AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H3N2 Influenza Virus: ಭಾರತದಲ್ಲಿ ಹೆಚ್ಚಾಗುತ್ತಿರುವ ಎಚ್​3ಎನ್​2 ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈಗಾಗಲೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿದುಕೊಳ್ಳಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ.

H3N2 Influenza Virus: ಭಾರತದಲ್ಲಿ ಹೆಚ್ಚಾಗುತ್ತಿರುವ ಎಚ್​3ಎನ್​2 ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:Mar 07, 2023 | 4:16 PM

ಎಚ್​3ಎನ್​2 ವೈರಸ್(​H3N2 Virus) ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಭಾರೀ ಸದ್ದು ಮಾಡುತ್ತಿದೆ. ಜನವರಿ ತಿಂಗಳ ಅಂತ್ಯದಿಂದ ಜ್ವರ, ಶೀತ, ಕಫ, ದೀರ್ಘಾವಧಿ ಕೆಮ್ಮಿನ ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈಗಾಗಲೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಆದ್ದರಿಂದ ನೀವು ಈ ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿದುಕೊಳ್ಳಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಶೇಷವಾಗಿ ಉತ್ತರ ಭಾರತದಲ್ಲಿ, ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಹೆಚ್ಚಿನ ಜ್ವರ ಪ್ರಕರಣಗಳು ವರದಿಯಾಗಿದೆ. ಮ್ಯಾಕ್ಸ್ ಹೆಲ್ತ್‌ಕೇರ್ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನಲ್ ಮೆಡಿಸಿನ್ ಹಿರಿಯ ನಿರ್ದೇಶಕ ಡಾ.ಸಂದೀಪ್ ಬುಧಿರಾಜ ಪ್ರಕಾರ, ಇನ್‌ಫ್ಲುಯೆನ್ಸ ವೈರಸ್ ಸ್ಟ್ರೈನ್‌ನ ರೋಗಲಕ್ಷಣಗಳು ಜ್ವರ ಋತುವಿನಲ್ಲಿ ಹಿಂದಿನ ವರ್ಷಗಳಲ್ಲಿ ಇದ್ದಕ್ಕಿಂತ ಸ್ವಲ್ಪ ಭಿನ್ನವಾಗಿರುತ್ತವೆ ಮತ್ತು ಸ್ವಲ್ಪ ಹೆಚ್ಚು ತೀವ್ರವಾಗಿರುತ್ತವೆ ಎಂದು ಹೇಳಿದ್ದಾರೆ.

ಎಚ್​3ಎನ್​2 ವೈರಸ್ ಎಂದರೇನು?

H3N2 ವೈರಸ್ ಇನ್ಫ್ಲುಯೆನ್ಸ A ವೈರಸ್ ಎಂದು ಕರೆಯಲ್ಪಡುವ ಒಂದು ರೀತಿಯ ಇನ್ಫ್ಲುಯೆನ್ಸ ವೈರಸ್ ಆಗಿದೆ. ಇದು ಉಸಿರಾಟದ ವೈರಲ್ ಸೋಂಕು, ಅಂದರೆ ಸಾಂಕ್ರಾಮಿಕ ರೋಗ ಲಕ್ಷಣಗಳನ್ನು ಹೊಂದಿದ್ದರಿಂದ ಹೆಚ್ಚಿನ ಜಾಗ್ರತೆ ಅಗತ್ಯ.  ಇನ್ಫ್ಲುಯೆನ್ಸ ಎ ವೈರಸ್ನ ಈ ಉಪವಿಭಾಗವನ್ನು 1968 ರಲ್ಲಿ ಮೊದಲ ಬಾರಿಗೆ ಮಾನವನ ದೇಹದಲ್ಲಿ ಪತ್ತೆ ಹಚ್ಚಲಾಯಿತು ಎಂದು ತಿಳಿದು ಬಂದಿದೆ.

ಎಚ್​3ಎನ್​2 ವೈರಸ್‌ನ ಲಕ್ಷಣಗಳೇನು?

ಎಚ್​3ಎನ್​2 ವೈರಸ್‌ನ ಲಕ್ಷಣಗಳೆಂದರೆ ದೀರ್ಘಾವಧಿ ಕೆಮ್ಮು, ಸ್ರವಿಸುವ ಮೂಗು, ನೋಯುತ್ತಿರುವ ಗಂಟಲು, ತಲೆನೋವು, ದೇಹದ ನೋವು, ಜ್ವರ, ಶೀತ, ಆಯಾಸ, ಅತಿಸಾರ, ವಾಂತಿ ಮತ್ತು ಉಸಿರಾಟದ ತೊಂದರೆಗಳಾಗಿವೆ.

ಇದನ್ನೂ ಓದಿ: ಎಚ್​3ಎನ್​2 ವೈರಸ್ ಸೋಂಕು, ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ; ಇಲ್ಲಿದೆ ವಿವರ

ಎಚ್​3ಎನ್​2 ವೈರಸ್‌ನಿಂದ ದೂರವಿರಲು ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು:

  • ನಿಮ್ಮ ಕೈಗಳನ್ನು ಸಾಬೂನಿನಿಂದ ತೊಳೆಯುವುದು.
  • ನಿಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುವುದು.
  • ಅನಾರೋಗ್ಯದಿಂದ ಬಳಲುತ್ತಿರುವ ಜನರೊಂದಿಗೆ ಸಂಪರ್ಕವನ್ನು ತಪ್ಪಿಸಿ ಅಥವಾ ಮಾಸ್ಕ್ ಧರಿಸಿ.
  • ವೈರಲ್ ಸೋಂಕು ಸಾಂಕ್ರಾಮಿಕವಾಗಿರುವುದರಿಂದ ನೀವು ಸೀನುತ್ತಿದ್ದರೆ ಅಥವಾ ಕೆಮ್ಮುತ್ತಿದ್ದರೆ, ನೀವು ಮಾಸ್ಕ್ ಧರಿಸಿ ಅಂತರ ಕಾಪಾಡಿ.

ಎಚ್​3ಎನ್​2 ವೈರಸ್‌ಗೆ ಚಿಕಿತ್ಸೆ ಏನು?

ಎಚ್​3ಎನ್​2 ವೈರಸ್‌ಗೆ ರೋಗಲಕ್ಷಣಗಳನ್ನು ನಿವಾರಿಸಲು ಜ್ವರ, ಕೆಮ್ಮು ಅಥವಾ ತಲೆನೋವಿಗೆ ನಿಯಮಿತವಾಗಿ ಔಷಧಿಗಳನ್ನು ಸೇವಿಸಬಹುದು. ಆದರೆ ಆದೇ ಶಾಶ್ವತ ಪರಿಹಾರವಲ್ಲ. ಆ್ಯಂಟಿಬಯಾಟಿಕ್​ಗಳನ್ನು ತೆಗೆದುಕೊಳ್ಳುವುದನ್ನು ಆದಷ್ಟು ತಪ್ಪಿಸಿ. ಪದೇ ಪದೇ ಆ್ಯಂಟಿ ಬಯೋಟಿಕ್ಸ್‌ ತೆಗೆದುಕೊಳ್ಳುವುದರಿಂದ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಲು ಕಾರಣವಾಗಬಹುದು. ರೋಗಲಕ್ಷಣಗಳು ತೀವ್ರವಾಗಿದ್ದರೆ, ವೈದ್ಯರನ್ನು ಭೇಟಿ ನೀಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:16 pm, Tue, 7 March 23

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ