ್ರತಿಯೊಂದು ಸಮಸ್ಯೆಯನ್ನು ತೆಗೆದುಹಾಕುತ್ತದೆ. ನೀವು ಮಾನಸಿಕ ತೊಂದರೆಯನ್ನು ಅನುಭವಿಸುತ್ತಿದ್ದರೆ, ತೆರೆದ ಜಾಗದಲ್ಲಿ ಪ್ರತಿದಿನ ಪ್ರಾಣಾಯಾಮ ಮಾಡಿ. ಇದರಿಂದ ನೀವು ಸುಲಭವಾಗಿ ನಿಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.

ಪ್ರತಿದಿನ 2-3 ಲೀಟರ್ ನೀರು ಕುಡಿಯಿರಿ
ನೀವು ಸರಿಯಾದ ಪ್ರಮಾಣದಲ್ಲಿ ನೀರು ಕುಡಿದರೆ ಅರ್ಧದಷ್ಟು ದೈಹಿಕ ಸಮಸ್ಯೆಗಳು ದೂರವಾಗುತ್ತವೆ. ಏಕೆಂದರೆ ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ನೀರು ಪ್ರಮುಖ ಕೊಡುಗೆ ನೀಡುತ್ತದೆ. ನಮ್ಮ ದೇಹಕ್ಕೆ ಶೇಕಡಾ 60 ಕ್ಕಿಂತ ಹೆಚ್ಚು ನೀರಿನ ಅವಶ್ಯಕತೆ ಇದೆ. ಆದ್ದರಿಂದ ದೇಹಕ್ಕೆ ಸಾಕಷ್ಟು ನೀರು ಸಿಗದಿದ್ದರೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೇಹದ ಕಾರ್ಯಚಟುವಟಿಕೆಗಳಿಗೆ ನೀರು ತುಂಬಾ ಅವಶ್ಯಕ.

ದೇಹದಲ್ಲಿ ನೀರಿನ ಕೊರತೆಯಿಂದಲೂ ಮಾನಸಿಕ ಸಮಸ್ಯೆಗಳು ಉದ್ಭವಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ದಿನಕ್ಕೆ 8-10 ಗ್ಲಾಸ್ ನೀರನ್ನು ಕುಡಿಯಬೇಕು. ಇದಲ್ಲದೆ ಒತ್ತಡ ಮತ್ತು ಇತರ ಮಾನಸಿಕ ಸಮಸ್ಯೆಗಳನ್ನು ತಪ್ಪಿಸಲು ಹೆಚ್ಚು ದ್ರವ ರೂಪದ ಆಹಾರ ಸೇವಸಿ. ಉದಾಹರಣೆಗೆ ಎಳನೀರು, ಹಣ್ಣಿನ ಜ್ಯೂಸ್​, ಮಜ್ಜಿಗೆ, ಸೂಪ್ ಇತ್ಯಾದಿಗಳನ್ನು ಕುಡಿಯಿರಿ.

ಇದನ್ನೂ ಓದಿ:
Stress Relieving Foods: ದೈನಂದಿನ ಒತ್ತಡ ನಿವಾರಣೆಗೆ ಈ ಆಹಾರಗಳು ಸಹಾಯಕವಾಗಿದೆ

Health Tips : ಬಿಡುವಿನ ವೇಳೆಯಲ್ಲಿ ಪಾದಗಳಿಗೆ ಬಿಸಿ ನೀರಿನ ಸ್ನಾನ ಮಾಡಿಸಿ: ನಿಮ್ಮ ಒತ್ತಡ ನಿವಾರಣೆಗೂ ಒಳಿತು