Head massage horror: ಬಳ್ಳಾರಿಯ ಸಲೂನ್​​​ನಲ್ಲಿ ತಲೆಗೆ ಮಸಾಜ್ ಮಾಡಿಕೊಂಡ ವ್ಯಕ್ತಿಗೆ ಪಾರ್ಶ್ವವಾಯು; ಇದಕ್ಕೆ ಕಾರಣವೇನು? ತಜ್ಞರು ಹೇಳುವುದೇನು?

ಬಳ್ಳಾರಿಯ ಸಲೂನ್ ಒಂದರಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಲೆಗೆ ಮಸಾಜ್ ಮಾಡಿಕೊಂಡ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕ್ಷೌರಿಕನು ತಲೆಗೆ ಮಸಾಜ್ ಮಾಡುವಾಗ ಕುತ್ತಿಗೆ ತಿರುಗಿಸಿದ್ದು, ವ್ಯಕ್ತಿ ಮಾತನಾಡಲು ಸಾಧ್ಯವಾಗದೆಯೇ ತನ್ನ ದೇಹದ ಎಡಭಾಗದ ಸಾಮರ್ಥ್ಯವನ್ನು ಪೂರ್ತಿಯಾಗಿ ಕಳೆದುಕೊಂಡಿದ್ದಾನೆ. ಈ ಘಟನೆ ನಡೆದು ಅವರು ಚೇತರಿಸಿಕೊಳ್ಳಲು ಎರಡು ತಿಂಗಳು ತೆಗೆದುಕೊಂಡಿದ್ದು. ಮಸಾಜ್, ಮೆದುಳಿಗೆ ರಕ್ತದ ಹರಿವನ್ನು ನಿಲ್ಲಿಸಿದ್ದು ಪಾರ್ಶ್ವವಾಯುವಿಗೆ ಕಾರಣವಾಯಿತು ಎಂದು ವರದಿಗಳು ಹೇಳುತ್ತವೆ. ಹಾಗಾದರೆ ಪಾರ್ಶ್ವವಾಯು ಉಂಟಾಗಲು ಕಾರಣವೇನು? ಇಲ್ಲಿದೆ ಮಾಹಿತಿ.

Head massage horror: ಬಳ್ಳಾರಿಯ ಸಲೂನ್​​​ನಲ್ಲಿ ತಲೆಗೆ ಮಸಾಜ್ ಮಾಡಿಕೊಂಡ ವ್ಯಕ್ತಿಗೆ ಪಾರ್ಶ್ವವಾಯು; ಇದಕ್ಕೆ ಕಾರಣವೇನು? ತಜ್ಞರು ಹೇಳುವುದೇನು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 30, 2024 | 12:23 PM

ಇತ್ತೀಚಿಗೆ ಬಳ್ಳಾರಿಯ ಸಲೂನ್ ಒಂದರಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಲೆಗೆ ಮಸಾಜ್ ಮಾಡಿಕೊಂಡ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕ್ಷೌರಿಕನು ತಲೆಗೆ ಮಸಾಜ್ ಮಾಡುವಾಗ ಕುತ್ತಿಗೆ ತಿರುಗಿಸಿದ್ದು, ವ್ಯಕ್ತಿ ಮಾತನಾಡಲು ಸಾಧ್ಯವಾಗದೆಯೇ ತನ್ನ ದೇಹದ ಎಡಭಾಗದ ಸಾಮರ್ಥ್ಯವನ್ನು ಪೂರ್ತಿಯಾಗಿ ಕಳೆದುಕೊಂಡಿದ್ದಾನೆ. ಈ ಘಟನೆ ನಡೆದು ಅವರು ಚೇತರಿಸಿಕೊಳ್ಳಲು ಎರಡು ತಿಂಗಳು ತೆಗೆದುಕೊಂಡಿದ್ದು. ಮಸಾಜ್, ಮೆದುಳಿಗೆ ರಕ್ತದ ಹರಿವನ್ನು ನಿಲ್ಲಿಸಿದ್ದು ಪಾರ್ಶ್ವವಾಯುವಿಗೆ ಕಾರಣವಾಯಿತು ಎಂದು ವರದಿಗಳು ಹೇಳುತ್ತವೆ. ಪ್ರತಿದಿನ ಒತ್ತಡದ ಜೀವಶೈಲಿಯನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಹಾಗಾಗಿ ತಲೆಗೆ ಮಸಾಜ್ ಮಾಡಿಕೊಳ್ಳುವುದಕ್ಕೆ ಇಷ್ಟಪಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾದರೆ ತಲೆ ಮಸಾಜ್ ಪಾರ್ಶ್ವವಾಯುವಿಗೆ ಕಾರಣವಾಗಬಹುದೇ ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗಾಗಿ ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಲು ನ್ಯೂಸ್9, ಪಾರ್ಶ್ವವಾಯುವಿಗೆ ಕಾರಣವೇನು? ಎಂಬುದರ ಕುರಿತಾಗಿ ಕೆಲವು ಮಾಹಿತಿಗಳನ್ನು ಕಲೆಹಾಕಿದೆ.

ತಜ್ಞರ ಅಭಿಪ್ರಾಯವೇನು?

ಮುಂಬೈನ ಗ್ಲೆನೆಗಲ್ಸ್ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಪಂಕಜ್ ಅಗರ್ವಾಲ್ ಅವರು ಈ ಬಗ್ಗೆ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದು “ಪ್ರತಿಯೊಬ್ಬರೂ ತಲೆಗೆ ಮಸಾಜ್ ಮಾಡಿಕೊಳ್ಳುವುದನ್ನು ಇಷ್ಟಪಡುತ್ತಾರೆ, ಆದರೆ ಇದನ್ನು ಮಾಡಿಸಿಕೊಳ್ಳುವಾಗ ಅತ್ಯಂತ ಜಾಗರೂಕರಾಗಿರಬೇಕು. ಇಲ್ಲವಾದಲ್ಲಿ ಇದು ವಿಶ್ರಾಂತಿ ನೀಡುವ ಬದಲು, ಆರೋಗ್ಯ ಹದಗೆಡಿಸಬಹುದು. ತಲೆಗೆ ಮಸಾಜ್ ಮಾಡಿಕೊಳ್ಳುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ, ಉದ್ವೇಗ ಕಡಿಮೆಯಾಗುತ್ತದೆ ಮತ್ತು ಪದೇ ಪದೇ ಬರುವ ತಲೆನೋವು ನಿವಾರಣೆಯಾಗಲು ಇದು ನಿಮಗೆ ಸಹಾಯ ಮಾಡುತ್ತದೆ. ಆದರೆ ಈ ಮೊದಲೇ ತೀವ್ರವಾದ ಅಧಿಕ ರಕ್ತದೊತ್ತಡ ಅಥವಾ ನಾಳೀಯ ಅಸ್ವಸ್ಥತೆಗಳನ್ನು ಹೊಂದಿರುವವರು ಬಹಳ ಜಾಗರೂಕರಾಗಿರಬೇಕು, ಏಕೆಂದರೆ ತಲೆಗೆ ಮಸಾಜ್ ಮಾಡಿಕೊಳ್ಳುವುದು ಪಾರ್ಶ್ವವಾಯುವಿಗೆ ಕಾರಣವಾಗಬಹುದು, ಜೊತೆಗೆ ಅದು ಮಾರಣಾಂತಿಕವಾಗಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಹದಲ್ಲಿ ಕಂಡುಬರುವ ಈ ಲಕ್ಷಣಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯಾಗಿರಬಹುದು!

ತಲೆಗೆ ಮಸಾಜ್ ಮಾಡುವುದರಿಂದ ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ?

ಡಾ. ಪಂಕಜ್ ಅಗರ್ವಾಲ್ ಹೇಳುವ ಪ್ರಕಾರ, “ಮಸಾಜ್ ಮಾಡುವ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದರಿಂದ ಅಥವಾ ಕುತ್ತಿಗೆ ತಿರುಚುವುದರಿಂದ ರಕ್ತನಾಳಗಳ ಮೇಲೆ ಅತಿಯಾದ ಒತ್ತಡ ಉಂಟಾಗಿ, ಮೆದುಳಿಗೆ ರಕ್ತದ ಹರಿವು ಅಡ್ಡಿಯಾದಾಗ ಅಥವಾ ಕಡಿಮೆಯಾದಾಗ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಜೊತೆಗೆ ಮೆದುಳಿಗೆ ಹಾನಿಯನ್ನುಂಟು ಮಾಡುತ್ತದೆ. ಈ ಪಾರ್ಶ್ವವಾಯುವನ್ನು “ಸಲೂನ್ ಸ್ಟ್ರೋಕ್” ಅಥವಾ “ಬ್ಯೂಟಿ ಪಾರ್ಲರ್ ಸ್ಟ್ರೋಕ್” ಎಂದು ಕರೆಯಬಹುದು” ಎಂದಿದ್ದಾರೆ.

“ಹಾಗಾಗಿ ಯಾರೇ ಆಗಲಿ ತಲೆಗೆ ಮಸಾಜ್ ಮಾಡುವಾಗ ಬಹಳ ಜಾಗರೂಕರಾಗಿರುವುದು ಕಡ್ಡಾಯವಾಗಿದೆ. ಮಸಾಜ್ ಮಾಡುವವರು ಚೆನ್ನಾಗಿ ತರಬೇತಿ ಪಡೆದಿದ್ದು ಯಾವುದೇ ರೀತಿಯಲ್ಲಿಯೂ ಅಗತ್ಯಕ್ಕಿಂತ ಹೆಚ್ಚಾಗಿ ಒತ್ತಡ ಹಾಕುವುದಿಲ್ಲ ಎಂಬುದನ್ನು ಮೊದಲೇ ಖಚಿತಪಡಿಸಿಕೊಳ್ಳಿ. ಮಸಾಜ್ ಮಾಡುವಾಗ ತಲೆನೋವು, ವಾಕರಿಕೆ, ವಾಂತಿ ಅಥವಾ ಕುತ್ತಿಗೆ ನೋವು ಕಾಣಿಸಿಕೊಂಡರೆ ಮಸಾಜ್ ಮಾಡುವುದನ್ನು ನಿಲ್ಲಿಸಲು ಹೇಳಿ. ಬಳಿಕ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಚಿಕಿತ್ಸೆ ವಿಳಂಬವಾದರೆ ಪಾರ್ಶ್ವವಾಯು ಅಥವಾ ಪ್ರಾಣಹಾನಿಯಾಗಬಹುದು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ