AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿಯ ನೀರು ಕುಡಿಯಿರಿ; ತಜ್ಞರ ಸಲಹೆ ಇಲ್ಲಿದೆ

ರಾತ್ರಿಯಿಡೀ ಬೆಂಡೆಕಾಯಿಯನ್ನು ನೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಈ ನೀರನ್ನು ಕುಡಿಯಿರಿ. ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಸಲಹೆ ನೀಡು್ತಾರೆ.

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿಯ ನೀರು ಕುಡಿಯಿರಿ; ತಜ್ಞರ ಸಲಹೆ ಇಲ್ಲಿದೆ
ನೆನೆಸಿಟ್ಟ ಬೆಂಡೆಕಾಯಿಯ ನೀರು
ಅಕ್ಷತಾ ವರ್ಕಾಡಿ
|

Updated on: Mar 15, 2024 | 8:44 PM

Share

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ರಾತ್ರಿಯಿಡೀ ಬೆಂಡೆಕಾಯಿಯನ್ನು ನೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಈ ನೀರನ್ನು ಕುಡಿಯಿರಿ. ಮೊದಲು ನಾಲ್ಕು ಎಳೆಯ ಬೆಂಡೆಕಾಯಿಗಳನ್ನು ತೆಗೆದುಕೊಂಡು ಅವುಗಳನ್ನು ಸ್ವಚ್ಛವಾಗಿ ತೊಳೆಯಿರಿ. ಅದರ ನಂತರ ಅವುಗಳನ್ನು ಲಂಬವಾಗಿ ಅಥವಾ ಅಡ್ಡಲಾಗಿ ಕತ್ತರಿಸಿ. ಒಂದು ಪಾತ್ರೆಯಲ್ಲಿ ಕತ್ತರಿಸಿದ ಬೆಂಡೆಕಾಯಿ ತುಂಡುಗಳನ್ನು ಮತ್ತು ನೀರು ಹಾಕಿ ಮುಚ್ಚಿಡಿ. ರಾತ್ರಿಯಿಡೀ ನೀರಿನಲ್ಲಿ ಚೆನ್ನಾಗಿ ನೆನೆಸಿದ ನಂತರ ಮರುದಿನ ಬೆಂಡೆಕಾಯಿ ನೀರನ್ನು ಸೋಸಿ ನೀರು ಕುಡಿಯಿರಿ. ಇದರ ಪ್ರಯೋಜನಗಳನ್ನು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ.

ಬೆಂಡೆಕಾಯಿ ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು, ಫೈಬರ್, ಮ್ಯಾಂಗನೀಸ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದರಲ್ಲಿ ವಿಟಮಿನ್ ಬಿ, ಸಿ, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಲ್ಲದೆ, ಫೆನ್ನೆಲ್ ನೀರು ದೇಹವನ್ನು ಹೈಡ್ರೇಟ್ ಮಾಡಲು ಮತ್ತು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿ ಮ್ಯಾಂಗನೀಸ್ ಅನ್ನು ಹೊಂದಿರುತ್ತದೆ. ಇದು ಚಯಾಪಚಯ ಮತ್ತು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಪ್ರಮುಖ ಖನಿಜವಾಗಿದೆ.

ಇದನ್ನೂ ಓದಿ: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

ನೆನೆಸಿಟ್ಟ ಬೆಂಡೆಕಾಯಿ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಬೆಂಡೆಕಾಯಿ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿ ತೂಕ ಇಳಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿಯನ್ನು ಬೇಯಿಸುವಾಗ ಕಡಿಮೆ ಎಣ್ಣೆಯನ್ನು ಬಳಸುವುದು ತುಂಬಾ ಆರೋಗ್ಯಕ್ಕೆ ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್