AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Pregnancy Care: ಸಿಸೇರಿಯನ್ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಗಳನ್ನು ಅನುಸರಿಸಿ

Post C- Section Care: ಸಿಸೇರಿಯನ್ ನಂತರ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಆಹಾರ ಮತ್ತು ಪಾನೀಯದಿಂದ ಹಿಡಿದು ಸರಿಯಾದ ಸಮಯಕ್ಕೆ ನಡೆಯುವ ವರೆಗೆ ಎಲ್ಲವನ್ನೂ ಬಹಳ ಕಟ್ಟುನಿಟ್ಟಾಗಿ ರೂಢಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ನೀವು ಮಾಡುವ ಸಣ್ಣ ತಪ್ಪು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಅದರಲ್ಲಿಯೂ ಸಿಸೇರಿಯನ್ ನಂತರ ಹೆಚ್ಚು ವ್ಯಾಯಾಮ ಮಾಡಬೇಡಿ, ಇದು ನಿಮ್ಮ ಹೊಟ್ಟೆಯ ಮೇಲೆ ಮತ್ತಷ್ಟು ಹೊರೆಯನ್ನುಂಟು ಮಾಡುತ್ತದೆ. ಹಾಗಾದರೆ ಸಿಸೇರಿಯನ್ ನಂತರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೇಗೆ? ಈ ಬಗ್ಗೆ ತಜ್ಞರು ಹೇಳುವುದೇನು ತಿಳಿದುಕೊಳ್ಳಿ.

Post Pregnancy Care: ಸಿಸೇರಿಯನ್ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಗಳನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 20, 2025 | 4:04 PM

Share

ಗರ್ಭಧಾರಣೆ ಪ್ರತಿಯೊಬ್ಬ ಮಹಿಳೆಯ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಈ ಸಮಯದಲ್ಲಿ, ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ಕೆಲವು ಸಮಸ್ಯೆಗಳಿಂದಾಗಿ ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ಸಿಸೇರಿಯನ್ ನಡೆಸಲಾಗುತ್ತದೆ. ಸಾಮಾನ್ಯವಾಗಿ ಸಿ-ಸೆಕ್ಷನ್ ಅಂದರೆ ಸಿಸೇರಿಯನ್ ಹೆರಿಗೆಯ ಬಗ್ಗೆ ನಿಮಗೆಲ್ಲಾ ಗೊತ್ತೇ ಇರುತ್ತೆ. ಇದು ಒಂದು ಪ್ರಮುಖ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆ ಮತ್ತು ಅದರಲ್ಲಿ ಸುಮಾರು 2 ರಿಂದ 3 ಇಂಚು ಉದ್ದದ ಕಟ್ ಮಾಡಲಾಗುತ್ತದೆ. ಚರ್ಮ, ಸ್ನಾಯುಗಳು ಮತ್ತು ಗರ್ಭಾಶಯದ ಎಲ್ಲಾ ಪದರಗಳನ್ನು ಕತ್ತರಿಸಿ ಮಗುವನ್ನು ಹೊರತೆಗೆಯಲಾಗುತ್ತದೆ, ಆದ್ದರಿಂದ ಗಾಯವು ತುಂಬಾ ಆಳವಾಗಿರುತ್ತದೆ. ಹಾಗಾಗಿ ಸಿಸೇರಿಯನ್ ನಂತರ, ಮಹಿಳೆ ತನ್ನ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಈ ಸಮಯದಲ್ಲಿ ಸರಿಯಾದ ಕಾಳಜಿ ವಹಿಸದಿರುವುದು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಹಲವು ರೀತಿಯ ಸಲಹೆಗಳನ್ನು ಅನುಸರಿಸಬೇಕಾಗುತ್ತದೆ.

ಹೆಚ್ಚು ವ್ಯಾಯಾಮ ಮಾಡಬೇಡಿ

ಸಿಸೇರಿಯನ್ ನಂತರ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ಪ್ರತಿನಿತ್ಯ ಸೇವಿಸುವ ಆಹಾರದಲ್ಲಿ ಸರಿಯಾದ ಪೋಷಕಾಂಶಗಳನ್ನು ಸೇರಿಸುವುದು ಬಹಳ ಮುಖ್ಯವಾಗುತ್ತದೆ. ಆಹಾರ ಮತ್ತು ಪಾನೀಯದಿಂದ ಹಿಡಿದು ಸರಿಯಾದ ಸಮಯಕ್ಕೆ ನಡೆಯುವ ವರೆಗೆ ಎಲ್ಲವನ್ನೂ ಬಹಳ ಕಟ್ಟುನಿಟ್ಟಾಗಿ ರೂಢಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ನೀವು ಮಾಡುವ ಸಣ್ಣ ತಪ್ಪು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಅದರಲ್ಲಿಯೂ ಸಿಸೇರಿಯನ್ ನಂತರ ಹೆಚ್ಚು ವ್ಯಾಯಾಮ ಮಾಡಬೇಡಿ, ಇದು ನಿಮ್ಮ ಹೊಟ್ಟೆಯ ಮೇಲೆ ಮತ್ತಷ್ಟು ಹೊರೆಯನ್ನುಂಟು ಮಾಡುತ್ತದೆ. ಹಾಗಾದರೆ ಸಿಸೇರಿಯನ್ ನಂತರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೇಗೆ?ಈ ಬಗ್ಗೆ ತಜ್ಞರು ಹೇಳುವುದೇನು ತಿಳಿದುಕೊಳ್ಳಿ.

ಹೆರಿಗೆಯ ನಂತರ 88 ವಾರಗಳ ವರೆಗೆ ಡಯಟ್ ಮಾಡಬೇಡಿ

ಸಾಮಾನ್ಯವಾಗಿ ಗರ್ಭಧಾರಣೆಯ ನಂತರ ಮಹಿಳೆಯ ದೇಹದಲ್ಲಿ ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ದೇಹದಲ್ಲಿ ಹಾರ್ಮೋನುಗಳ ಅಸಮತೋಲನವು ಕಿರಿಕಿರಿ, ಖಿನ್ನತೆ, ವಿಷಯಗಳನ್ನು ಮರೆಯುವುದು ಮತ್ತು ಆಯಾಸಕ್ಕೆ ಕಾರಣವಾಗಬಹುದು. ಹಾಗಾಗಿ ಸಿಸೇರಿಯನ್ ಮಾಡಿದ ಸುಮಾರು 6 ತಿಂಗಳ ನಂತರ ಮಾತ್ರ ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಯೋಚಿಸಿ. ಅದರ ಮೊದಲು ಜೀವನಶೈಲಿಯಲ್ಲಿ ಅಥವಾ ಆಹಾರದಲ್ಲಿ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಒಳ್ಳೆಯದಲ್ಲ. ಹಾಗಾಗಿ ಹೆರಿಗೆಯ ನಂತರ 88 ವಾರಗಳ ವರೆಗೆ ಡಯಟ್ ಮಾಡಿ ತೂಕ ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಡಿ. ಹಾಗೆ ಮಾಡುವುದರಿಂದ ನಿಮ್ಮ ಆರೋಗ್ಯ ಮತ್ತಷ್ಟು ಹದಗೆಡಬಹುದು.

ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಸಿಸೇರಿಯನ್ ನಂತರ ಆಹಾರದಲ್ಲಿ ಪ್ರೋಟೀನ್ ಮತ್ತು ಜೀವಸತ್ವಗಳನ್ನು ಸೇರಿಸುವುದು ಬಹಳ ಮುಖ್ಯ. ಏಕೆಂದರೆ ಗರ್ಭಧಾರಣೆಯ ನಂತರ ಮಹಿಳೆಯರ ದೇಹ ದುರ್ಬಲಗೊಳ್ಳುತ್ತದೆ. ಮಗುವಿಗೆ ಹಾಲುಣಿಸಲು ಉತ್ತಮ ಆಹಾರ ಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಸಿಸೇರಿಯನ್ ನಂತರ, ಮಹಿಳೆಯರು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹಾಲು, ಮೊಸರು, ಮಾಂಸ, ಮೀನು, ಮೊಟ್ಟೆ ಮತ್ತು ಒಣಗಿದ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ. ಇದಲ್ಲದೆ, ಸಾಕಷ್ಟು ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ಸೇವಿಸಿ. ಹೆರಿಗೆಯ ನಂತರ, ದೇಹಕ್ಕೆ ಸಾಕಷ್ಟು ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಅಗತ್ಯವಿರುತ್ತದೆ. ಅದಕ್ಕಾಗಿ ವೈದ್ಯರ ಸಲಹೆ ಪಡೆದುಕೊಂಡು ಕೆಲವು ವಾರಗಳ ನಂತರ ಹಾಲನ್ನು ಕುಡಿಯಬಹುದು, ಆದರೆ ಮಲಬದ್ಧತೆಗೆ ಕಾರಣವಾಗುವ ಆಹಾರವನ್ನು ತಿನ್ನುವುದನ್ನು ತಪ್ಪಿಸಿ.

ಇದನ್ನೂ ಓದಿ: ಯೂರಿಕ್ ಆಮ್ಲ ಹೆಚ್ಚಾಗದಂತೆ ತಡೆಯಲು ಈ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಯಾವ ರೀತಿಯ ಆಹಾರಗಳಿಂದ ದೂರವಿರಬೇಕು?

ಸಿಸೇರಿಯನ್ ನಂತರ ದೇಹವನ್ನು ಹೈಡ್ರೇಟ್ ಮಾಡುವುದರಿಂದ ಮಲಬದ್ಧತೆ ಸೇರಿದಂತೆ ಹಲವು ಸಮಸ್ಯೆಗಳನ್ನು ತಪ್ಪಿಸಬಹುದು. ಪ್ರತಿದಿನ 8 ಗ್ಲಾಸ್ ನೀರು ಕುಡಿಯಿರಿ ಮತ್ತು ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳು, ಧಾನ್ಯಗಳು, ಬೀಜಗಳು ಮತ್ತು ದ್ವಿದಳ ಧಾನ್ಯಗಳನ್ನು ಸೇವಿಸಿ. ಸಿಸೇರಿಯನ್ ಹೆರಿಗೆಯ ನಂತರ, ಮಹಿಳೆಯರು ಫಾಸ್ಟ್ ಫುಡ್ ಮತ್ತು ಪಿಜ್ಜಾ, ಬರ್ಗರ್, ಚೌಮಿನ್ ನಂತಹ ಜಂಕ್ ಫುಡ್ ಗಳಿಂದ ದೂರವಿರಬೇಕು. ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಿದ ಇತರ ವಸ್ತುಗಳನ್ನು ತಿನ್ನುವುದನ್ನು ಸಹ ತಪ್ಪಿಸಬೇಕು. ಹೆರಿಗೆಯ ನಂತರ ಕನಿಷ್ಠ 6 ತಿಂಗಳ ವರೆಗೆ ವ್ಯಾಯಾಮ ಮಾಡುವುದನ್ನು ತಪ್ಪಿಸಿ. ಲಘು ವಾಕಿಂಗ್ ಮಾಡಬಹುದು, ಜೊತೆಗೆ ಧ್ಯಾನ ಮಾಡಲು ಮರೆಯದಿರಿ. ಯಾವುದೇ ಸಮಸ್ಯೆಗಳಿದ್ದರೆ, ಮೊದಲು ವೈದ್ಯರನ್ನು ಸಂಪರ್ಕಿಸಿ. ಜೊತೆಗೆ ಯಾವುದಾದರೂ ಆಹಾರ ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆದುಕೊಂಡು ಸೇವನೆ ಮಾಡಿ. ಯಾವ ಆಹಾರವನ್ನೇ ಆಗಲಿ ಅತಿಯಾಗಿ ಸೇವನೆ ಮಾಡಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ