AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು

ಐಸಿಎಂಆರ್ ತನ್ನ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು ಸಕ್ರಿಯಗೊಳಿಸಿದೆ. ದೇಶಾದ್ಯಂತ ಐಸಿಎಂಆರ್‌ನ ಸುಮಾರು 165 ಅಂತಹ ಪ್ರಯೋಗಾಲಯಗಳಿದ್ದು ಇವು ಶಂಕಿತ ಹಂಟಾವೈರಸ್ ರೋಗಿಗಳ ಮಾದರಿಗಳನ್ನು ಪರೀಕ್ಷಿಸಲು ನೆರವಾಗುತ್ತವೆ. ಈ ರೀತಿಯಲ್ಲಿ ಹಂಟಾವೈರಸ್ ವೈರಸ್ ಅಪಾಯ ಹೆಚ್ಚಾಗದಂತೆ ತಡೆಯುವ ಕೆಲಸವನ್ನು ಮಾಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು
Hantavirus (1)Image Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 12, 2026 | 6:01 PM

Share

ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್‌ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ, ಅವರ ಮಾದರಿಗಳನ್ನು ತಕ್ಷಣ ಪರೀಕ್ಷಿಸಲು ಈ ಲ್ಯಾಬ್‌ಗಳನ್ನು ಸಿದ್ಧವಾಗಿರಿಸಲಾಗಿದೆ.

ಹಂಟಾವೈರಸ್ ಎಂದರೇನು?

ಹಂಟಾವೈರಸ್ ಸಾಮಾನ್ಯವಾಗಿ ಸೋಂಕಿತ ಇಲಿ ಮತ್ತು ಅದರ ಮಲ–ಮೂತ್ರ, ಲಾಲಾರಸದ ಸಂಪರ್ಕದಿಂದ ಮನುಷ್ಯರಿಗೆ ಹರಡುತ್ತದೆ. ಈ ವೈರಸ್‌ನ ಕೆಲವು ರೂಪಗಳು ಅಪಾಯಕಾರಿ ಆಗಿದ್ದು, ವಿಶೇಷವಾಗಿ “ಆಂಡೀಸ್ ಸ್ಟ್ರೇನ್” ಬಗ್ಗೆ ವಿಜ್ಞಾನಿಗಳು ಹೆಚ್ಚು ಕಳವಳ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಈ ಸ್ಟ್ರೇನ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಭಾರತದಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ?

ಐಸಿಎಂಆರ್ ತಜ್ಞರ ಪ್ರಕಾರ, ಕೊರೋನಾ ಸಮಯದಲ್ಲಿ ಬಳಸಿದ್ದಂತೆ RT-PCR ಪರೀಕ್ಷೆಯ ಮೂಲಕವೇ ಹಂಟಾವೈರಸ್ ಪತ್ತೆ ಮಾಡಲಾಗುತ್ತದೆ. ಸೋಂಕಿತ ವ್ಯಕ್ತಿಯ ಮಾದರಿಯಿಂದ ವೈರಲ್ ಆರ್ ಏನ್ ಎ (RNA) ಅನ್ನು ತೆಗೆದು ಅದರ ಜನ್ಯ ಅಂಶಗಳನ್ನು ಪರೀಕ್ಷಿಸಲಾಗುತ್ತದೆ. ವಿದೇಶಗಳಿಂದ ಬರುವವರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದರೆ ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸುವ ಸಾಧ್ಯತೆಯಿದೆ. ಈಗಾಗಲೇ ಸ್ಪೇನ್‌ನಿಂದ ಇಬ್ಬರು ಭಾರತೀಯರನ್ನು ಸುರಕ್ಷತಾ ಕ್ರಮವಾಗಿ ನೆದರ್‌ಲ್ಯಾಂಡ್ಸ್‌ಗೆ ಕಳುಹಿಸಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಸದ್ಯ ಅವರಿಗೆ ಯಾವುದೇ ಲಕ್ಷಣಗಳು ಕಾಣಿಸಿಲ್ಲ ಎಂದು ವರದಿಯಾಗಿದೆ.

ಹಂಟಾವೈರಸ್‌ನ ಪ್ರಮುಖ ಲಕ್ಷಣಗಳು:

  • ಜ್ವರ
  • ತಲೆನೋವು
  • ಸ್ನಾಯು ನೋವು
  • ಹೊಟ್ಟೆನೋವು
  • ವಾಂತಿ
  • ಉಸಿರಾಟದ ತೊಂದರೆ

ಇದನ್ನೂ ಓದಿ: ಹಂಟಾವೈರಸ್ ಎಂದರೇನು? ಇದು ಕೊರೊನಾದ ರೀತಿ ಹರಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು?

ಈ ಬಗ್ಗೆ ತಜ್ಞರ ಅಭಿಪ್ರಾಯವೇನು?

ಆರೋಗ್ಯ ತಜ್ಞರ ಪ್ರಕಾರ, ಭಾರತದಲ್ಲಿ ಇನ್ನೂ ಹಂಟಾವೈರಸ್ ಪ್ರಕರಣಗಳು ವರದಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಅನುಸರಿಸುವುದು ಬಹಳ ಮುಖ್ಯ. ಸ್ವಚ್ಛತೆ ಕಾಪಾಡುವುದು, ಇಲಿ ಸಂಚಾರ ಇರುವ ಪ್ರದೇಶಗಳಿಂದ ದೂರವಿರುವುದು ಮತ್ತು ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್