Mental health: ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ಆಹಾರದ ಕ್ರಮ ಹೀಗಿರಲಿ

ಆರೋಗ್ಯಕರ ಆಹಾರ ಸೇವಿಸುವುದರೊಂದಿಗೆ ನಮ್ಮನ್ನು ನಾವು ಅಪಾಯಗಳಿಂದ ದೂರ ಇಡಬಹುದು. ಹಾಗಿದ್ದರೆ ಉತ್ತಮ ಆರೋಗ್ಯಕ್ಕೆ ಯಾವ ಆಹಾರ ಸೇವಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Mental health: ಉತ್ತಮ ಮಾನಸಿಕ ಆರೋಗ್ಯಕ್ಕಾಗಿ ಆಹಾರದ ಕ್ರಮ ಹೀಗಿರಲಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Jan 24, 2022 | 7:04 AM

ಆರೋಗ್ಯಕರ ಆಹಾರವು ನಿಮ್ಮನ್ನು ಫಿಟ್ ಆಗಿರಿಸುತ್ತದೆ. ಅಷ್ಟೇ ಅಲ್ಲದೇ ನಿಮ್ಮಲ್ಲಿನ ರೋಗನಿರೋಧಕ ಶಕ್ತಿಯನ್ನು(Immunity) ಹೆಚ್ಚಿಸುತ್ತದೆ. ಅನಾರೋಗ್ಯಕರ ಮತ್ತು ಸಂಸ್ಕರಿಸಿದ ಆಹಾರವು(Food) ನಮ್ಮಲ್ಲಿನ ಶಕ್ತಿಯನ್ನು ಕುಂದಿಸುತ್ತದೆ. ಜತೆಗೆ ಮಾನಸಿಕವಾಗಿ(Mental Health) ಕುಂದಿಸುತ್ತದೆ. ಅಸ್ವಸ್ಥತೆಗೂ ಕಾರಣವಾಗಬಹುದು. ಆದ್ದರಿಂದ ಜೀವನಶೈಲಿಯಲ್ಲಿನ ಬದಲಾವಣೆ ಬಹಳ ಮುಖ್ಯ. ಆರೋಗ್ಯಕರ ಆಹಾರ ಸೇವಿಸುವುದರೊಂದಿಗೆ ನಮ್ಮನ್ನು ನಾವು ಅಪಾಯಗಳಿಂದ ದೂರ ಇಡಬಹುದು. ಹಾಗಿದ್ದರೆ ಉತ್ತಮ ಆರೋಗ್ಯಕ್ಕೆ ಯಾವ ಆಹಾರ ಸೇವಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಾಲ್​ನಟ್ಸ್​ ವಾಲ್​ನಟ್ಸ್ ಆಲ್ಫಾ-ಲಿನೋಲೆನಿಕ್ ಆಮ್ಲವನ್ನು (ALA), ಸಸ್ಯ ಆಧಾರಿತ ಒಮೆಗಾ-3 ಕೊಬ್ಬಿನಾಮ್ಲವನ್ನು ಹೇರಳವಾಗಿ ಹೊಂದಿರುತ್ತವೆ. ಇದು ಮೆದುಳಿನ ಕೋಶಗಳ ರಚನೆಗೆ ಸಹಾಯ ಮಾಡುತ್ತದೆ. ಜತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಾಲ್​ನಟ್ಸ್ ಸೇವನೆಯು ಕಲಿಕೆ, ಇನ್ನಿತರ ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.

ಪಾಲಕ್ ಸೊಪ್ಪು ಪಾಲಕ್ ಸೊಪ್ಪಿನಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಫೋಲೇಟ್, ವಿಟಮಿನ್ ಇ ಮತ್ತು ಕೆ ಸಮೃದ್ಧವಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಕೂಡ ಇರುವುದರಿಂದ ಇದು ವಯಸ್ಸಾದವರಲ್ಲಿ ಬುದ್ಧಿಮಾಂದ್ಯತೆಯನ್ನು ಕಡಿಮೆ ಮಾಡಲು ಮತ್ತು ಖಿನ್ನತೆ ಹಾಗೂ ನಿದ್ರಾಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮೊಸರು ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಬಿ-12 ಮತ್ತು ಬಿ-2 ನಂತಹ ಪೋಷಕಾಂಶಗಳು ಮೊಸರಿನಲ್ಲಿ ಕಂಡುಬರುತ್ತವೆ. ಇದು ಲ್ಯಾಕ್ಟೋಬಾಸಿಲಸ್ ಅನ್ನು ಸಹ ಹೊಂದಿದೆ. ಕರುಳಿನ ಆರೋಗ್ಯವನ್ನು ಸುಧಾರಿಸಲು ಮತ್ತು ಒತ್ತಡ ಹಾಗೂ ಆತಂಕವನ್ನು ನಿವಾರಿಸಲು ಸಹಾಯ ಮಾಡುವ ಉತ್ತಮ ಬ್ಯಾಕ್ಟೀರಿಯಾ ಮೊಸರಿನಲ್ಲಿದೆ. ಇದು ಮೆದುಳಿನ ಕಾರ್ಯವನ್ನು ಸಹ ಹೆಚ್ಚಿಸುತ್ತದೆ ಅಥವಾ ವೇಗಗೊಳಿಸುತ್ತದೆ.

ಬೆರ್ರಿ ಹಣ್ಣುಗಳು ಬೆರ್ರಿ ಹಣ್ಣುಗಳು ಫ್ಲಾವನಾಲ್​ಗಳನ್ನು ಹೊಂದಿರುತ್ತವೆ. ಇವು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿವೆ. ಅವು ಜೀವಕೋಶದ ಹಾನಿಯನ್ನು ಕಡಿಮೆ ಮಾಡಬಹುದು ಮತ್ತು ಸಮಸ್ಯೆಯನ್ನು ಸರಿಪಡಿಸಬಹುದು. ಅವು ಆಂಥೋಸಯಾನಿನ್‌ಗಳನ್ನು ಸಹ ಒಳಗೊಂಡಿರುತ್ತವೆ. ಇದು ಮೆದುಳಿನ ಜೀವಕೋಶಗಳಲ್ಲಿ ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಸುಧಾರಿಸುತ್ತದೆ.

ಡಾರ್ಕ್ ಚಾಕೊಲೇಟ್ ಇದು ಮೆದುಳಿಗೆ ರಕ್ತದ ಹರಿವನ್ನು ಸುಧಾರಿಸುತ್ತದೆ. ಡಾರ್ಕ್ ಚಾಕೊಲೇಟ್ ಮೆದುಳಿನ ಕಾರ್ಯನಿರ್ವಹಣೆಯನ್ನು ಹೆಚ್ಚಿಸುತ್ತದೆ. ವಯಸ್ಸಾದವರಲ್ಲಿ ನೆನಪಿನ ಶಕ್ತಿ ಕುಸಿತವನ್ನು ತಡೆಗಟ್ಟುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಡಾರ್ಕ್ ಚಾಕೊಲೇಟ್ ಮೂಡ್ ಲಿಫ್ಟರ್ ಆಗಿದೆ. ಉತ್ಕರ್ಷಣ ನಿರೋಧಕಗಳು, ಫ್ಲೇವನಾಯ್ಡ್ಗಳು ಮತ್ತು ಮೆಗ್ನೀಸಿಯಮ್​ ಅನ್ನು ಹೊಂದಿದೆ.

ಇದನ್ನೂ ಓದಿ: Cold Wave Diseases: ತಣ್ಣನೆಯ ಗಾಳಿಯಿಂದ ಆರೋಗ್ಯದಲ್ಲಾಗುತ್ತದೆ ಅನೇಕ ಬದಲಾವಣೆ; ಇರಲಿ ಎಚ್ಚರ

ವ್ಯಾಯಾಮ ಮಾಡುವುದಕ್ಕೆ ಸೋಮಾರಿತನವೇ? ಉತ್ತಮ ಆರೋಗ್ಯಕ್ಕಾಗಿ ಈ ಸರಳ ಮಾರ್ಗವನ್ನು ಅನುಸರಿಸಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್