Omega-3: ರೋಗನಿರೋಧಕ ಶಕ್ತಿ ಹೆಚ್ಚಿಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಒಮೆಗಾ-3 ಆಹಾರಗಳ ಬಗ್ಗೆ ತಿಳಿಯಿರಿ

|

Updated on: Jun 22, 2021 | 9:13 AM

ತಜ್ಞರ ಪ್ರಕಾರ, ಒಮೆಗಾ -3 ಕೊಬ್ಬಿನಾಮ್ಲಗಳು ಉತ್ತಮ ಕ್ಯಾಲೊರಿಗಳನ್ನು ನೀಡುತ್ತವೆ. ಜತೆಗೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಶ್ವಾಸಕೋಶದ ಕಾರ್ಯವನ್ನು ಸುಧಾರಿಸುವಲ್ಲಿಯೂ ಒಮೆಗಾ -3 ಮುಖ್ಯವಾಗಿದೆ.

Omega-3: ರೋಗನಿರೋಧಕ ಶಕ್ತಿ ಹೆಚ್ಚಿಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಒಮೆಗಾ-3 ಆಹಾರಗಳ ಬಗ್ಗೆ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Follow us on

ಇತ್ತೀಚಿನ ದಿನಗಳಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಆಹಾರದಲ್ಲಿನ ಏರುಪೇರು, ಹವಾಮಾನ ಬದಲಾವಣೆ ಇತ್ಯಾದಿಗಳಿಂದಾಗಿ ನಾನಾ ರೋಗಗಳು ಸಂಭವಿಸುತ್ತಿವೆ. ಇಷ್ಟೇ ಅಲ್ಲದೇ ಕಳೆದ ವರ್ಷದಿಂದ ಕೊರೊನಾ ಸೋಂಕು ಕಾಡುತ್ತಿದೆ. ಈ ನಿಟ್ಟಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ಸೋಂಕಿನಿಂದ ದೂರವಿರುವ ಪ್ರಯತ್ನದಲ್ಲಿ ಜನರು ನಿರತರಾಗಿದ್ದಾರೆ ಮತ್ತು ವೈದ್ಯಕೀಯ ತಜ್ಞರು ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸೂಚಿಸುತ್ತಿದ್ದಾರೆ. ಹೀಗಾಗಿ ಒಮೆಗಾ -3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ತಜ್ಞರ ಪ್ರಕಾರ, ಒಮೆಗಾ -3 ಕೊಬ್ಬಿನಾಮ್ಲಗಳು ಉತ್ತಮ ಕ್ಯಾಲೊರಿಗಳನ್ನು ನೀಡುತ್ತವೆ. ಜತೆಗೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಶ್ವಾಸಕೋಶದ ಕಾರ್ಯವನ್ನು ಸುಧಾರಿಸುವಲ್ಲಿಯೂ ಒಮೆಗಾ -3 ಮುಖ್ಯವಾಗಿದೆ.

ನಾವು ಆರೋಗ್ಯವಾಗಿದ್ದಾಗ ಮಾತ್ರ ನಮ್ಮ ದೇಹ ಮತ್ತು ಮೆದುಳು ಚೆನ್ನಾಗಿ ಕೆಲಸ ಮಾಡುತ್ತದೆ. ಹೀಗಾಗಿ ಪೋಷಕಾಂಶಯುಕ್ತ ಆಹಾರವನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಒಮೆಗಾ -3 ಸೇವನೆ ಬಹಳ ಮುಖ್ಯ. ಒಮೆಗಾ ಸೇವನೆಯು ನಮ್ಮ ಹೃದಯ, ಚರ್ಮ ಮತ್ತು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ ಒಮೆಗಾ ಹೆಚ್ಚಿರುವ ಆಹಾರ ಪದಾರ್ಥಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಅಗಸೆ ಬೀಜಗಳು
ಅಗಸೆ ಬೀಜಗಳು ಮತ್ತು ಚಿಯಾ ಬೀಜಗಳಲ್ಲಿ ಒಮೆಗಾ -3 ಇರುವುದರಿಂದ ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಈ ಬೀಜಗಳಲ್ಲಿ ಕಬ್ಬಿಣ, ಮೆಗ್ನೀಶಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಇವು ಹೆಚ್ಚಿನ ಕೊಲೆಸ್ಟ್ರಾಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ವಾಲ್ ನಟ್ಸ್​
ವಾಲ್ ನಟ್ಸ್​ನಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು ಅಧಿಕವಾಗಿದೆ. ಇದು ಹೃದಯದ ಕಾರ್ಯಕ್ಕೆ ತುಂಬಾ ಉಪಯುಕ್ತವಾಗಿದ್ದು, ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

ಮೀನು
ಮೀನುಗಳಲ್ಲಿ ಒಮೆಗಾ -3 ಹೆಚ್ಚಾಗಿರುತ್ತದೆ. ಮೀನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಮೀನುಗಳಲ್ಲಿ ಒಮೆಗಾ ಅಧಿಕವಾಗಿದ್ದು, ಮೆಗ್ನೀಶಿಯಮ್ ಸಮೃದ್ಧವಾಗಿದೆ. ಸ್ನಾಯುಗಳ ಪುನರುತ್ಪಾದನೆಗೆ ಇವು ಬಹಳ ಉಪಯುಕ್ತವಾಗಿವೆ. ಜತೆಗೆ ಮೀನುಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ನಿಮ್ಮನ್ನು ಆರೋಗ್ಯವಾಗಿಡುತ್ತವೆ.

ಸೋಯಾಬೀನ್
ಸೋಯಾಬೀನ್ ಒಮೆಗಾ -3 ಅನ್ನು ಹೊಂದಿರುತ್ತದೆ. ಸೋಯಾ ಫೈಬರ್ ಮತ್ತು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಸೋಯಾಬೀನ್ ಸೇವನೆಯು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ರಕ್ಷಿಸುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿರಿಸುತ್ತದೆ.

ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳಲ್ಲಿ ಹೆಚ್ಚಿನ ಕ್ಯಾಲೊರಿಗಳಿವೆ. ಸಾಕಷ್ಟು ಉತ್ಕರ್ಷಣ ನಿರೋಧಕಗಳು ಕೂಡ ಇದರಲ್ಲಿ ಲಭ್ಯವಿದೆ. ಇದು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಉತ್ತಮ ಔಷಧವಾಗಿದೆ. ಅಧಿಕ ರಕ್ತದೊತ್ತಡದಿಂದ ರಕ್ಷಿಸಲು ಬೆರ್ರಿ ಹಣ್ಣುಗಳು ಸಹಾಯಕವಾಗಿದ್ದು, ಒಮೆಗಾ -3 ಅನ್ನು ಹೊಂದಿದೆ.

ಇದನ್ನೂ ಓದಿ:

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

Vitamin C: ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಹೆಚ್ಚು ವಿಟಮಿನ್ ಸಿ ಸೇವಿಸುತ್ತೀರಾ? ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕಾರಕ

Published On - 9:11 am, Tue, 22 June 21