AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ?

ಕಣ್ಣುಗಳ ಮೇಲೆ ನೋವು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿ ಕಂಡುಬರುವ ನೋವು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯಾಗಿರಬಹುದೇ? ಅಥವಾ ಅದು ಕಣ್ಣಿಗೆ ಸಂಬಂಧಿಸಿದ ಕಾಯಿಲೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹ ಮುಖ್ಯವಾಗುತ್ತದೆ. ವೈದ್ಯರು ಹೇಳುವ ಪ್ರಕಾರ, ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇವುಗಳ ಬಗ್ಗೆ ತಿಳಿದುಕೊಂಡು ಮೊದಲ ಹಂತದಲ್ಲಿಯೇ ಅದನ್ನು ತಡೆಗಟ್ಟುವ ಮಾರ್ಗವನ್ನು ಕಂಡುಕೊಳ್ಳಿ.

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ?
Eye Pain And HeadachesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 26, 2026 | 6:29 PM

Share

ಕಣ್ಣುಗಳ ಮೇಲೆ ನೋವು ಕಂಡುಬರುವುದು ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಅನೇಕರು ಅದನ್ನು ತಲೆನೋವಿಗೆ (Headache) ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಹಾಗಾಗಿ ನೋವು ಹೆಚ್ಚಾದಾಗ ಅದಕ್ಕೆ ಸಂಬಂಧಿಸಿದ ವೈದ್ಯರ ಸಲಹೆ ಪಡೆಯುತ್ತಾರೆ. ಅನೇಕರು, ಸಿಟಿ ಸ್ಕ್ಯಾನ್ ಅನ್ನು ಸಹ ಮಾಡುತ್ತಾರೆ, ಆದರೆ ವರದಿಯಲ್ಲಿ ಯಾವುದೇ ಸಮಸ್ಯೆಗಳು ಕೂಡ ಕಂಡುಬರುವುದಿಲ್ಲ. ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇವುಗಳ ಬಗ್ಗೆ ತಿಳಿದುಕೊಂಡು ಮೊದಲ ಹಂತದಲ್ಲಿಯೇ ಅದನ್ನು ತಡೆಗಟ್ಟುವ ಮಾರ್ಗವನ್ನು ಕಂಡುಕೊಳ್ಳಿ.

ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ಹಿರಿಯ ನಿವಾಸಿ ಡಾ. ದೀಪಕ್ ಸುಮನ್ ಹೇಳುವ ಪ್ರಕಾರ, ಕಣ್ಣುಗಳ ಮೇಲೆ ತಲೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಪ್ರಮುಖ ಕಾರಣ ಕನ್ನಡಕದ ಪಾಯಿಂಟ್ ಬದಲಾಗಿರಬಹುದು. ಆಗಾಗ ದೃಷ್ಟಿ ದುರ್ಬಲಗೊಳ್ಳುತ್ತದೆ, ಆದರೆ ವ್ಯಕ್ತಿ ಕನ್ನಡಕದ ಪ್ರಿಸ್ಕ್ರಿಪ್ಷನ್ ಅನ್ನು ಬದಲಾಯಿಸುವುದಿಲ್ಲ. ಈ ಕಾರಣದಿಂದಾಗಿ, ಕಣ್ಣುಗಳ ಮೇಲೆ ಒತ್ತಡವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದು ದೃಷ್ಟಿಯ ಮೇಲೆ ಪರಿಣಾಮ ಬೀರುತ್ತದೆ, ಇದು ಹಣೆಯವರೆಗೆ ವಿಸ್ತರಿಸಿ ನೋವಿಗೆ ಕಾರಣವಾಗುತ್ತದೆ. ಜೊತೆಗೆ ತಲೆಯಲ್ಲಿ ಭಾರ, ನೋವು ಮತ್ತು ಕೆಲವು ಸಂದರ್ಭಗಳಲ್ಲಿ, ದೃಷ್ಟಿ ಮಂದವಾಗುವುದಕ್ಕೂ ಕೂಡ ಕಾರಣವಾಗಬಹುದು.

ಇದನ್ನೂ ಓದಿ: ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ?

ಮೆದುಳಿಗೆ ಸಂಬಂಧಿಸಿದ ಸಮಸ್ಯೆ ಯಾವಾಗ ಬರಬಹುದು?

ಕಣ್ಣುಗಳ ಮೇಲೆ ಮಾತ್ರ ನೋವು ಕಂಡುಬರುತ್ತಿದ್ದರೆ ಅದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯನ್ನು ಉಂಟುಮಾಡುವುದು ಬಹಳ ವಿರಳ. ಆದರೆ ಇವುಗಳ ಜೊತೆಗೆ ಕೆಲವು ಇತರ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡಬಾರದು. ಅಂದರೆ ಹಣೆಯಿಂದ ಕತ್ತಿನ ಹಿಂಭಾಗದವರೆಗೆ ವಿಸ್ತರಿಸುವ ತಲೆನೋವು, ತಲೆತಿರುಗುವಿಕೆ, ದೇಹದ ಯಾವುದೇ ಭಾಗದಲ್ಲಿ ಹಠಾತ್ ಮರಗಟ್ಟುವಿಕೆ ಅಥವಾ ಪದೇ ಪದೇ ವಾಂತಿ ಮಾಡುವುದು. ಈ ಎಲ್ಲಾ ಲಕ್ಷಣಗಳು ಕಂಡುಬಂದರೆ, ಅದು ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಯಲ್ಲ ಆದರೆ ಮೆದುಳಿಗೆ ಸಂಬಂಧ ಪಟ್ಟ ಸಮಸ್ಯೆ ಎಂದು ಸ್ಪಷ್ಟವಾಗಿ ತಿಳಿಯಬಹುದು. ಇಂತಹ ಲಕ್ಷಣಗಳು ಸಾಮಾನ್ಯವಾಗಿ ಮೆದುಳಿನಲ್ಲಿ ಊತ ಅಥವಾ ಗೆಡ್ಡೆಯಿಂದ ಉಂಟಾಗುತ್ತವೆ. ಹಾಗಾಗಿ ಈ ರೀತಿಯ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ.

ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಸಲಹೆಗಳು:

  • ಪ್ರತಿ 6 ತಿಂಗಳಿಗೊಮ್ಮೆ ಕಣ್ಣುಗಳನ್ನು ಪರೀಕ್ಷಿಸಿಕೊಳ್ಳಿ.
  • ಮೊಬೈಲ್ ಮತ್ತು ಟಿವಿ ನೋಡುವುದನ್ನು ಕಡಿಮೆ ಮಾಡಿ.
  • ಸರಿಯಾದ ಆಹಾರ ಸೇವನೆ ಮಾಡುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ