ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Apr 15, 2025 | 5:45 PM

ಇತ್ತೀಚಿನ ದಿನಗಳಲ್ಲಿ ಕೀಲು ನೋವು ಸಾಮಾನ್ಯವಾಗಿ ಪ್ರತಿಯೊಬ್ಬರಲ್ಲಿಯೂ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಆದರೆ ಇವುಗಳನ್ನು ಕಡಿಮೆ ಮಾಡಿಕೊಳ್ಳಲು ಮಾತ್ರೆಗಳ ಮೊರೆ ಹೋಗಬೇಕಾಗಿಲ್ಲ ಬದಲಾಗಿ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ನೈಸರ್ಗಿಕವಾಗಿ ನೋವನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗಾದರೆ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
Image Credit source: Getty Images
Follow us on

ಇತ್ತೀಚಿನ ದಿನಗಳಲ್ಲಿ ಕೀಲು ನೋವು (Joint Pain) ಎಲ್ಲರಲ್ಲಿಯೂ ಕಂಡು ಬರುತ್ತಿದೆ. ಇವುಗಳನ್ನು ಕಡಿಮೆ ಮಾಡಿಕೊಳ್ಳಲು ಮಾತ್ರೆಗಳ ಮೊರೆ ಹೋಗುವ ಬದಲು ನಿಮ್ಮ ಆಹಾರ ಪದ್ಧತಿಯನ್ನು ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಆಗ ಮಾತ್ರ ನೋವು ಮತ್ತು ಊತಗಳನ್ನು ಕಡಿಮೆ ಮಾಡಬಹುದು. ಕೆಲವು ನಿರ್ದಿಷ್ಟ ಆಹಾರ ಪದಾರ್ಥಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಕೀಲುಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಪ್ರತಿನಿತ್ಯ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

  • ಬ್ರೊಕೋಲಿ, ಎಲೆಕೋಸು, ಹೂಕೋಸು ಮುಂತಾದ ತರಕಾರಿಗಳು ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ನಿಯಮಿತವಾಗಿ ನಿಮ್ಮ ಆಹಾರದಲ್ಲಿ ಈ ತರಕಾರಿಗಳನ್ನು ಸೇರಿಸಿಕೊಳ್ಳಿ.
  • ಗ್ರೀನ್ ಟೀಯಲ್ಲಿ ಆಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ. ಇವು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತವೆ. ಇದನ್ನು ಕುಡಿಯುವುದರಿಂದ ಕೀಲು ಉರಿಯೂತ ಕಡಿಮೆ ಮಾಡುವ ಮೂಲಕ ನೋವುಗಳನ್ನು ನಿವಾರಿಸುತ್ತದೆ. ದಿನಕ್ಕೆ ಒಂದು ಬಾರಿ ಇದನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
  • ಆಲಿವ್ ಎಣ್ಣೆಯು ನೈಸರ್ಗಿಕ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಇದರಲ್ಲಿರುವ ಉತ್ತಮ ಕೊಬ್ಬುಗಳು ನಿಮ್ಮ ಆರೋಗ್ಯವನ್ನು ಸುಧಾರಿಸುತ್ತವೆ. ಇದು ಉರಿಯೂತ ನಿವಾರಕ ಗುಣಗಳನ್ನು ಸಹ ಹೊಂದಿದೆ. ಹಾಗಾಗಿ ನೀವು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿ ಆಲಿವ್ ಎಣ್ಣೆಯನ್ನು ಸೇರಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
  • ಅರಿಶಿನದಲ್ಲಿ ಕರ್ಕ್ಯುಮಿನ್ ಎಂಬ ಉರಿಯೂತ ನಿವಾರಕವಿದ್ದು ಇದು ದೇಹದಲ್ಲಿ ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ ನೀವು ಸೇವನೆ ಮಾಡುವ ಆಹಾರದಲ್ಲಿ ಅರಿಶಿನ ಬಳಸುವ ಮೂಲಕ ಕೀಲು ನೋವನ್ನು ಕಡಿಮೆ ಮಾಡಿಕೊಳ್ಳಬಹುದು.
  • ಶುಂಠಿ ನೈಸರ್ಗಿಕವಾಗಿ ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಇದು ಕೀಲು ನೋವನ್ನು ಕಡಿಮೆ ಮಾಡುತ್ತದೆ. ಶುಂಠಿಯನ್ನು ಚಹಾದಲ್ಲಿ ಅಥವಾ ಇನ್ನಿತರ ಆಹಾರಗಳಲ್ಲಿ ಬಳಸುವ ಮೂಲಕ ಇದರ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
  • ಸಾಲ್ಮನ್, ಬಂಗುಡೆ ಮೀನುಗಳು ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿವೆ. ಅವು ದೇಹದಲ್ಲಿನ ಉರಿಯೂತವನ್ನು ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತವೆ. ಈ ಮೀನುಗಳನ್ನು ವಾರಕ್ಕೆ ಎರಡು ಬಾರಿ ತಿನ್ನುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.
  • ಶೇಕಡಾ 70 ಕ್ಕಿಂತ ಹೆಚ್ಚು ಕೋಕೋವನ್ನು ಹೊಂದಿರುವ ಡಾರ್ಕ್ ಚಾಕೊಲೇಟ್ ದೇಹಕ್ಕೆ ಅಗತ್ಯವಾದ ಉತ್ಕರ್ಷಣ ನಿರೋಧಕಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ಇದರ ಮಿತ ಸೇವನೆಯು ಕೀಲುಗಳ ಆರೋಗ್ಯಕ್ಕೆ ಒಳ್ಳೆಯದು. ಆದರೆ ಸಕ್ಕರೆ ಅಂಶ ಕಡಿಮೆ ಇರುವ ಡಾರ್ಕ್ ಚಾಕೊಲೇಟ್ ಅನ್ನು ಆಯ್ಕೆ ಮಾಡುವುದು ಸೂಕ್ತ. ಆದರೆ ಈ ಆಹಾರಗಳ ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳುವುದನ್ನು ಮರೆಯಬೇಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
ಬೇಸಿಗೆಯಲ್ಲಿ ಈಜಾಡಲು ಇಷ್ಟಪಡುವವರು ಈ ವಿಷಯ ಮರೆಯಬೇಡಿ
ಗರ್ಭದಲ್ಲಿರುವ ಮಗು ಸ್ಮಾರ್ಟ್ ಆಗಲು ಈ ರೀತಿ ಮಾಡಿ
ಈ ಮೂರು ಪದಾರ್ಥಗಳನ್ನು ಅಡುಗೆಯಲ್ಲಿ ಬಳಸಿ, ಗ್ಯಾಸ್ಟ್ರಿಕ್ ಸಮಸ್ಯೆ ಬರಲ್ಲ
ಐವಿಎಫ್ ನಲ್ಲಿ ಎಐ ಕೈಚಳಕ! ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ