Guava Benefits: ಪೇರಳೆ ಹಣ್ಣು ಆರೋಗ್ಯದ ಜತೆಗೆ ಸೌಂದರ್ಯವನ್ನೂ ಕಾಪಾಡುತ್ತೆ ಹೇಗೆ ತಿಳಿಯಿರಿ

ಪೇರಳೆ(Guava )ಹಣ್ಣು ಚಳಿಗಾಲದಲ್ಲಿ ಹೇರಳವಾಗಿ ಸಿಗುತ್ತದೆ, ಪೇರಲೆ ತಿನ್ನಲು ತುಂಬಾ ರುಚಿಯಾಗಿರುತ್ತದೆ. ಸ್ವಲ್ಪ ಹುಳಿ-ಸಿಹಿ ರುಚಿಯನ್ನು ಹೊಂದಿರುವ ಪೇರಳೆ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ.

Guava Benefits: ಪೇರಳೆ ಹಣ್ಣು ಆರೋಗ್ಯದ ಜತೆಗೆ ಸೌಂದರ್ಯವನ್ನೂ ಕಾಪಾಡುತ್ತೆ ಹೇಗೆ ತಿಳಿಯಿರಿ
Guava
Follow us
TV9 Web
| Updated By: ನಯನಾ ರಾಜೀವ್

Updated on: Nov 20, 2022 | 12:06 PM

ಪೇರಳೆ(Guava )ಹಣ್ಣು ಚಳಿಗಾಲದಲ್ಲಿ ಹೇರಳವಾಗಿ ಸಿಗುತ್ತದೆ, ಪೇರಲೆ ತಿನ್ನಲು ತುಂಬಾ ರುಚಿಯಾಗಿರುತ್ತದೆ. ಸ್ವಲ್ಪ ಹುಳಿ-ಸಿಹಿ ರುಚಿಯನ್ನು ಹೊಂದಿರುವ ಪೇರಳೆ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಪೇರಳೆಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪೇರಳೆಯಲ್ಲಿರುವ ಗುಣಗಳು ರುಚಿ ಮತ್ತು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯವನ್ನು ಹೆಚ್ಚಿಸುವಲ್ಲಿಯೂ ಪರಿಣಾಮಕಾರಿಯಾಗಿದೆ.

ಪೇರಳೆಯನ್ನು ಸೇವಿಸುವುದರಿಂದ ತ್ವಚೆಗೂ ಹಲವಾರು ಪ್ರಯೋಜನಗಳಿವೆ. ಪೇರಳೆಯನ್ನು ಹೇಗೆ ಸೇವಿಸಬೇಕು ಮತ್ತು ಅದನ್ನು ತಿನ್ನುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಪೇರಳೆ ತಿನ್ನುವುದರಿಂದ ಆಗುವ ಪ್ರಯೋಜನಗಳು ಪೇರಳೆಯನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಮತ್ತು ಕಫದಂತಹ ತೊಂದರೆಗಳು ದೂರವಾಗುತ್ತವೆ. ಪೇರಳೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೈಬರ್ ಮತ್ತು ಫೋಲಿಕ್ ಆಮ್ಲವಿದೆ. ಇದು ಪೊಟ್ಯಾಷಿಯಂ, ತಾಮ್ರ ಮತ್ತು ಮ್ಯಾಂಗನೀಸ್‌ನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಪೇರಳೆಯನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಮತ್ತು ಕಫದಂತಹ ತೊಂದರೆಗಳು ದೂರವಾಗುತ್ತವೆ.

ಪೇರಳೆಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಕಾರ್ಸಿನೋಜೆನಿಕ್ ಗುಣವಿದ್ದು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ದೂರ ಮಾಡುತ್ತದೆ. ಪೇರಳೆಯಲ್ಲಿರುವ ಆಂಟಿ ಏಜಿಂಗ್ ಗುಣಲಕ್ಷಣಗಳು ಚರ್ಮದ ಸುಕ್ಕುಗಳನ್ನು ಹೋಗಲಾಡಿಸಲು ಪ್ರಯೋಜನಕಾರಿಯಾಗಿದೆ.

ಪೇರಳೆ ಎಲೆಗಳ ಪ್ರಯೋಜನಗಳು ಪೇರಳೆ ಹಣ್ಣು ಮಾತ್ರವಲ್ಲದೆ ಎಲೆಗಳು ಮತ್ತು ಅದರ ತೊಗಟೆ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪೇರಳೆ ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಅಸಿಡಿಟಿ, ಪಿರಿಯಡ್ಸ್, ಬಾಯಿ ಹುಣ್ಣು ಮತ್ತು ಕೀಲು ನೋವು ಸಮಸ್ಯೆಗಳೂ ದೂರವಾಗುತ್ತವೆ.

ಹೀಗೆ ಸೇವಿಸಿದರೆ ಹಲವಾರು ಲಾಭಗಳು ಸಿಗುತ್ತವೆ

ಪೇರಳೆ ಎಲೆಗಳು ಅನೇಕ ರೋಗಗಳಲ್ಲಿ ಪ್ರಯೋಜನಗಳನ್ನು ನೀಡುತ್ತವೆ. ಪೇರಲ ಎಲೆಗಳನ್ನು ಕುದಿಸಿ ಮತ್ತು ಕಷಾಯವನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳನ್ನು ನೀಡುತ್ತದೆ. 8-10 ಪೇರಳೆ ಎಲೆಗಳನ್ನು 3-4 ಕಪ್ ನೀರಿನಲ್ಲಿ ಕುದಿಸಿ. ನೀರು ಅರ್ಧ ಉಳಿಯುವವರೆಗೆ ಚೆನ್ನಾಗಿ ಕುದಿಯಲು ಬಿಡಿ. ಪೇರಲ ಕಷಾಯವನ್ನು ಟೀಯಂತೆ ಎರಡು ಬಾರಿ ಕುಡಿದರೆ ಅದ್ಭುತವಾದ ಲಾಭಗಳು ಸಿಗುತ್ತವೆ.

ಇದರೊಂದಿಗೆ ಬಾಯಿ ಗುಳ್ಳೆ, ವಸಡು ನೋವಿನ ಸಮಸ್ಯೆ ದೂರವಾಗುತ್ತದೆ. ಪೇರಳೆ ಎಲೆಗಳ ನೀರನ್ನು ಸೇವಿಸುವುದರಿಂದ ಸುಕ್ಕುಗಳು ಮಾಯವಾಗುತ್ತವೆ. ಈ ನೀರಿನಿಂದ ಕೂದಲನ್ನು ತೊಳೆದರೆ ಕೂದಲು ಉದುರುವುದು ನಿಲ್ಲುತ್ತದೆ ಮತ್ತು ಕೂದಲಿನ ಬೆಳವಣಿಗೆ ಪ್ರಾರಂಭವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್