AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಅಂದ್ರೆ ಮಲಗುವ ಮೊದಲು ಈ ಆಹಾರಗಳನ್ನು ಸೇವನೆ ಮಾಡಬೇಡಿ

ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಒಳ್ಳೆಯ ಆಹಾರ ಮಾತ್ರವಲ್ಲ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ಬಹಳ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ದಿನಗಳಲ್ಲಿ, ಅನೇಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿದ್ರಾಹೀನತೆಯೂ ಒಂದು. ಇದಕ್ಕೆ ನಮ್ಮ ಆಹಾರ ಪದ್ದತಿಯೂ ಕೂಡ ಕಾರಣವಾಗಿರಬಹುದು. ಹಾಗಾಗಿ ಚೆನ್ನಾಗಿ ನಿದ್ರೆ ಮಾಡಲು ರಾತ್ರಿ ಸಮಯದಲ್ಲಿ ಒಳ್ಳೆಯ ಆಹಾರಗಳನ್ನು ಕೂಡ ಸೇವನೆ ಮಾಡಬೇಕಾಗುತ್ತದೆ ಇನ್ನು ಕೆಲವನ್ನು ದೂರವಿಡಬೇಕಾಗುತ್ತದೆ. ಈ ರೀತಿ ಮಾಡಿದಾಗ ಮಾತ್ರ ಆರೋಗ್ಯವೂ ಚೆನ್ನಾಗಿರುತ್ತದೆ ಜೊತೆಗೆ ನಿದ್ರೆಯೂ ಚೆನ್ನಾಗಿ ಬರುತ್ತೆ. ಹಾಗಾದರೆ ರಾತ್ರಿ ಸಮಯದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಅಂದ್ರೆ ಮಲಗುವ ಮೊದಲು ಈ ಆಹಾರಗಳನ್ನು ಸೇವನೆ ಮಾಡಬೇಡಿ
Sleepless Nights
ಪ್ರೀತಿ ಭಟ್​, ಗುಣವಂತೆ
|

Updated on: Jul 22, 2025 | 5:00 PM

Share

ಪ್ರತಿನಿತ್ಯ ಆರೋಗ್ಯಕರ ಆಹಾರ ಸೇವಿಸುವುದು ಮಾತ್ರವಲ್ಲ, ಚೆನ್ನಾಗಿ ನಿದ್ರೆ (Sleep) ಮಾಡುವುದು ಕೂಡ ವ್ಯಕ್ತಿ ಆರೋಗ್ಯವಾಗಿರುವುದಕ್ಕೆ ಮುಖ್ಯವಾಗುತ್ತದೆ. ಆದರೆ ಪ್ರಸ್ತುತ ಸಮಯದಲ್ಲಿ, ಅನೇಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ನಿದ್ರಾಹೀನತೆಯೂ ಒಂದು. ಒಬ್ಬ ವ್ಯಕ್ತಿ ನಿರ್ದಿಷ್ಟ ಸಮಯಕ್ಕಿಂತ ಕಡಿಮೆ ಗಂಟೆಗಳ ಕಾಲ ನಿದ್ರೆ ಮಾಡಿದರೆ, ವಿವಿಧ ಆರೋಗ್ಯ (Health) ಸಮಸ್ಯೆಗಳು ಉದ್ಭವಿಸಬಹುದು. ಈ ರೀತಿ ಸಮಸ್ಯೆ ಉದ್ಭವ ಆಗುವುದಕ್ಕೆ ನಿಮ್ಮ ಆಹಾರ ಪದ್ಧತಿಯೂ ಕಾರಣವಾಗಬಹುದು. ಆದ್ದರಿಂದ, ಕಣ್ಣತುಂಬಾ ಒಳ್ಳೆಯ ನಿದ್ರೆ ಮಾಡಬೇಕು ಅಂದ್ರೆ ಮಲಗುವ ಮೊದಲು ಕೆಲವು ಆಹಾರಗಳಿಂದ ದೂರವಿರಿ ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಆ ಆಹಾರಗಳು ಯಾವುವು? ಯಾಕೆ ಮಲಗುವ ಮೊದಲು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳಿ.

ಮಾಂಸಾಹಾರ:

ಕೊಬ್ಬು ಮತ್ತು ಪ್ರೋಟೀನ್‌ಗಳು ಮಾಂಸಾಹಾರದಲ್ಲಿ ಹೇರಳವಾಗಿರುತ್ತದೆ. ಇದು ಜೀರ್ಣವಾಗಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಅದಕ್ಕಾಗಿಯೇ ರಾತ್ರಿ ಸಮಯದಲ್ಲಿ ಅಪ್ಪಿತಪ್ಪಿಯೂ ಮಾಂಸಾಹಾರಗಳ ಸೇವನೆ ಮಾಡಬೇಡಿ. ಎಷ್ಟೇ ಇಷ್ಟವಾದ ಆಹಾರವಾಗಿದ್ದರೂ ಅವುಗಳಿಂದ ದೂರವಿರುವುದು ಉತ್ತಮ.

ಮಸಾಲೆಯುಕ್ತ ಆಹಾರ:

ಯಾವುದೇ ಸಮಯವಾಗಿರಲಿ ಮಸಾಲೆಯುಕ್ತ ಆಹಾರ ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಅದರಲ್ಲಿಯೂ ರಾತ್ರಿ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತಷ್ಟು ಕಷ್ಟಕರವಾಗಬಹುದು. ಇದು ಆಮ್ಲೀಯತೆಯ ಸಮಸ್ಯೆಗಳಿಗೂ ಕಾರಣವಾಗಬಹುದು.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಇದನ್ನೂ ಓದಿ: ರಾತ್ರಿ ಮಲಗುವ ಮೊದಲು ಈ ಕೆಲಸಗಳನ್ನು ಮಾಡಬಾರದು ಎನ್ನುತ್ತಾರೆ ಡಾ. ಸೌರಭ್ ಸೇಥಿ

ಕಾಫಿ ಅಥವಾ ಚಹಾ:

ಊಟದ ನಂತರ ಕಾಫಿ ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಆದರೆ, ಕಾಫಿಯಲ್ಲಿ ಹೆಚ್ಚಿನ ಕೆಫೀನ್ ಅಂಶ ಇರುವುದರಿಂದ ಇದು ನಿದ್ರಾಹೀನತೆಗೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಸಂಜೆ ನಂತರ ಕಾಫಿ ಕುಡಿಯುವುದು ಒಳ್ಳೆಯದಲ್ಲ. ಕೆಲವರು ರಾತ್ರಿ ಊಟ ಮಾಡಿದ ನಂತರ ಚಹಾ ಕುಡಿಯುತ್ತಾರೆ. ಕಾಫಿಯಂತೆಯೇ, ಚಹಾ ಎಲೆಗಳಲ್ಲಿಯೂ ಕೆಫೀನ್ ಅಂಶವಿರುತ್ತದೆ. ಹಾಗಾಗಿ ಮಲಗುವ ಮುನ್ನ ಚಹಾ ಸೇವಿಸುವುದರಿಂದ ನಿದ್ರೆಯ ಮೇಲೆ ಪರಿಣಾಮ ಬೀರಬಹುದು.

ಜಂಕ್ ಫುಡ್:

ಜಂಕ್ ಫುಡ್ ನಲ್ಲಿ ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬಿನ ಅಂಶ ಇರುತ್ತದೆ. ಇಂತಹ ಆಹಾರಗಳು ಬೇಗನೆ ಜೀರ್ಣವಾಗುವುದಿಲ್ಲ. ಹಾಗಾಗಿ ರಾತ್ರಿ ಸಮಯದಲ್ಲಿ ಜಂಕ್ ಫುಡ್ ತಿನ್ನುವುದರಿಂದ ನಿದ್ರೆ ಸರಿಯಾಗಿ ಆಗುವುದಿಲ್ಲ. ಮಾತ್ರವಲ್ಲ ಈ ರೀತಿಯ ಆಹಾರಗಳು ಇತರ ಹಲವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ