ಬೆಂಗಳೂರು: ರಾಜ್ಯದಲ್ಲಿ 26 ಜನರಲ್ಲಿ ಎಚ್3ಎನ್2 (H3N2) ವೈರಸ್ ಸೋಂಕು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (K Sudhakar) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ರಾಜ್ಯ ಸರ್ಕಾರ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ವಿಚಾರವಾಗಿ ಸೋಮವಾರ ಸಂಜೆ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಸಚಿವ ಸುಧಾಕರ್ ಟ್ವೀಟ್ ಮೂಲಕವೂ ಮಾಹಿತಿ ನೀಡಿದ್ದಾರೆ. ಎಚ್3ಎನ್2 ವೈರಸ್ನಿಂದ ಹರಡಿರುವ ಸೋಂಕು ಕನಿಷ್ಠ 5ರಿಂದ 7 ದಿನಗಳ ವರೆಗೆ ಇರುತ್ತದೆ. ಗರ್ಭಿಣಿಯರು, ಮಕ್ಕಳು, ವೃದ್ಧರಿಗೆ ಬೇಗ ಸೋಂಕು ಹರಡುತ್ತದೆ. 15 ವರ್ಷದಿಂದ 65 ವರ್ಷದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ವಯೋಮಾನದವರು ಹಾಗೂ ಎಲ್ಲರೂ ಬಹಳ ಎಚ್ಚರಿಕೆ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ವಿಸ್ತೃತ ಮಾರ್ಗಸೂಚಿಯಲ್ಲಿ ಸೋಂಕಿನ ಲಕ್ಷಣಗಳ ಕುರಿತ ವಿವರನ್ನೂ ನೀಡಲಾಗಿದೆ. ಜ್ವರ, ಚಳಿ, ಮೈ-ಕೈ ನೋವು, ತುರಿಕೆ, ಸೀನು ಪ್ರಮುಖವಾಗಿ ಕಂಡುಬರುತ್ತವೆ. ಕಲುಷಿತ ವಾತಾವರಣವಿದ್ದರೆ 3 ವಾರಗಳವರೆಗೆ ಸೋಂಕು ಇರುವ ಸಾಧ್ಯತೆ ಇದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
In the view of increasing cases of seasonal flu, guidelines have been issued by state health department to prevent and control the spread of viral infection.
I urge people to follow precautionary measures, visit doctor in case of any symptoms and strictly avoid self-medication. pic.twitter.com/LJyu9gVATE
— Dr Sudhakar K (@mla_sudhakar) March 6, 2023
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:58 pm, Mon, 6 March 23