AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಚಿಕ್ಕ ವಯಸ್ಸಿನಲ್ಲೇ ಕಾಡುವ ಸಂಧಿವಾತ ಸಮಸ್ಯೆಯನ್ನು ನಿವಾರಿಸುವುದು ಹೇಗೆ?

ಸಂಧಿವಾತಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ. ಉದಾಹರಣೆಗೆ ಮಾಂಸ, ಮದ್ಯ ಮತ್ತು ಫ್ರಕ್ಟೋಸ್ ಭರಿತ ಪಾನೀಯಗಳನ್ನು ಸೇವಿಸುವುದು. ಇದಲ್ಲದೆ, ನಮ್ಮ ದೇಹದಲ್ಲಿನ ಚಯಾಪಚಯ ಅಸ್ವಸ್ಥತೆಗಳು ಮತ್ತು ಸ್ಥೂಲಕಾಯತೆಯಿಂದ ಸಂಧಿವಾತ ಉಂಟಾಗುತ್ತದೆ.

Health News: ಚಿಕ್ಕ ವಯಸ್ಸಿನಲ್ಲೇ ಕಾಡುವ ಸಂಧಿವಾತ ಸಮಸ್ಯೆಯನ್ನು ನಿವಾರಿಸುವುದು ಹೇಗೆ?
ಅಕ್ಷತಾ ವರ್ಕಾಡಿ
|

Updated on:Aug 04, 2024 | 7:22 PM

Share

ಹಿಂದೆ, ವಯಸ್ಸಾದವರಲ್ಲಿ ಸಂಧಿವಾತವು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಯುವಜನತೆ ಕೂಡ ಸಂಧಿವಾತ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಉಲ್ಬಣಗೊಳ್ಳುತ್ತದೆ. ಸಮಸ್ಯೆ ನಿವಾರನೆಯಲ್ಲಿ ಜೀವನಶೈಲಿ ಮತ್ತು ಆಹಾರಕ್ರಮವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂಧಿವಾತಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ. ಉದಾಹರಣೆಗೆ ದೊಡ್ಡ ಪ್ರಮಾಣದಲ್ಲಿ ಮಾಂಸ, ಮದ್ಯ ಮತ್ತು ಫ್ರಕ್ಟೋಸ್ ಭರಿತ ಪಾನೀಯಗಳನ್ನು ಸೇವಿಸುವುದು. ಇದಲ್ಲದೆ, ನಮ್ಮ ದೇಹದಲ್ಲಿನ ಚಯಾಪಚಯ ಅಸ್ವಸ್ಥತೆಗಳು ಮತ್ತು ಸ್ಥೂಲಕಾಯತೆಯಿಂದ ಸಂಧಿವಾತ ಉಂಟಾಗುತ್ತದೆ.

ತಜ್ಞರ ಪ್ರಕಾರ, ದೇಹದಲ್ಲಿ ಆಮ್ಲದ ಪ್ರಮಾಣ ಹೆಚ್ಚಾದಾಗ ಸಂಧಿವಾತವು ನೋವನ್ನು ಉಂಟುಮಾಡುತ್ತದೆ. ಆದ್ದರಿಂದ ದೇಹದ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುವುದು ಬಹಳ ಮುಖ್ಯ.

ಒಮೇಗಾ 3:

ಮೀನು ಮತ್ತು ಮೀನಿನ ಎಣ್ಣೆಯಲ್ಲಿ ಕಂಡುಬರುವ ಒಮೆಗಾ -3 ಕೊಬ್ಬಿನಾಮ್ಲಗಳು ಸಂಧಿವಾತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹಣ್ಣು ಮತ್ತು ತರಕಾರಿ, ಧಾನ್ಯಗಳು, ಕಡಿಮೆ-ಕೊಬ್ಬಿನ ಡೈರಿ ಉತ್ಪನ್ನಗಳು, ಮೀನು ಮತ್ತು ಟರ್ಕಿ ಮತ್ತು ಹಂದಿಮಾಂಸದಂತಹ ನೇರ ಮಾಂಸಗಳಲ್ಲಿ ಸಮೃದ್ಧವಾಗಿರುವ ಆಹಾರವು ಸಂಧಿವಾತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಶುಂಠಿ:

ಸಂಧಿವಾತ ಸಮಸ್ಯೆಗಳಿಗೂ ಶುಂಠಿ ಅತ್ಯುತ್ತಮ ಪರಿಹಾರವಾಗಿದೆ. ಶುಂಠಿಯು ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿದೆ. ಕೀಲು ನೋವಿಗೆ ಶುಂಠಿ ಟೀ ತೆಗೆದುಕೊಳ್ಳುವುದರ ಜೊತೆಗೆ ಶುಂಠಿಯನ್ನು ರುಬ್ಬಿ ಊತ-ನೋವು ಇರುವ ಜಾಗಕ್ಕೆ ಹಚ್ಚಿದರೆ ಉತ್ತಮ ಉಪಶಮನ ದೊರೆಯುತ್ತದೆ. ಶುಂಠಿ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಹಣ್ಣು ಸೇವನೆ ಮಾಡಿ ಎಲ್ಲಾ ಕಾಯಿಲೆಗೂ ಗುಡ್ ಬೈ ಹೇಳಿ

ವ್ಯಾಯಾಮ:

ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರು ವ್ಯಾಯಾಮವನ್ನು ರೂಢಿಸಿಕೊಳ್ಳಬೇಕು. ಲಘು ಜಿಗಿತ, ನಡಿಗೆ, ನಿಧಾನವಾಗಿ ಓಡುವುದು ಸ್ನಾಯುಗಳನ್ನು ಬಲಪಡಿಸುತ್ತದೆ. ಈ ರೀತಿಯ ವ್ಯಾಯಾಮವನ್ನು ಮಾಡುವುದರಿಂದ ನೀವು ಶಕ್ತಿಯನ್ನು ಪಡೆಯುವ ಮೂಲಕ ಈ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 pm, Sun, 4 August 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ