AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adult Acne: 30ರ ನಂತರವೂ ಮುಖದ ಮೇಲೆ ಮೊಡವೆ ಹುಟ್ಟಲು ಕಾರಣಗಳಿವು

ಹದಿಹರೆಯದಲ್ಲಿ ಮುಖದಲ್ಲಿ ಮೊಡವೆಗಳಾಗುವುದು ಸಹಜ. ಆದರೆ 30ರ ನಂತರವೂ ಕೆಲವರಲ್ಲಿ ಮೊಡವೆ ಮೂಡುತ್ತದೆ. ಆದ್ದರಿಂದ 30ರ ನಂತರವೂ ಮುಖದ ಮೇಲೆ ಮೊಡವೆ ಹುಟ್ಟಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Adult Acne: 30ರ ನಂತರವೂ ಮುಖದ ಮೇಲೆ ಮೊಡವೆ ಹುಟ್ಟಲು ಕಾರಣಗಳಿವು
Adult Acne
ಅಕ್ಷತಾ ವರ್ಕಾಡಿ
|

Updated on:Oct 04, 2024 | 6:01 PM

Share

ಹದಿಹರೆಯದಲ್ಲಿ ಮುಖದಲ್ಲಿ ಮೊಡವೆಗಳಾಗುವುದು ಸಹಜ. ಹದಿಹರೆಯದ ನಂತರ ಮೊಡವೆ ನಿಮ್ಮನ್ನು ಕಾಡುತ್ತಿದ್ದರೆ ಎಂದಿಗೂ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಎಚ್ಚರಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ, ಸೌಂದರ್ಯವನ್ನು ಕಾಪಾಡಿಕೊಳ್ಳಲು ಚಿಕ್ಕ ವಯಸ್ಸಿನಲ್ಲಿ ಅನೇಕ ರೀತಿಯ ಸೌಂದರ್ಯವರ್ಧಕಗಳನ್ನು ಬಳಸುತ್ತಾರೆ. ಈ ರೀತಿಯ ರಾಸಾಯನಿಕಗಳು ಮುಖಕ್ಕೆ ಹಾನಿಕಾರಕ. ಇದರಿಂದಾಗಿ ಚರ್ಮಕ್ಕೆ ಹಾನಿಯುಂಟಾಗುತ್ತದೆ. ಅದರಲ್ಲಿ ಮೊಡವೆ ಸಮಸ್ಯೆಯೂ ಒಂದು. ಇದಲ್ಲದೇ 30ರ ನಂತರ ಮುಖದ ಮೇಲೆ ಮೊಡವೆ ಹುಟ್ಟಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಾರ್ಮೋನ್ ಬದಲಾವಣೆಗಳು:

ಹಾರ್ಮೋನುಗಳ ಬದಲಾವಣೆಯು ಸಾಮಾನ್ಯ ಸಂಗತಿಯಾಗಿದೆ. ಇದರಿಂದ ಮುಖದಲ್ಲಿ ಮೊಡವೆಗಳಂತಹ ಸಮಸ್ಯೆಗಳು ಉಂಟಾಗುತ್ತವೆ. ಮಹಿಳೆಯರ ಮೇಲೆ ವಿಶೇಷವಾಗಿ ಪರಿಣಾಮ ಬೀರುತ್ತಾರೆ. ಅನೇಕ ಜನರು ಶಾಪ್​ಗಳಲ್ಲಿ ಮತ್ತು ಆನ್‌ಲೈನ್‌ನಲ್ಲಿ ಲಭ್ಯವಿರುವ ಸೌಂದರ್ಯವರ್ಧಕ ಉತ್ಪನ್ನಗಳೊಂದಿಗೆ ಮೊಡವೆಗಳಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸುತ್ತಾರೆ. ಆದರೆ ಅದರ ಬದಲಾಗಿ ವೈದ್ಯರ ಬಳಿ ಹೋಗಿ ಹಾರ್ಮೋನ್ ಸಂಬಂಧಿತ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಕೆಟ್ಟ ಆಹಾರ ಪದ್ಧತಿ:

ಕೆಟ್ಟ ಆಹಾರ ಪದ್ಧತಿ ನಮ್ಮ ಆರೋಗ್ಯದ ಮೇಲೆ ಮಾತ್ರವಲ್ಲದೆ ನಮ್ಮ ಚರ್ಮದ ಮೇಲೂ ಪರಿಣಾಮ ಬೀರುತ್ತದೆ. ಹೆಚ್ಚು ಸಕ್ಕರೆ, ಹಾಲು, ಪನೀರ್ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸುವುದರಿಂದ ನಮ್ಮ ಚರ್ಮದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆಧುನಿಕ ಜೀವನಶೈಲಿಯಲ್ಲಿ ಹೊರಗೆ ತಿನ್ನುವುದು ವಾಡಿಕೆಯಾಗಿಬಿಟ್ಟಿದೆ. ಇದು ಆರೋಗ್ಯ ಮತ್ತು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚು ಕರಿದ ಎಣ್ಣೆಯುಕ್ತ ಆಹಾರವನ್ನು ಸೇವಿಸುವುದರಿಂದ ನೆತ್ತಿ ಮತ್ತು ಮುಖದ ಮೇಲೆ ಹೆಚ್ಚುವರಿ ಎಣ್ಣೆ ಉಂಟಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೊಳಕು ಸಂಗ್ರಹವಾಗುವುದರಿಂದ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುತ್ತವೆ.

ಮಾಲಿನ್ಯ:

ಹವಾಮಾನ ಬದಲಾವಣೆಯಾಗಲಿ ಅಥವಾ ಗಾಳಿಯು ಕಲುಷಿತವಾಗಲಿ, ಈ ವಸ್ತುಗಳು ನಮ್ಮ ಚರ್ಮವನ್ನು ಹಾನಿಗೊಳಿಸಬಹುದು. ಚರ್ಮದ ನೈಸರ್ಗಿಕ ಎಣ್ಣೆಯ ಜೊತೆಗೆ ಮುಖದ ರಂಧ್ರಗಳಲ್ಲಿ ಮಾಲಿನ್ಯಕಾರಕಗಳು ಸಂಗ್ರಹಗೊಳ್ಳುತ್ತವೆ. ರಂಧ್ರಗಳನ್ನು ನಿರ್ಬಂಧಿಸಿದರೆ, ಸ್ವಲ್ಪ ಸಮಯದ ನಂತರ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ಕಾಲಕಾಲಕ್ಕೆ ಮುಖ ತೊಳೆಯುವುದು ಉತ್ತಮ. ಹೀಗೆ ಮಾಡುವುದರಿಂದ ನಿಮ್ಮ ಮುಖದಲ್ಲಿ ಮೊಡವೆಗಳನ್ನು ತಡೆಯಬಹುದು.

ಇದನ್ನೂ ಓದಿ: ಜನನದ ಸಮಯದಲ್ಲಿ ನವಜಾತ ಶಿಶುವಿನ ತೂಕ ಎಷ್ಟಿರಬೇಕು? ತೂಕ ಕಡಿಮೆಯಾದಾಗ ಏನಾಗುತ್ತದೆ?

ವಿಟಮಿನ್ ಬಿ7 ಕೊರತೆ:

ವಿಟಮಿನ್ B7 ಅನ್ನು ಬಯೋಟಿನ್ ಎಂದೂ ಕರೆಯುತ್ತಾರೆ. ದೇಹದಲ್ಲಿ ವಿಟಮಿನ್ ಬಿ7 ಕೊರತೆಯಿದ್ದರೂ ಮುಖದ ಮೇಲೆ  ಮೊಡವೆಗಳು ಕಾಣಿಸಿಕೊಳ್ಳಬಹುದು. ಈ ಕೊರತೆಯನ್ನು ತಪ್ಪಿಸಲು ಮಾಂಸಾಹಾರವನ್ನು ಸೇವಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Fri, 4 October 24

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು