AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gastric Symptoms: ಗ್ಯಾಸ್ಟ್ರಿಕ್​ನ ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ!

Acidity Home Remedies: ಸರಿಯಾದ ಜೀರ್ಣಕ್ರಿಯೆಗೆ ಸಹಾಯ ಮಾಡಲು ಆಹಾರದ ಜೀರ್ಣಕ್ರಿಯೆಗಾಗಿ ಹೊಟ್ಟೆಯಲ್ಲಿ ಆಮ್ಲ ರೂಪುಗೊಳ್ಳುತ್ತದೆ. ಕೆಲವೊಮ್ಮೆ, ಜೀರ್ಣಕ್ರಿಯೆಗೆ ಅಗತ್ಯವಿಲ್ಲದ ಆಮ್ಲ ಹೊಟ್ಟೆಯಲ್ಲಿ ಉಳಿಯುತ್ತದೆ. ಇದು ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ. ಗ್ಯಾಸ್ಟ್ರಿಕ್ ನಿವಾರಿಸಲು ಈ ಮನೆಮದ್ದುಗಳನ್ನು ನೀವು ಬಳಸಬಹುದು.

Gastric Symptoms: ಗ್ಯಾಸ್ಟ್ರಿಕ್​ನ ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ!
ಗ್ಯಾಸ್ಟ್ರಿಕ್Image Credit source: iStock
ಸುಷ್ಮಾ ಚಕ್ರೆ
|

Updated on: Nov 07, 2023 | 6:55 PM

Share

ಗ್ಯಾಸ್ಟ್ರಿಕ್ ಪ್ರತಿಯೊಬ್ಬರನ್ನೂ ಆಗಾಗ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ನಾವು ತಿನ್ನುವ ಆಹಾರ, ನಮ್ಮ ಜೀವನಶೈಲಿ ಕೂಡ ಗ್ಯಾಸ್ಟ್ರಿಕ್ ಉಂಟಾಗಲು ಕಾರಣವಾಗುತ್ತದೆ. ನೀವು ತಿನ್ನುವಾಗ ಆಹಾರವು ಅನ್ನನಾಳದ ಮೂಲಕ ಹೊಟ್ಟೆಗೆ ಹೋಗುತ್ತದೆ. ಸರಿಯಾದ ಜೀರ್ಣಕ್ರಿಯೆಗೆ ಸಹಾಯ ಮಾಡಲು ಆಹಾರದ ಜೀರ್ಣಕ್ರಿಯೆಗಾಗಿ ಹೊಟ್ಟೆಯಲ್ಲಿ ಆಮ್ಲ ರೂಪುಗೊಳ್ಳುತ್ತದೆ. ಕೆಲವೊಮ್ಮೆ, ಜೀರ್ಣಕ್ರಿಯೆಗೆ ಅಗತ್ಯವಿಲ್ಲದ ಆಮ್ಲ ಹೊಟ್ಟೆಯಲ್ಲಿ ಉಳಿಯುತ್ತದೆ. ಇದು ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ. ಜನರು ಸಾಕಷ್ಟು ನೀರು ಕುಡಿಯದಿರುವುದರಿಂದ ಮತ್ತು ಫೈಬರ್ ಭರಿತ ಆಹಾರವನ್ನು ಸೇವಿಸದಿರುವುದರಿಂದಲೂ ಗ್ಯಾಸ್ಟ್ರಿಕ್ ತೊಂದರೆ ಹೆಚ್ಚಾಗುತ್ತದೆ.

ಗ್ಯಾಸ್ಟ್ರಿಕ್ ಸಮಸ್ಯೆಯ ಲಕ್ಷಣಗಳೇನು?:

– ಹೊಟ್ಟೆಯ ಮೇಲ್ಭಾಗದಲ್ಲಿ ನೋವು

– ಹೊಟ್ಟೆ ಉಬ್ಬುವುದು

– ಪದೇಪದೆ ತೇಗು ಬರುವುದು

– ಸದಾ ಹೊಟ್ಟೆ ಭಾರವಾದ ಅಥವಾ ತುಂಬಿದ ಭಾವ

– ಹೊಟ್ಟೆಯಲ್ಲಿ ಸುಡುವ ಅನುಭವ

– ಎದೆಯುರಿ

– ಮಲಬದ್ಧತೆ

– ವಾಕರಿಕೆ

– ಅಜೀರ್ಣ

ಇದನ್ನೂ ಓದಿ: ಬೆಲ್ಲ ತಿನ್ನುವುದರಿಂದಲೂ ಹೊಟ್ಟೆಯ ಕೊಬ್ಬು ಕರಗಿಸಬಹುದು ಗೊತ್ತೇ?

ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಕೆಳಗಿನ ಕೆಲವು ಮನೆಮದ್ದುಗಳನ್ನು ಬಳಸಬಹುದು.

– ನಿಂಬೆಹಣ್ಣು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು ಅದು ಗ್ಯಾಸ್ಟ್ರಿಕ್ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಒಂದು ಲೋಟ ನೀರಿಗೆ ಅರ್ಧ ನಿಂಬೆಯನ್ನು ಬೆರೆಸಿ ಕುಡಿಯಿರಿ. ನೀವು ಇದನ್ನು ದಿನಕ್ಕೆ ಒಂದು ಅಥವಾ ಎರಡು ಬಾರಿ ಮಾಡಬಹುದು.

– ಮೊಸರು ಆರೋಗ್ಯಕರ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರ ಇಡುತ್ತದೆ.

– ಜೀರಿಗೆ ನೀರು ಆಂಟಿಸ್ಪಾಸ್ಮೊಡಿಕ್ ಪರಿಣಾಮಗಳನ್ನು ಹೊಂದಿದ್ದು ಅದು ಕಿಬ್ಬೊಟ್ಟೆಯ ಸ್ನಾಯುಗಳ ಸಂಕೋಚನಕ್ಕೆ ಸಹಾಯ ಮಾಡುತ್ತದೆ. ಅಲ್ಲದೆ, ಜೀರ್ಣಕಾರಿ ರಸದ ಬಿಡುಗಡೆಯನ್ನು ಹೆಚ್ಚಿಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

– ಇಂಗು ಕರುಳಿನಲ್ಲಿ ಮೇದೋಜ್ಜೀರಕ ಗ್ರಂಥಿ, ಗ್ಯಾಸ್ಟ್ರಿಕ್ ಮತ್ತು ಲಾಲಾರಸದ ರಸವನ್ನು ಸ್ರವಿಸಲು ಸಹಾಯ ಮಾಡುತ್ತದೆ. ಇದು ಹೊಟ್ಟೆ ಉಬ್ಬರಿಸುವುದು ಮತ್ತು ಗ್ಯಾಸ್ ಮುಂತಾದ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

– ಸೋಂಪು ಜೀವಸತ್ವಗಳು, ಖನಿಜಗಳು ಮತ್ತು ಫೈಬರ್​ಗಳ ಸಂಯೋಜನೆಯಾಗಿದ್ದು, ಒಟ್ಟಾರೆ ಜೀರ್ಣಕ್ರಿಯೆಯ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತದೆ. ಇದು ಗರ್ಭಿಣಿಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಗ್ಯಾಸ್ಟ್ರಿಕ್ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ.

ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಲು ದಿನವೂ ಈ ಅಭ್ಯಾಸ ರೂಢಿಸಿಕೊಳ್ಳಿ

– ತಾಜಾ ಶುಂಠಿ ಕೆಮ್ಮು ಮತ್ತು ಶೀತಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಹಾಗೇ, ಅಜೀರ್ಣ ಸಮಸ್ಯೆಗಳಿಗೆ ಸಹ ಒಳ್ಳೆಯದು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಆಮ್ಲೀಯತೆಯ ಲಕ್ಷಣಗಳಾದ ವಾಕರಿಕೆಯನ್ನು ಕಡಿಮೆ ಮಾಡುತ್ತದೆ.

– ಲೋಳೆಸರ ಗ್ಯಾಸ್ಟ್ರೊಪ್ರೊಟೆಕ್ಟಿವ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಗ್ಯಾಸ್ಟ್ರಿಕ್ ಆಮ್ಲವನ್ನು ಸ್ರವಿಸುತ್ತದೆ.

– ಎಳನೀರು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಗೆ ಉತ್ತಮ ಪಾನೀಯವಾಗಿದೆ. ನಿಯಮಿತವಾಗಿ ಎಳನೀರನ್ನು ಕುಡಿಯುವುದು ದೇಹದಲ್ಲಿ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

– ದಾಲ್ಚಿನ್ನಿ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಬಹಳಷ್ಟು ಜನರು ಇದನ್ನು ತೂಕ ಇಳಿಸಲು ಆಹಾರದಲ್ಲಿ ಸೇರಿಸುತ್ತಾರೆ.

– ಬೆಳ್ಳುಳ್ಳಿ ಎಸಳುಗಳನ್ನು ನಿಯಮಿತವಾಗಿ ತಿನ್ನುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದರಿಂದಾಗಿ ಅತಿಸಾರದಂತಹ ಗ್ಯಾಸ್ಟ್ರಿಕ್ ಸಮಸ್ಯೆಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

– ಬಾಳೆಹಣ್ಣಿನಲ್ಲಿ ಫೈಬರ್ ಸಮೃದ್ಧವಾಗಿದೆ. ಬಾಳೆಹಣ್ಣನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಅಜೀರ್ಣದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ