AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ದಾಳಿಂಬೆ ಹಣ್ಣಿನಲ್ಲಿದೆ ಪರಿಹಾರ

ಮಹಿಳೆಯರಿಗೆ ಈ ದಾಳಿಂಬೆ ಹಣ್ಣುಗಳಿಂದ ಸಾಕಷ್ಟು ಪ್ರಯೋಜನಗಳಿವೆ. ದಾಳಿಂಬೆ ಹಣ್ಣು ಆರೋಗ್ಯಕರ ಚರ್ಮವನ್ನು ನೀಡುತ್ತದೆ. ದಾಳಿಂಬೆ ನಿಮ್ಮ ಚರ್ಮವನ್ನು ಒಳಗಿನಿಂದ ಹೈಡ್ರೇಟ್ ಮಾಡುತ್ತದೆ. ಗರ್ಭಾಶಯಕ್ಕೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ ಹೀಗಾಗಿ, ಇದು ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮತ್ತು ಗರ್ಭಿಣಿಯಾಗಿರುವ ಮಹಿಳೆಯರಿಗೆ ದಾಳಿಂಬೆ ಅತ್ಯುತ್ತಮ ಹಣ್ಣಾಗಿದೆ.

ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ದಾಳಿಂಬೆ ಹಣ್ಣಿನಲ್ಲಿದೆ ಪರಿಹಾರ
ದಾಳಿಂಬೆImage Credit source: pexels.com
ಸುಷ್ಮಾ ಚಕ್ರೆ
|

Updated on: Sep 22, 2023 | 8:25 PM

Share

ದಾಳಿಂಬೆ ಹಣ್ಣುಗಳು ಎಷ್ಟು ರುಚಿಯೋ ಅಷ್ಟೇ ಆರೋಗ್ಯಕರವೂ ಹೌದು. ಕೆಂಪನೆಯ ಬೀಜಗಳಿಂದ ತುಂಬಿರುವ ದಾಳಿಂಬೆ ಹಣ್ಣು ಕಡಿಮೆ ಕ್ಯಾಲೋರಿಗಳು ಮತ್ತು ಕೊಬ್ಬನ್ನು ಹೊಂದಿರುತ್ತದೆ. ಆದರೆ ಇದರಲ್ಲಿ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಹೆಚ್ಚಾಗಿರುತ್ತದೆ. ಅದರಲ್ಲೂ ಮಹಿಳೆಯರಿಗೆ ಈ ದಾಳಿಂಬೆ ಹಣ್ಣುಗಳಿಂದ ಸಾಕಷ್ಟು ಪ್ರಯೋಜನಗಳಿವೆ.

ದಾಳಿಂಬೆಗಳು ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲಿಕ್ ಸಂಯುಕ್ತಗಳಲ್ಲಿ ಸಮೃದ್ಧವಾಗಿದೆ. ಈ ಹಣ್ಣು ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕ್ಯಾನ್ಸರ್ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿಯಂತ್ರಣದಲ್ಲಿ ಇಡುತ್ತದೆ.

ದಾಳಿಂಬೆ ಹಣ್ಣು ಎಲಾಜಿಟಾನಿನ್ಸ್ ಎಂಬ ಆ್ಯಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಮೂಲಕ ಮತ್ತು ಮೆದುಳಿನ ಕೋಶಗಳ ಬೆಳವಣಿಗೆಯನ್ನು ಹೆಚ್ಚಿಸುವ ಮೂಲಕ ಆಲ್ಝೈಮರ್ ಮತ್ತು ಪಾರ್ಕಿನ್ಸನ್ ಕಾಯಿಲೆಯ ವಿರುದ್ಧ ಮೆದುಳನ್ನು ರಕ್ಷಿಸಲು ಎಲಾಜಿಟಾನಿನ್‌ಗಳು ಸಹಾಯ ಮಾಡುತ್ತವೆ ಎಂದು ಕೆಲವು ಅಧ್ಯಯನಗಳು ಕಂಡುಹಿಡಿದಿದೆ.

ಇದನ್ನೂ ಓದಿ: Kashmiri Kahwa Tea: ಅದ್ಭುತವಾದ ಕಾಶ್ಮೀರಿ ಕಹ್ವಾ ಚಹಾದ ಪ್ರಯೋಜನ ಕೇಳಿದ್ರೆ ಅಚ್ಚರಿ ಪಡ್ತೀರ!

ದಾಳಿಂಬೆ ಹಣ್ಣು ಆರೋಗ್ಯಕರ ಚರ್ಮವನ್ನು ನೀಡುತ್ತದೆ. ದಾಳಿಂಬೆ ನಿಮ್ಮ ಚರ್ಮವನ್ನು ಒಳಗಿನಿಂದ ಹೈಡ್ರೇಟ್ ಮಾಡುತ್ತದೆ. ಇದು ಒಣ ಚರ್ಮ ಮತ್ತು ತುರಿಕೆಯನ್ನು ತಡೆಯುತ್ತದೆ, ಮೊಡವೆಗಳನ್ನು ತಡೆಯುತ್ತದೆ. ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ದಾಳಿಂಬೆ ಹಣ್ಣು ಚರ್ಮದ ಸುಕ್ಕುಗಳನ್ನು ತಡೆಯುತ್ತದೆ. ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ.

ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯ ರೀತಿಯ ಕ್ಯಾನ್ಸರ್ ಆಗಿದೆ. ದಾಳಿಂಬೆ ಕ್ಯಾನ್ಸರ್ ಕೋಶಗಳ ಉತ್ಪಾದನೆಯನ್ನು ತಡೆಯುತ್ತದೆ. ದಾಳಿಂಬೆ ಕೂದಲಿನ ಬೇರುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ಕೂದಲ ಬೆಳವಣಿಗೆಯನ್ನು ಉತ್ತೇಜಿಸುವುದು ಮಾತ್ರವಲ್ಲದೆ ನೆತ್ತಿಯ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Lychee Side Effects: ಅತಿಯಾಗಿ ಲಿಚಿ ಹಣ್ಣು ತಿಂದರೆ ಏನಾಗುತ್ತೆ?

ದಾಳಿಂಬೆ ಹಣ್ಣು ಆರೋಗ್ಯಕರ ಗರ್ಭಾಶಯದ ಒಳಪದರವನ್ನು ಉತ್ತೇಜಿಸುತ್ತದೆ. ಗರ್ಭಾಶಯಕ್ಕೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ ಹೀಗಾಗಿ, ಇದು ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮತ್ತು ಗರ್ಭಿಣಿಯಾಗಿರುವ ಮಹಿಳೆಯರಿಗೆ ಅತ್ಯುತ್ತಮ ಹಣ್ಣಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್