ಶುಂಠಿಯ ಈ ಅದ್ಭುತ ಗುಣಗಳು ನಿಮ್ಮ ಆರೋಗ್ಯವನ್ನು ಕಾಪಾಡಲು ಸಹಕಾರಿ

ಶುಂಠಿ ಹಲವಾರು ಗುಣಲಕ್ಷಣಗಳನ್ನು ಹೊಂದಿರುವ ನೈಸರ್ಗಿಕ ಔಷಧ ಎಂದು ನಿಮಗೆ ತಿಳಿದಿದೆಯೇ? ಹೊಟ್ಟೆ ನೋವಿನಿಂದ ಹಿಡಿದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವವರೆಗೆ, ಶುಂಠಿಯ ಪ್ರಯೋಜನಗಳನ್ನು ತಿಳಿದುಕೊಳ್ಳಿ.

ಶುಂಠಿಯ ಈ ಅದ್ಭುತ ಗುಣಗಳು ನಿಮ್ಮ ಆರೋಗ್ಯವನ್ನು ಕಾಪಾಡಲು ಸಹಕಾರಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 12, 2023 | 6:42 PM

ಭಾರತೀಯ ಅಡುಗೆ ಮನೆಯು ಅತ್ಯುತ್ತಮ ಪೋಷಕಾಂಶಗಳಿಂದ ತುಂಬಿರುವ ಅತ್ಯುತ್ತಮ ಪದಾರ್ಥಗಳ ಭಂಡಾರವಾಗಿದೆ. ಅವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಅದೇ ರೀತಿ ನಿಮ್ಮ ಒಟ್ಟಾರೆ ಯೋಗಕ್ಷೇಮ ಕಾಪಾಡಿಕೊಳ್ಳುವಲ್ಲಿ ಶತಮಾನಗಳಷ್ಟು ಹಳೆಯ ಪರಿಹಾರವೆಂದರೆ ಅದು ಶುಂಠಿಏ ಸರಿ. ಈ ಬೇರು ಹಲವು ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರವಾಗಿದೆ. ಹೊಟ್ಟೆ ನೋವಿನಿಂದ ಹಿಡಿದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವವರೆಗೆ, ಶುಂಠಿಯ ಪ್ರಯೋಜನಗಳನ್ನು ತಿಳಿದುಕೊಳ್ಳಲೇಬೇಕಾಗಿದೆ.

ಶುಂಠಿ ಜಿಂಗಿಬೆರೇಸಿ ಕುಟುಂಬಕ್ಕೆ ಸೇರಿದ ಒಂದು ರೀತಿಯ ಸಸ್ಯವಾಗಿದೆ, ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಜೊತೆಗೆ ಬಲವಾದ ಪರಿಮಳವನ್ನು ಸಹ ಹೊಂದಿದೆ. ಶುಂಠಿಯ ಬೇರನ್ನು ತಾಜಾ ಮತ್ತು ಒಣಗಿದ ರೂಪಗಳಲ್ಲಿ ಅಡುಗೆ ಮತ್ತು ಔಷಧಿಯಲ್ಲಿ ಬಳಸಲಾಗುತ್ತದೆ. ಅಲ್ಲದೆ ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಶುಂಠಿಯ ಆರೋಗ್ಯ ಪ್ರಯೋಜನಗಳೇನು?

1. ಶುಂಠಿಯಲ್ಲಿ ಉರಿಯೂತ ನಿವಾರಕ ಗುಣಗಳಿವೆ: ಶುಂಠಿಯಲ್ಲಿ ಜಿಂಜರಾಲ್ ನಂತಹ ಸಕ್ರಿಯ ಸಂಯುಕ್ತಗಳಿವೆ, ಇದು ಉರಿಯೂತದ ನಿವಾರಕವಾಗಿ ಕೆಲಸ ಮಾಡುತ್ತದೆ. ಮಾಲಿಕ್ಯೂಲ್ಸ್ ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನವು ಶುಂಠಿಯಲ್ಲಿ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿವೆ ಎಂದು ಕಂಡು ಹಿಡಿದಿದೆ. ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಆಸ್ಟಿಯೋಆರ್ಥ್ರೈಟಿಸ್ ನಂತಹ ಪರಿಸ್ಥಿತಿಗಳಿಂದ ಪರಿಹಾರವನ್ನು ನೀಡುತ್ತದೆ.

2. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ನೀವು ಇತ್ತೀಚೆಗೆ ಅಜೀರ್ಣ ಸಮಸ್ಯೆಗಳನ್ನು ಎದುರಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸಬಹುದು. ಕರುಳಿನ ಸಮಸ್ಯೆಗಳಿಗೆ ಪರಿಹಾರವಾಗಿ ಶುಂಠಿಯನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ ಎಂದು ಅಧ್ಯಯನಗಳು ತೋರಿಸಿವೆ. ಒಬ್ಬ ವ್ಯಕ್ತಿಯು ಆಹಾರವನ್ನು ಜೀರ್ಣಿಸಿಕೊಳ್ಳಲು ತೆಗೆದುಕೊಳ್ಳುವ ಸಮಯದ ಮೇಲೆ ಶುಂಠಿ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ನಿಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸುವುದರಿಂದ ಹೊಟ್ಟೆ ನೋವು, ಉಬ್ಬರ, ತುಂಬಾ ಹೊಟ್ಟೆ ತುಂಬಿದ ಅನುಭವ, ವಾಕರಿಕೆ ಮತ್ತು ಕಿರಿಕಿರಿಯ ಕರುಳಿನ ಸಿಂಡ್ರೋಮ್ (ಐಬಿಎಸ್) ನಂತಹ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ.

3. ಮುಟ್ಟಿನ ನೋವನ್ನು ನಿವಾರಿಸುತ್ತದೆ: ಅನಿಯಮಿತ ಋತುಚಕ್ರಗಳಲ್ಲಿ ನೋವು ಸಾಮಾನ್ಯವಾಗಿರಬಹುದು, ಜೊತೆಗೆ ಎಂಡೊಮೆಟ್ರಿಯಾಸಿಸ್ ನಂತಹ ಕೆಲವು ವೈದ್ಯಕೀಯ ಪರಿಸ್ಥಿತಿಗಳು ಸಹ ಈ ಸಮಸ್ಯೆಗೆ ಕಾರಣವಾಗಬಹುದು. ಜೊತೆಗೆ ಅತಿಯಾದ ನೋವು ಡಿಸ್ಮೆನೋರಿಯಾ ಎಂಬ ಸ್ಥಿತಿಯಿಂದಾಗಿರಬಹುದು. ತೈವಾನ್ ಜರ್ನಲ್ ಆಫ್ ಅಬ್ಸ್ಟೆಟ್ರಿಕ್ಸ್ ಅಂಡ್ ಗೈನೆಕಾಲಜಿಯಲ್ಲಿ ಪ್ರಕಟವಾದ ಅಧ್ಯಯನ ಸೇರಿದಂತೆ ಹಲವಾರು ಅಧ್ಯಯನಗಳು ಶುಂಠಿ ಡಿಸ್ಮೆನೋರಿಯಾವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಕಂಡು ಹಿಡಿದಿದೆ.

ಇದನ್ನೂ ಓದಿ: ಮನೆಯಲ್ಲಿಯೇ ಸುಲಭವಾಗಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವುದು ಹೇಗೆ? ಇಲ್ಲಿದೆ ಸುಲಭ ತಂತ್ರ

4. ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ: ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ರೋಗಗಳನ್ನು ದೂರವಿಡಲು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಉತ್ತಮ. ಜರ್ನಲ್ ಆಫ್ ನ್ಯೂಟ್ರಿಷನ್ನಲ್ಲಿ ಪ್ರಕಟವಾದ ಅಧ್ಯಯನವು ಶುಂಠಿಯಲ್ಲಿ ಎಲ್ಡಿಎಲ್ “ಕೆಟ್ಟ” ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಗುಣಗಳಿವೆ ಎಂದು ಕಂಡು ಹಿಡಿದಿದೆ. ಆದರೆ ನೀವು ಹೆಚ್ಚಿನ ಪ್ರಮಾಣದ ಶುಂಠಿಯನ್ನು ಸೇವಿಸುವುದನ್ನು ತಪ್ಪಿಸಬೇಕು.

5. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ: ಶುಂಠಿಯಲ್ಲಿ ಮಧುಮೇಹ ವಿರೋಧಿ ಗುಣಗಳು ಸಹ ಇದೆ. ಅದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇರಾನಿನ ಜರ್ನಲ್ ಆಫ್ ಫಾರ್ಮಾಸ್ಯುಟಿಕಲ್ ರಿಸರ್ಚ್ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿದಿನ ಶುಂಠಿಯನ್ನು ಸೇವಿಸುವ ಟೈಪ್ 2 ಮಧುಮೇಹ ಹೊಂದಿರುವ ಜನರು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಗಮನಾರ್ಹ ಇಳಿಕೆಯನ್ನು ಗಮನಿಸಿದ್ದಾರೆ. ಶುಂಠಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಮತ್ತು ಮಧುಮೇಹಕ್ಕೆ ಸಂಬಂಧಿಸಿದ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿ ಕೊಟ್ಟಿವೆ.

6. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ: ನಿಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಹೃದಯರಕ್ತನಾಳದ ಕಾಯಿಲೆಯನ್ನು ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಶುಂಠಿ ತಿನ್ನುವುದರಿಂದ ನಿಮ್ಮ ಹೃದಯದ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳು ತೋರಿಸಿದ್ದರೂ, ಈ ಪರಿಣಾಮಗಳನ್ನು ದೃಢೀಕರಿಸಲು ಹೆಚ್ಚಿನ ಅಧ್ಯಯನಗಳ ಅವಶ್ಯಕತೆ ಇದೆ.

7. ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿರಬಹುದು: ಕೆಲವು ಪ್ರಾಥಮಿಕ ಅಧ್ಯಯನಗಳು ಶುಂಠಿ ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಹೊಂದಿರಬಹುದು ಮತ್ತು ಕೆಲವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಬಹುದು ಎಂದು ಅಧ್ಯಯನ ಸೂಚಿಸುತ್ತವೆ. ಗ್ಯಾಸ್ಟ್ರೋ ಎಂಟರಾಲಜಿ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ಶುಂಠಿಯಲ್ಲಿ ಕ್ಯಾನ್ಸರ್ ವಿರೋಧಿ ಗುಣಗಳಿವೆ ಎಂದು ಕಂಡು ಹಿಡಿದಿದೆ. ಆದರೆ ಈ ಸಂಶೋಧನೆಗಳನ್ನು ಮೌಲ್ಯೀಕರಿಸಲು ಮತ್ತು ಕೆಲವು ಕಾರ್ಯವಿಧಾನಗಳನ್ನು ಅರ್ಥಮಾಡಿಕೊಳ್ಳಲು ಹೆಚ್ಚಿನ ಸಂಶೋಧನೆ ಅತ್ಯಗತ್ಯವಾಗಿದೆ.

ಶುಂಠಿಯು ಪೋಷಕಾಂಶಗಳ ಶ್ರೇಣಿಯಿಂದ ತುಂಬಿದ್ದರೂ, ಇದು ಸೋಂಕುಗಳು ಮತ್ತು ರೋಗಗಳನ್ನು ನಿವಾರಿಸಲು ಸಹಾಯ ಮಾಡುವ ಮಾಂತ್ರಿಕ ಘಟಕಾಂಶವಲ್ಲ. ನೀವು ಯಾವುದಾದರೂ ಕಾಯಿಲೆಯನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಇದನ್ನು ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು, ಜೊತೆಗೆ ಇದನ್ನು ಮಿತವಾಗಿ ತಿನ್ನಬೇಕು. ಏಕೆಂದರೆ ಅತಿಯಾದರೇ ಅಮೃತವೂ ವಿಷವಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?