ಹಾಲಿನ ಜತೆ ಬಾಳೆಹಣ್ಣು ಮಿಶ್ರಣ ಸೇವಿಸುತ್ತಿದ್ದೀರಾ? ಆರೋಗ್ಯಕ್ಕೆ ಹಾನಿ ಎಂಬುದನ್ನು ಮರೆಯದಿರಿ!

ಹಾಲಿನ ಜತೆ ಬಾಳೆಹಣ್ಣಿನ ಮಿಶ್ರಣವು ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು. ಜತೆಗೆ ಜೀರ್ಣಕ್ರಿಯೆ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಲು ಮತ್ತು ಬಾಳೆಹಣ್ಣು ಸೇವನೆ ಮಾಡುವವರು ಮೊದಲು ಹಾಲನ್ನು ಸೇವಿಸಿ 20 ನಿಮಿಷದ ಬಳಿಕ ಬಾಳೆ ಹಣ್ಣನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.

ಹಾಲಿನ ಜತೆ ಬಾಳೆಹಣ್ಣು ಮಿಶ್ರಣ ಸೇವಿಸುತ್ತಿದ್ದೀರಾ? ಆರೋಗ್ಯಕ್ಕೆ ಹಾನಿ ಎಂಬುದನ್ನು ಮರೆಯದಿರಿ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 08, 2021 | 7:21 AM

ಹಾಲಿನ ಜತೆ ಬಾಳೆಹಣ್ಣು ಮಿಶ್ರಣ ಮಾಡಿ ಸವಿಯುವುದು ಬಹಳ ರುಚಿಕರವಾಗಿರುತ್ತದೆ. ಅದರಲ್ಲಿಯೂ ಬೇಸಿಗೆ ಸಮಯದಲ್ಲಂತೂ ಪಾಯಸ ಮಾಡಿ ಸವಿಯುತ್ತೇವೆ. ಬೆಳಿಗ್ಗೆ ದೋಸೆಗೆ, ಮಧ್ಯಾಹ್ನದ ಊಟಕ್ಕೆ ಬಾಳೆಹಣ್ಣಿನ ಪಾಯಸ ಸವಿಯುತ್ತಿದ್ದರೆ ಎಲ್ಲಿಲ್ಲದ ಆನಂದ. ಹಲವರು ರಾತ್ರಿ ಹಾಲು ಸೇವಿಸಿದ ಬಳಿಕವೇ ಬಾಳೆಹಣ್ಣು ತಿಂದು ಮಲಗುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಂಡಿರುತ್ತಾರೆ. ಆದರೆ ಹಾಲಿನ ಜತೆಗೆ ಬಾಳೆಹಣ್ಣು ಮಿಶ್ರಣ ಮಾಡಿ ಸವಿಯುವುದು ಆರೋಗ್ಯಕ್ಕೆ ಎಷ್ಟು ಹಾನಿ ಎಂಬುದನ್ನು ತಿಳಿಯಿರಿ.

ಯಾವುದೇ ಆಹಾರವಾಗಲಿ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಹಾಲು ಮತ್ತು ಬಾಳೆಹಣ್ಣು ಅತಿಯಾದ ನ್ಯೂಟ್ರೀಷಿನ್​ ಹೊಂದಿದೆ. ಹಾಲಿನಲ್ಲಿ ಪ್ರೋಟೀನ್​, ಪೊಟ್ಯಾಷಿಯಂ, ವಿಟಮಿನ್​ ಬಿ ಅಂಶಗಳಿರುವುದರಿಂದ ಇದು ನಿಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗೆಯೇ ಬಾಳೆಹಣ್ಣಿನಲ್ಲಿ ಫೈಬರ್​, ಮೆಗ್ನೀಸಿಯಂ, ಪೊಟ್ಯಾಷಿಯಂ, ವಿಟಮಿನ್​ ಬಿ6 ಮತ್ತು ವಿಟಮಿನ್​ ಸಿ ಅಂಶಗಳಿರುತ್ತವೆ. ಆದರೆ ತಜ್ಞರು, ಹಾಲು ಮತ್ತು ಬಾಳೆಹಣ್ಣನ್ನು ಮಿಶ್ರಣ ಮಾಡಿ ಸೇವಿಸಲು ಸೂಚನೆ ನೀಡುವುದಿಲ್ಲ.

ಹಾಲಿನ ಜತೆ ಬಾಳೆಹಣ್ಣಿನ ಮಿಶ್ರಣವು ಆರೋಗ್ಯಕ್ಕೆ ಹಾನಿಯುಂಟು ಮಾಡಬಹುದು. ಜತೆಗೆ ಜೀರ್ಣಕ್ರಿಯೆ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಲು ಮತ್ತು ಬಾಳೆಹಣ್ಣು ಸೇವನೆ ಮಾಡುವವರು ಮೊದಲು ಹಾಲನ್ನು ಸೇವಿಸಿ 20 ನಿಮಿಷದ ಬಳಿಕ ಬಾಳೆ ಹಣ್ಣನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.

ಯಾರು ಬಾಳೆಹಣ್ಣು ಮತ್ತು ಹಾಲಿನ ವಿಶ್ರಣವನ್ನು ಸೇವಿಸಬಾರದು? ಹೆಚ್ಚು ದೇಹದ ತೂಕವನ್ನು ಹೊಂದಿರುವವರು ಆದಷ್ಟು ಬಾಳೆಹಣ್ಣು ಮತ್ತು ಹಾಲಿನ ಮಿಶ್ರಣ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು. ಇದು ಹೆಚ್ಚು ಕ್ಯಾಲೊರಿಗಳನ್ನು ಹೊಂದಿರುವರಿಂದ ದೇಹದ ತೂಕವನ್ನು ಹೆಚ್ಚಿಸುತ್ತದೆ. ಜತೆಗೆ ಜೀರ್ಣಕ್ರಿಯೆಗೆ ಸಮಸ್ಯೆಯಾಗುವದರಿಂದ ಜೊಜ್ಜಿನ ಹೆಚ್ಚಳಕ್ಕೆ ಕಾರಣವಾಗಬಹುದು.

ಅಸ್ತಮಾ ಸಮಸ್ಯೆ ಅಥವಾ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಹಾಲು ಮತ್ತು ಬಾಳೆಹಣ್ಣನ್ನು ಸೇವಿಸದಿರುವುದು ಉತ್ತಮ. ಈ ಎರಡು ಪದಾರ್ಥಗಳು ಉಸಿರಾಟ ಕ್ರಿಯೆಗೆ ತೊಂದರೆಯನ್ನುಂಟು ಮಾಡಬಹುದು.

ಆಯುರ್ವೇದದ ಪ್ರಕಾರ ಎಲ್ಲಾ ಆಹಾರವೂ ಸಹ ಒಂದೊಂದು ರುಚಿಯನ್ನು ಹೊಂದಿದೆ. ಪ್ರತಿಯೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಎರಡು ವಿರುದ್ಧ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳು ಅಥವಾ ಆಹಾರವನ್ನು ಮಿಶ್ರಣ ಮಾಡಿ ಸೇವಿಸಿದಾಗ ಅದು ದೇಹಕ್ಕೆ ನಕಾರಾತ್ಮಕ ಪರಿಣಾಮವನ್ನು ಬೀರುವುದು ಹೆಚ್ಚು.

ಇದನ್ನೂ ಓದಿ:

Health Tips: ಬಾಳೆಹಣ್ಣು ಸೇವಿಸುವ ಅಭ್ಯಾಸ ಇದೆಯೇ? ಖಾಯಿಲೆಗಳಿಂದ ದೂರವಿರಲು ಹಣ್ಣುಗಳ ಸೇವನೆ ಉತ್ತಮ

Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ

Published On - 7:19 am, Thu, 8 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ