AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಂತಿಯರೇ, ಎದೆ ಹಾಲು ಕಡಿಮೆಯಾದಾಗ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಎದೆ ಹಾಲು ಮಗುವಿನ ಆರೋಗ್ಯಕ್ಕೆ ಬಹಳ ಮುಖ್ಯವಾದದ್ದು. ಆದರೆ ಕೆಲವು ಬಾಣಂತಿಯರಿಗೆ ಎದೆಹಾಲಿನ ಪ್ರಮಾಣ ತೀರಾ ಕಡಿಮೆ ಇರುತ್ತದೆ ಅಂತಹ ಸಂದರ್ಭಗಳಲ್ಲಿ ಎದೆ ಹಾಲನ್ನು ಹೆಚ್ಚಿಸಲು ಸಹಾಯ ಮಾಡುವ, ಕೆಲವು ನೈಸರ್ಗಿಕ ಆಹಾರ ಪದಾರ್ಥಗಳನ್ನು ತಾಯಂದಿರು ಸೇವನೆ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಅವು ತಾಯಿಗೆ ಶಕ್ತಿ ನೀಡುವುದಲ್ಲದೆ ಮಗುವಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಆಹಾರಗಳು ಯಾವವು ಇಲ್ಲಿದೆ ಮಾಹಿತಿ.

ಬಾಣಂತಿಯರೇ, ಎದೆ ಹಾಲು ಕಡಿಮೆಯಾದಾಗ ತಪ್ಪದೆ ಈ ಆಹಾರಗಳ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ Image Credit source: Getty Images
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 18, 2025 | 5:34 PM

Share

ಮಗುವಿನ ಆರೋಗ್ಯಕ್ಕೆ ಎದೆ ಹಾಲು (Breast Milk) ಅತ್ಯಗತ್ಯ. ಈ ಹಾಲು (Milk) ಮಗುವಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ತಾಯಿಯ ಹಾಲಿನಲ್ಲಿ ದೇಹಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಶಕ್ತಿ ಸಿಗುವುದರಿಂದ ಮಗುವಿಗೆ ಆರೋಗ್ಯ ಒದಗಿಸುತ್ತವೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ಸೋಂಕು, ಅಲರ್ಜಿ ಸೇರಿದಂತೆ ನಾನಾ ರೀತಿಯ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ. ಆದರೆ ಕೆಲವು ತಾಯಂದಿರಲ್ಲಿ ಬರು ಬರುತ್ತಾ ಎದೆ ಹಾಲಿನ ಪ್ರಮಾಣ ಕಡಿಮೆಯಾಗುತ್ತದೆ. ಇದನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಲು ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಬಹುದು. ಇವುಗಳಿಂದ ಎದೆಹಾಲು ಹೆಚ್ಚಾಗುತ್ತದೆ. ಹಾಗಾದರೆ ತಾಯಂದಿರು ಎದೆಹಾಲನ್ನು ಹೆಚ್ಚಿಸಿಕೊಳ್ಳಲು ಎಂತಹ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಖರ್ಜೂರ

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಖರ್ಜೂರವನ್ನು ಒಂದಿಲ್ಲೊಂದು ಪದಾರ್ಥಗಳಲ್ಲಿ ಬಳಕೆ ಮಾಡುತ್ತಾರೆ. ಇದರಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದ್ದು ಇವುಗಳಲ್ಲಿರುವ ನೈಸರ್ಗಿಕ ಸಕ್ಕರೆ ಅಂಶ ದೇಹಕ್ಕೆ ಬಹಳ ಒಳ್ಳೆಯದು. ಅದಲ್ಲದೆ ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ತಾಯಿಯ ಎದೆಹಾಲಿನ ಉತ್ಪಾದನೆ ಕ್ರಮೇಣ ಹೆಚ್ಚಾಗುತ್ತದೆ.

ಮೆಂತ್ಯ

ನೀವು ಮೆಂತ್ಯ ಬೀಜಗಳನ್ನು ದಿನನಿತ್ಯದ ಅಡುಗೆಯಲ್ಲಿ ಬಳಕೆ ಮಾಡಬಹುದು. ಇವು ತಾಯಿಯ ಹಾಲನ್ನು ನೈಸರ್ಗಿಕವಾಗಿ ಹೆಚ್ಚಿಸಲು ಸಹಕಾರಿ ಯಾಗಿದೆ. ಅದಲ್ಲದೆ ಇವುಗಳಲ್ಲಿ ಫೈಟೊ ಈಸ್ಟ್ರೊಜೆನ್ ಸಮೃದ್ಧವಾಗಿದೆ.

ಇದನ್ನೂ ಓದಿ
Image
ಬೇಸಿಗೆಯಲ್ಲೂ ಬೆಳ್ಳುಳ್ಳಿ ತಿಂತೀರಾ ಜೋಕೆ! ಕಾರಣ ತಿಳಿದರೆ ಬೆಚ್ಚಿ ಬೀಳ್ತಿರಾ
Image
ರೋಗ ನಿರೋಧಕ ಶಕ್ತಿ ಕಡಿಮೆ ಆಗಿರುವುದು ಹೇಗೆ ತಿಳಿಯುತ್ತದೆ?
Image
ಕೀಲು ನೋವಿದ್ದರೆ ಈ ರೀತಿಯ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ
Image
ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಲಗಿಸಿದರೆ ಈ ಸಮಸ್ಯೆ ಬರುವುದಿಲ್ಲ

ಇದನ್ನೂ ಓದಿ: FACT CHECK: ಪ್ರತಿನಿತ್ಯ ಬಿಸಿ ನೀರಿನ ಸ್ನಾನ ಮಾಡಿದರೆ ನಿಮ್ಮ ಪುರುಷತ್ವಕ್ಕೆ ಬೀಳುತ್ತಾ ಪೆಟ್ಟು? ಇಲ್ಲಿದೆ ಸತ್ಯಾಸತ್ಯತೆ

ಓಟ್ಸ್

ಕೆಲವರಿಗೆ ಓಟ್ಸ್ ತಿನ್ನುವ ಅಭ್ಯಾಸ ಇರಬಹುದು. ಆ ಆಹಾರ ದೇಹಕ್ಕೆ ಅಗತ್ಯವಾದ ಕಬ್ಬಿಣವನ್ನು ಒದಗಿಸುತ್ತದೆ. ಇದರಲ್ಲಿ ಫೈಬರ್ ಕೂಡ ಅಧಿಕವಾಗಿರುತ್ತದೆ. ಇವುಗಳ ಸೇವನೆ ಆಯಾಸ ಮತ್ತು ಒತ್ತಡದಂತಹ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತವೆ. ಜೊತೆಗೆ ಎದೆಹಾಲನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿ

ಇದು ಎದೆಹಾಲನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದರ ಸೇವನೆಯಿಂದ ಹಾಲಿನ ರುಚಿ ಕೂಡ ಹೆಚ್ಚಾಗುತ್ತದೆ. ಹಾಗಾಗಿ ಬಾಣಂತಿಯರು ಪ್ರತಿದಿನ ಸ್ವಲ್ಪ ಪ್ರಮಾಣದಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದು ಬಹಳ ಒಳ್ಳೆಯದು.

ಕರಿಬೇವಿನ ಎಲೆ

ಈ ಎಲೆಗಳ ಸೇವನೆ ಮಾಡುವುದರಿಂದ ಹಾಲಿನ ಹರಿವು ಹೆಚ್ಚಾಗುತ್ತದೆ. ಇದು ಜೀರ್ಣಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಜೊತೆಗೆ ಹಾರ್ಮೋನುಗಳನ್ನು ಸಮತೋಲನದಲ್ಲಿಡುತ್ತದೆ. ಹಾಗಾಗಿ ಬಾಣಂತಿಯರು ತಮ್ಮ ಆಹಾರಗಳಲ್ಲಿ ಕರಿಬೇವಿನ ಎಲೆಗಳ ಸೇವನೆ ಮಾಡಬೇಕು.

ಹಾಲು ಹೆಚ್ಚಾಗುವುದಕ್ಕೆ ತಾಯಿ ಸೇವನೆ ಮಾಡುವ ಆಹಾರ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಆಹಾರ ಸೇವನೆ ಮಾಡುವಾಗ ಬಹಳ ಎಚ್ಚರಿಕೆಯಿಂದ ಸೇವನೆ ಮಾಡಿ. ಇಲ್ಲಿ ತಿಳಿಸಿರುವ ಆಹಾರಗಳನ್ನು ಪ್ರತಿನಿತ್ಯ ಸೇವನೆ ಮಾಡಲು ಪ್ರಯತ್ನಿಸಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ