AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H3N2 Influenza Virus: ಎಚ್​3ಎನ್​2 ವೈರಸ್ ಸೋಂಕು, ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ; ಇಲ್ಲಿದೆ ವಿವರ

ರಾಜ್ಯದಲ್ಲಿ 26 ಜನರಲ್ಲಿ ಎಚ್3ಎನ್2 ವೈರಸ್ ಸೋಂಕು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ರಾಜ್ಯ ಸರ್ಕಾರ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿವರ ಇಲ್ಲಿದೆ.

H3N2 Influenza Virus: ಎಚ್​3ಎನ್​2 ವೈರಸ್ ಸೋಂಕು, ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Mar 06, 2023 | 9:01 PM

Share

ಬೆಂಗಳೂರು: ರಾಜ್ಯದಲ್ಲಿ 26 ಜನರಲ್ಲಿ ಎಚ್3ಎನ್2 (H3N2) ವೈರಸ್ ಸೋಂಕು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (K Sudhakar) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ರಾಜ್ಯ ಸರ್ಕಾರ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ವಿಚಾರವಾಗಿ ಸೋಮವಾರ ಸಂಜೆ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಸಚಿವ ಸುಧಾಕರ್ ಟ್ವೀಟ್ ಮೂಲಕವೂ ಮಾಹಿತಿ ನೀಡಿದ್ದಾರೆ. ಎಚ್3ಎನ್2 ವೈರಸ್​​ನಿಂದ ಹರಡಿರುವ ಸೋಂಕು ಕನಿಷ್ಠ 5ರಿಂದ 7 ದಿನಗಳ ವರೆಗೆ ಇರುತ್ತದೆ. ಗರ್ಭಿಣಿಯರು, ಮಕ್ಕಳು, ವೃದ್ಧರಿಗೆ ಬೇಗ ಸೋಂಕು ಹರಡುತ್ತದೆ. 15 ವರ್ಷದಿಂದ 65 ವರ್ಷದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ವಯೋಮಾನದವರು ಹಾಗೂ ಎಲ್ಲರೂ ಬಹಳ ಎಚ್ಚರಿಕೆ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಎಚ್3ಎನ್2 ವೈರಸ್​ ಸೋಂಕಿನ ಲಕ್ಷಣಗಳೇನು?

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ವಿಸ್ತೃತ ಮಾರ್ಗಸೂಚಿಯಲ್ಲಿ ಸೋಂಕಿನ ಲಕ್ಷಣಗಳ ಕುರಿತ ವಿವರನ್ನೂ ನೀಡಲಾಗಿದೆ. ಜ್ವರ, ಚಳಿ, ಮೈ-ಕೈ ನೋವು, ತುರಿಕೆ, ಸೀನು ಪ್ರಮುಖವಾಗಿ ಕಂಡುಬರುತ್ತವೆ. ಕಲುಷಿತ ವಾತಾವರಣವಿದ್ದರೆ 3 ವಾರಗಳವರೆಗೆ ಸೋಂಕು ಇರುವ ಸಾಧ್ಯತೆ ಇದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಸೋಂಕು ತಡೆಗೆ ಏನೇನು ಕ್ರಮ ಕೈಗೊಳ್ಳಬೇಕು?

  1. ಆರೋಗ್ಯ ಸಿಬ್ಬಂದಿ ಮಾಸ್ಕ್‌ ಬಳಸುವುದು ಕಡ್ಡಾಯ.
  2. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ಮಾಸ್ಕ್‌ ಬಳಕೆ ಕಡ್ಡಾಯ.
  3. ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳ ಮೇಲೆ ಸೂಕ್ತ ನಿಗಾವಹಿಸಬೇಕು.
  4. IDSP-IHIP ಪೋರ್ಟಲ್‌ನಲ್ಲಿ ಪ್ರಕರಣಗಳ ಬಗ್ಗೆ ಹಾಗೂ ಮಾದರಿ ಸಂಗ್ರಹದ ಮಾಹಿತಿ ದಾಖಲು ಮಾಡಬೇಕು.
  5. ಅಗತ್ಯವಿರುವ ಪ್ರಮಾಣದಲ್ಲಿ ಔಷಧಿಗಳನ್ನು ಸಂಗ್ರಹಿಸಿ ಇಟ್ಟಿಕೊಳ್ಳಬೇಕು.
  6. ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳ ಚಿಕಿತ್ಸೆ ವೇಳೆ ಆರೋಗ್ಯ ಸಿಬ್ಬಂದಿ ಮಾಸ್ಕ್ ಹಾಗೂ ಪಿಪಿಇ ಕಿಟ್ ಧರಿಸಬೇಕು.
  7. ತೀವ್ರ ನಿಗಾ ಘಟಕ ಮತ್ತು ಆಸ್ಪತ್ರೆಯ ಚಿಕಿತ್ಸಾ ವಾರ್ಡ್​​ಗಳಲ್ಲಿ ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ಫ್ಲೂ ಲಸಿಕೆ ಪಡೆಯಬೇಕು.
  8. ಹೆಲ್ತ್​ಕೇರ್ ಫೆಸಿಲಿಟಿಗಳಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು.
  9. ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳಿಂದ ಮೃತಪಟ್ಟವರ ಸ್ವಾಬ್ ವರದಿಯನ್ನು ಹತ್ತಿರದ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯದ ಪ್ರಯೋಗಾಲಯದಲ್ಲಿ (VRDL) ಪರೀಕ್ಷೆಗೆ ಒಳಪಡಿಸಬೇಕು.
  10. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಕಾಲೋಚಿತ ಜ್ವರದ ರೋಗಲಕ್ಷಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ವಯಂ-ಔಷಧಿ ಮತ್ತು ಪ್ರತಿಜೀವಕಗಳ ಅನಗತ್ಯ ಬಳಕೆಯನ್ನು ತಪ್ಪಿಸಬೇಕು.
  11. ಏನೇನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ವಿಷಯಗಳ ವಿವರವನ್ನು ಜನಜಾಗೃತಿಗಾಗಿ ಆಸ್ಪತ್ರೆಯ ಆವರಣದಲ್ಲಿ ಲಗತ್ತಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Mon, 6 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್