Fitness Tips: ಉದ್ಯೋಗಸ್ಥ ಮಹಿಳೆಯರು ಆರೋಗ್ಯಕ್ಕೆ ಸಂಬಂಧಿಸಿದ ಈ ಕೆಲವು ವಿಷಯಗಳನ್ನು ಮರೆಯಲೇಬಾರದು!

ಮಹಿಳೆಯರು ಆರೋಗ್ಯವಾಗಿರಲು ಮತ್ತು ದೈಹಿಕವಾಗಿ ಸದೃಢರಾಗಿರಲು ಕೆಲವು ಸಲಹೆಗಗಳು ಈ ಕೆಳಗಿನಂತಿವೆ. ಇವುಗಳನ್ನು ಪಾಲಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

Fitness Tips: ಉದ್ಯೋಗಸ್ಥ ಮಹಿಳೆಯರು  ಆರೋಗ್ಯಕ್ಕೆ ಸಂಬಂಧಿಸಿದ ಈ ಕೆಲವು ವಿಷಯಗಳನ್ನು ಮರೆಯಲೇಬಾರದು!
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Nov 13, 2021 | 8:34 AM

ಮಹಿಳೆಯರು ಮಾನಸಿಕವಾಗಿ ಮಾತ್ರವಲ್ಲದೇ ದೈಹಿಕವಾಗಿಯೂ ತುಂಬಾ ಆರೋಗ್ಯವಂತರಾಗಿರಬೇಕು. ಅದರಲ್ಲಿಯೂ ಮುಖ್ಯವಾಗಿ ಉದ್ಯೋಗಸ್ಥ ಮಹಿಳೆಯರು ತಮ್ಮ ದೇಹವನ್ನು ಸದೃಢವಾಗಿಡಲು ಸರಿಯಾದ ಆಹಾರ ಮಾತ್ರವಲ್ಲದೇ ನಿಯಮಿತವಾದ ವ್ಯಾಯಾಮ ಅಗತ್ಯವಿರುತ್ತದೆ. ಕೆಲಸದ ಒತ್ತಡ, ಮನೆ ಕೆಲಸ ಜೊತೆಗೆ ಆಫೀಸ್ ಕೆಲಸದಲ್ಲಿಯೂ ತೊಡಗಿಕೊಳ್ಳುವುದರಿಂದ ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಅಂತಹ ಸಮಯದಲ್ಲಿ ಹೆಚ್ಚು ಆಯಾಸ ಮತ್ತು ಬೇಸರಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಮಹಿಳೆಯರು ಆರೋಗ್ಯವಾಗಿರಲು ಮತ್ತು ದೈಹಿಕವಾಗಿ ಸದೃಢರಾಗಿರಲು ಕೆಲವು ಸಲಹೆಗಗಳು ಈ ಕೆಳಗಿನಂತಿವೆ.

*ದೇಹಕ್ಕೆ ಶೇ. 70ರಷ್ಟು ನೀರು ಬೇಕು. ಅದಕ್ಕಾಗಿಯೇ ದಿನದಲ್ಲಿ ಹೆಚ್ಚು ನೀರು ಕುಡಿಯುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ. ಹೆಚ್ಚು ನೀರು ಕುಡಿಯದಿದ್ದರೆ ನಿರ್ಜಲೀಕರಣದ ಸಮಸ್ಯೆ ಕಾಡುತ್ತದೆ. ದೇಹದ ಭಾಗಗಳು ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ. ಅದಕ್ಕಾಗಿಯೇ ನೀವು ದಿನಕ್ಕೆ 2 ರಿಂದ 3 ಲೀಟರ್ ನೀರು ಕುಡಿಯಿರಿ.

*ಹೆಚ್ಚು ಕಾಲ ಕುಳಿತಲ್ಲಿಯೇ ಕುಳಿತು ಕೆಲಸ ಮಾಡುವುದರಿಂದ ದೇಹ ಹೆಚ್ಚು ಒತ್ತಡಕ್ಕೆ ಸಿಲುಕುತ್ತದೆ. ಹಾಗಾಗಿ ಪ್ರತಿ 45 ನಿಮಿಷಕ್ಕೊಮ್ಮೆ ಎದ್ದೇಳುವುದು, ನಡೆಯುವುದು ಅಥವಾ ಜಿಗಿಯುವ ವ್ಯಾಯಾಮದಲ್ಲಿ 5 ನಿಮಿಷ ತೊಡಗಿಕೊಳ್ಳಿ.

*ಬೆಳಿಗ್ಗೆ ಬೇಗ ಎದ್ದು ಅರ್ಧ ಗಂಟೆ ವಾಕಿಂಗ್ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಯೋಗ ಮತ್ತು ಧ್ಯಾನಕ್ಕಾಗಿ ದಿನದ ಸ್ವಲ್ಪ ಸಮಯ ಮೀಸಲಿಡಿ. ಹೀಗೆ ಮಾಡುವುದರಿಂದ ನಿಮ್ಮ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.

*ಕೆಲಸ ಮಾಡುವಾಗ ಹೆಚ್ಚು ಹೊತ್ತು ಖುರ್ಚಿಯಲ್ಲಿ ಕುಳಿತುಕೊಳ್ಳಬೇಡಿ. ಆಗಾಗ ನಡೆಯಿರಿ. ಇದರಿಂದ ನೀವು ಫಿಟ್ ಆಗಿರಲು ಸಹಾಯಕವಾಗುತ್ತದೆ.

*ಇವುಗಳ ಜೊತೆಯಲ್ಲಿ ಪೋಷಕಾಂಶಗಳಿರುವ ಸಮತೋಲಿತ ಆಹಾರವನ್ನು ಸೇವಿಸುವುದು ತುಂಬಾ ಒಳ್ಳೆಯದು. ಮಹಿಳೆಯರಿಗೆ ಕ್ಯಾಲ್ಸಿಯಮ್, ಕಬ್ಬಿಣಾಂಶವಿರುವ ಆಹಾರ ಬಹಳ ಮುಖ್ಯ. ಇವುಗಳನ್ನು ಹೊರತುಪಡಿಸಿ ಹಣ್ಣುಗಳು, ತರಕಾರಿಗಳು, ದ್ವಿದಳ ಧಾನ್ಯಗಳನ್ನು ಸೇವಿಸಿ.

*ಇವುಗಳು ನಿಮ್ಮ ಪ್ರತಿನಿತ್ಯದ ರೂಢಿಯಲ್ಲಿರಲಿ. ಯಾವುದೇ ಕಾರಣಕ್ಕೂ ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ನಿಮ್ಮ ಆರೋಗ್ಯ ಮತ್ತು ದೇಹದ ಸದೃಢತೆ ಬಗ್ಗೆ ಯಾವಾಗಲೂ ಲಕ್ಷ್ಯವಿರಲಿ.

ಇದನ್ನೂ ಓದಿ:

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ

Health Tips: ಪಾರ್ಶ್ವವಾಯುವಿನ ಲಕ್ಷಣ, ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು?

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ