AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ನೈಸರ್ಗಿಕವಾಗಿ ದೊರೆಯುವ ಮತ್ತು ಆರೋಗ್ಯಕ್ಕೂ ಕೂಡ ಹೆಚ್ಚು ಉಪಯುಕ್ತವಾದವುಗಳಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಈ ಹಣ್ಣು ಪೋಷಕಾಂಶ ಭರಿತವಾಗಿದ್ದು, ಹಲವು ಕಾಯಿಲೆಗಳಿಗೆ ಪರಿಹಾರವಾಗಿದೆ.

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ
ನೇರಳೆ ಹಣ್ಣು
TV9 Web
| Edited By: |

Updated on:Jun 13, 2021 | 7:33 AM

Share

ನಾವು ಸಂಪೂರ್ಣವಾಗಿ ಆರೋಗ್ಯವಾಗಿರಲು ಬಯಸಿದರೆ ಪ್ರಕೃತಿಯಲ್ಲಿ ಸುಲಭವಾಗಿ ಲಭ್ಯವಿರುವ ಆಹಾರವನ್ನು ಮೊದಲು ನಾವು ಆಯ್ಕೆ ಮಾಡಿಕೊಳ್ಳಬೇಕು. ನೈಸರ್ಗಿಕವಾಗಿ ದೊರೆಯುವ ಮತ್ತು ಆರೋಗ್ಯಕ್ಕೂ ಕೂಡ ಹೆಚ್ಚು ಉಪಯುಕ್ತವಾದವುಗಳಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಈ ಹಣ್ಣು ಪೋಷಕಾಂಶ ಭರಿತವಾಗಿದ್ದು, ಹಲವು ಕಾಯಿಲೆಗಳಿಗೆ ಪರಿಹಾರವಾಗಿದೆ. ನೇರಳೆ ಹಣ್ಣು ಮಾತ್ರವಲ್ಲ ಇದರ ಎಲೆ ಮತ್ತು ತೊಗಟೆ ಕೂಡ ದೇಹಕ್ಕೆ ತುಂಬಾ ಒಳ್ಳೆಯದು. ನೇರಳೆ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ. *ದೀರ್ಘಕಾಲದವರೆಗೆ ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ತೊಡೆದುಹಾಕಲು ನೇರಳೆ ಹಣ್ಣು ತಿನ್ನುವುದು ಒಳ್ಳೆಯದು. *  ಮಧುಮೇಹದಂತಹ ಕಾಯಿಲೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸುವುದು ಉತ್ತಮ. * ಕೆಲವೊಮ್ಮೆ ಕರಳಿನಲ್ಲಿ ಕೂದಲು ಸೇರುವ ಸಾಧ್ಯತೆ ಇರುತ್ತದೆ. ಇದನ್ನು ಹೊರಹಾಕುವ ಶಕ್ತಿ ನೇರಳೆ ಹಣ್ಣಿಗೆ ಇದೆ. * ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸಿತ್ತದೆ ಮತ್ತು ರೋಗದ ತೀವ್ರತೆಯನ್ನು ಕಡಿಮೆ ಮಾಡುತ್ತದೆ. * ಮೂತ್ರದ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. * ಬಂಜೆತನ ಇರುವವರು ನೇರಳೆ ಹಣ್ಣು ತಿನ್ನುವುದರಿಂದ ತ್ವರಿತ ಶಕ್ತಿಯನ್ನು ಪಡೆಯುತ್ತಾರೆ. * ಬೆನ್ನು ನೋವು, ಮೊಣಕಾಲು ನೋನಿನಂತಹ ಸಮಸ್ಯೆಯನ್ನು ದೂರ ಮಾಡುತ್ತದೆ. * ಅತಿಸಾರದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ರಸವನ್ನು ಎರಡು ಮೂರು ಚಮಚ ನೀಡಬೇಕು. * ಕೆಲವು ಅಧ್ಯಯನಗಳು ನೇರಳೆ ಹಣ್ಣು ಯಕೃತ್ತಿನ ಕಾರ್ಯವನ್ನು ನಿಯಂತ್ರಿಸಲು ಅಥವಾ ಶುದ್ಧೀಕರಿಸಲು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದೆ. * ಈ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿಗೆ ಮತ್ತು ಹೃದಯಕ್ಕೆ ಹೆಚ್ಚು ಉಪಯುಕ್ತಕಾರಿಯಾಗಿದೆ. * ಜ್ವರ ಬಂದಾಗ ಕೊತ್ತಂಬರಿ ರಸದೊಂದಿಗೆ ನೇರಳೆ ಹಣ್ಣಿನ ಜ್ಯೂಸ್ ಸೇವಿಸಿದರೆ, ದೇಹದ ಉಷ್ಣತೆ ಕಡಿಮೆಯಾಗುತ್ತದೆ. * ಮೂತ್ರದ ಉರಿಯೂತವನ್ನು ಕಡಿಮೆ ಮಾಡಲು ನಿಂಬೆ ರಸ ಮತ್ತು ನೇರಳೆ ಹಣ್ಣಿನ ರಸವನ್ನು ಎರಡು ಚಮಚ ನೀರಿನಲ್ಲಿ ಬೇರೆಸಿ ಸೇವಿಸಬೇಕು. * ಅಧಿಕ ತೂಕ ಹೊಂದಿರುವ ಜನರು ದಿನಕ್ಕೆ ಆರರಿಂದ ಎಂಟು ಬಾರಿ ನೇರಳೆ ಹಣ್ಣನ್ನು ತಿನ್ನಬಹುದು ಏಕೆಂದರೆ ಇದು ಕೊಬ್ಬಿನಾಂಶವನ್ನು ದೂರ ಮಾಡುತ್ತದೆ. * ದಿನಕ್ಕೆ ಒಂದು ಬಾರಿ ನೇರಳೆ ಹಣ್ಣು ಸೇವಿಸುವುದರಿಂದ ಆಗಾಗ ವೈದ್ಯರನ್ನು ಭೇಟಿಯಾಗಬೇಕಾದ ಅನಿವಾರ್ಯತೆ ಇರುವುದಿಲ್ಲ. ಗರ್ಭಿಣಿಯರು ನೇರಳೆ ಹಣ್ಣು ತಿನ್ನಬಾರದು. ಏಕೆಂದರೆ ಇದು ಕರಗಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಈ ಹಣ್ಣುಗಳನ್ನು ಊಟ ಮಾಡಿದ ಒಂದು ಗಂಟೆಯ ನಂತರ ತೆಗೆದುಕೊಂಡರೆ ಆಹಾರ ಜೀರ್ಣವಾಗುತ್ತದೆ.

ಇದನ್ನೂ ಓದಿ:

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

Health Tips: ಮೊಸರಿನೊಂದಿಗೆ ಇತರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇದೆಯೇ? ನಿಮ್ಮ ಆಹಾರ ಸೇವನೆ ಬಗ್ಗೆ ಎಚ್ಚರ ಇರಲಿ

Published On - 7:32 am, Sun, 13 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್