AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Peas Benefits: ಹಸಿರು ಬಟಾಣಿಯನ್ನು ಚಳಿಗಾಲದಲ್ಲಿ ತಿನ್ನುವುದರಿಂದಾಗುವ ಪ್ರಯೋಜನಗಳೇನು ತಿಳಿಯಿರಿ

ಚಳಿಗಾಲದಲ್ಲಿ ಅನೇಕ ರೀತಿಯ ಹಣ್ಣುಗಳು ಮತ್ತು ತರಕಾರಿಗಳು ಲಭ್ಯವಿವೆ. ಈ ಪೋಷಕಾಂಶಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Green Peas Benefits: ಹಸಿರು ಬಟಾಣಿಯನ್ನು ಚಳಿಗಾಲದಲ್ಲಿ ತಿನ್ನುವುದರಿಂದಾಗುವ ಪ್ರಯೋಜನಗಳೇನು ತಿಳಿಯಿರಿ
Green Peas
TV9 Web
| Edited By: |

Updated on:Nov 18, 2022 | 8:58 AM

Share

ಚಳಿಗಾಲದಲ್ಲಿ ಅನೇಕ ರೀತಿಯ ಹಣ್ಣುಗಳು ಮತ್ತು ತರಕಾರಿಗಳು ಲಭ್ಯವಿವೆ. ಈ ಪೋಷಕಾಂಶಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದರಲ್ಲೂ ಈ ಋತುವಿನಲ್ಲಿ ಹಸಿರು ಬಟಾಣಿ ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯವಿದೆ. ಹಸಿರು ಬಟಾಣಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಏಕೆಂದರೆ ಹಸಿರು ಬಟಾಣಿಯಲ್ಲಿ ಪ್ರೋಟೀನ್, ವಿಟಮಿನ್ ಸಿ, ಕಬ್ಬಿಣ, ವಿಟಮಿನ್ ಬಿ6 ಮತ್ತು ಪೊಟ್ಯಾಸಿಯಮ್ ಇದೆ. ಅವುಗಳನ್ನು ಅನ್ನ ಅಥವಾ ಮೇಲೋಗರದೊಂದಿಗೆ ತಿನ್ನಬಹುದು.ಅದೇ ಸಮಯದಲ್ಲಿ, ಹಸಿರು ಬಟಾಣಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಪ್ರತಿದಿನ ಬಟಾಣಿ ತಿನ್ನಲು ಸೂಚಿಸಲಾಗುತ್ತದೆ. ಈಗ ಹಸಿರು ಬಟಾಣಿ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.

ಹಸಿರು ಬಟಾಣಿ ತಿನ್ನುವುದರಿಂದಾಗುವ ಪ್ರಯೋಜನಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಚಳಿಗಾಲದಲ್ಲಿ ಹಸಿರು ಬಟಾಣಿಗಳನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬಟಾಣಿಯಲ್ಲಿ ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಪ್ರತಿನಿತ್ಯ ಹಸಿರು ಬಟಾಣಿ ತಿನ್ನುವವರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಸಂಧಿವಾತವನ್ನು ನಿವಾರಿಸುತ್ತದೆ: ಬಟಾಣಿ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅವುಗಳನ್ನು ನಿಯಮಿತವಾಗಿ ಬಳಸುವುದರಿಂದ, ನೀವು ಸಂಧಿವಾತದಿಂದ ಪರಿಹಾರವನ್ನು ಪಡೆಯಬಹುದು. ಹಸಿರು ಬಟಾಣಿಯಲ್ಲಿ ಸೆಲೆನಿಯಮ್ ಅಂಶವಿದೆ. ಇದು ಸಂಧಿವಾತ ಮತ್ತು ಕೀಲು ನೋವನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ.

ಮಧುಮೇಹ: ಹಸಿರು ಬಟಾಣಿ ದೇಹಕ್ಕೆ ತುಂಬಾ ಒಳ್ಳೆಯದು. ಹಸಿರು ಬಟಾಣಿಯನ್ನು ಪ್ರತಿದಿನ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಏಕೆಂದರೆ ಹಸಿರು ಬಟಾಣಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ದೇಹವನ್ನು ದೀರ್ಘಕಾಲದವರೆಗೆ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ: ಹಸಿರು ಬಟಾಣಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ನಾರಿನಂಶ ಹೇರಳವಾಗಿದ್ದು ಹೊಟ್ಟೆಯನ್ನು ಆರೋಗ್ಯವಾಗಿಡಲು ನೆರವಾಗುತ್ತದೆ. ಅಷ್ಟೇ ಅಲ್ಲ ಪ್ರತಿದಿನ ಹಸಿರು ಬಟಾಣಿ ಸೇವಿಸಿದರೆ ಅಜೀರ್ಣ ಸಮಸ್ಯೆ ಇರುವುದಿಲ್ಲ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 am, Fri, 18 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ