ವೈದ್ಯರು ನಿಯಮಿತವಾಗಿ ಆವಕಾಡೊ ಸೇವನೆ ಮಾಡಿ ಎನ್ನಲು ಕಾರಣವೇನು?

ಆವಕಾಡೊ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಇದರಲ್ಲಿ ಅಮೃತವೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪೌಷ್ಟಿಕ ತಜ್ಞರ ಪ್ರಕಾರ, ನಿಯಮಿತವಾಗಿ ಆವಕಾಡೊವನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನವಿದೆ ಎಂಬುದು ಅಧ್ಯಯನಗಳಿಂದ ಸಾಬೀತಾಗಿದೆ. ಅದಲ್ಲದೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯಿಂದಲೂ ಮುಕ್ತಿ ಪಡೆಯಲು ಇದು ಸಹಾಯ ಮಾಡುತ್ತದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ವೈದ್ಯರು ನಿಯಮಿತವಾಗಿ ಆವಕಾಡೊ ಸೇವನೆ ಮಾಡಿ ಎನ್ನಲು ಕಾರಣವೇನು?
ಸಾಂದರ್ಭಿಕ ಚಿತ್ರ
Edited By:

Updated on: Mar 04, 2025 | 12:53 PM

ಆವಕಾಡೊ ಹಣ್ಣಿನ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ. ಇದು ರುಚಿಯ ಜೊತೆಗೆ ಆರೋಗ್ಯಕರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಬೆಲೆ ಮಾರುಕಟ್ಟೆಯಲ್ಲಿ ತುಂಬಾ ಹೆಚ್ಚಾಗಿದ್ದರೂ ಕೂಡ ಇದರ ಆರೋಗ್ಯಕರ ಗುಣಗಳಿಂದಾಗಿ ಜನ ಇದನ್ನು ಮುಗಿಬಿದ್ದು ಖರೀದಿಸುತ್ತಾರೆ. ಆವಕಾಡೊ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಇದರಲ್ಲಿ ಅಮೃತವೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪೌಷ್ಟಿಕ ತಜ್ಞರ ಪ್ರಕಾರ, ನಿಯಮಿತವಾಗಿ ಆವಕಾಡೊವನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನವಿದೆ ಎಂಬುದು ಅಧ್ಯಯನಗಳಿಂದ ಸಾಬೀತಾಗಿದೆ. ಅದಲ್ಲದೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯಿಂದಲೂ ಮುಕ್ತಿ ಪಡೆಯಲು ಇದು ಸಹಾಯ ಮಾಡುತ್ತದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಆವಕಾಡೊ ಏಕೆ ತಿನ್ನಬೇಕು?

ಸಾಮಾನ್ಯವಾಗಿ ನಮ್ಮ ಆರೋಗ್ಯವು ಚೆನ್ನಾಗಿದ್ದರೆ ಆಸ್ಪತ್ರೆಯಿಂದ ದೂರವಿರಬಹುದು. ಈ ರೀತಿಯಾಗಲು ನಮ್ಮ ಆಹಾರದ ಆಯ್ಕೆ ಸರಿಯಾಗಿ ಇರಬೇಕು ಆಗ ಮಾತ್ರ ದೇಹ ಚೆನ್ನಾಗಿರುತ್ತದೆ. ಇಂತಹ ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಆವಕಾಡೊ ಕೂಡ ಒಂದು. ಇದರಲ್ಲಿ ಅನೇಕ ರೀತಿಯ ಪೋಷಕಾಂಶಗಳಿವೆ. ಜೊತೆಗೆ ವಿಟಮಿನ್ ಗಳು, ಖನಿಜಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಫೋಲೇಟ್ ಮತ್ತು ಫೈಬರ್ ಇದೆ. ಇದು ನಮ್ಮ ಆರೋಗ್ಯವನ್ನು ಸುಧಾರಿಸಲು ಸಾಕಷ್ಟು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡಬಹುದು.

ಹೃದಯದ ಆರೋಗ್ಯ ಕಾಪಾಡುತ್ತದೆ

ಆವಕಾಡೊಗಳಲ್ಲಿ ಲಭ್ಯವಿರುವ ಪೋಷಕಾಂಶಗಳು ಮತ್ತು ಫೈಬರ್ ಅಂಶವು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ
ಟ್ಯಾಟೂ ಹಾಕಿಸುವ ಮೊದಲು ಈ ಅಂಶ ನೆನಪಿನಲ್ಲಿರಲಿ
ಹಕ್ಕಿ ಜ್ವರ ಹೇಗೆ ಹರಡುತ್ತೆ? ರೋಗಲಕ್ಷಣಗಳೇನು? ಬರದಂತೆ ತಡೆಯಲು ಈ ಸಲಹೆ
ಅಣಬೆಗಳು ಈ ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ
ರೇಬಿಸ್: ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ 8 ಸಾವು, ಬೆಂಗಳೂರಿನಲ್ಲೇ ಹೆಚ್ಚು

ತೂಕ ನಿಯಂತ್ರಣಕ್ಕೆ ಸಹಕಾರಿ

ಆವಕಾಡೊಗಳು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ. ಇದು ನಿಮ್ಮ ಹಸಿವನ್ನು ಕಡಿಮೆ ಮಾಡುವ ಮೂಲಕ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಬೊಜ್ಜನ್ನು ಕಡಿಮೆ ಮಾಡುತ್ತದೆ. ಕ್ರಮೇಣ ನೀವು ಸ್ಲಿಮ್ ಆಗಬಹುದು.

ಚರ್ಮಕ್ಕೆ ಒಳ್ಳೆಯದು

ಆವಕಾಡೊಗಳಲ್ಲಿ ಕಂಡು ಬರುವ ಜೀವಸತ್ವಗಳು ಮತ್ತು ಇತರ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಫೋಲೇಟ್ ಮತ್ತು ವಿಟಮಿನ್ ಇ ಅನ್ನು ಸಹ ಹೊಂದಿರುತ್ತದೆ. ಅವು ಚರ್ಮವನ್ನು ಆರೋಗ್ಯವಾಗಿ ಇಡಲು ಸಹಾಯ ಮಾಡುತ್ತವೆ.

ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು

ಆವಕಾಡೊಗಳಲ್ಲಿ ನೈಸರ್ಗಿಕವಾಗಿ ಕಂಡು ಬರುವ ಫೈಬರ್, ಫೋಲೇಟ್ ಮತ್ತು ಜೀವಸತ್ವಗಳು ನಿಮ್ಮ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಅಂಶಗಳು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಾನಸಿಕ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಇದನ್ನೂ ಓದಿ: ಟ್ಯಾಟೂ ಹಾಕಿಸುವ ಮೊದಲು ಈ ಅಂಶ ನೆನಪಿನಲ್ಲಿರಲಿ

ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ

ಆವಕಾಡೊದಲ್ಲಿ ಲಭ್ಯವಿರುವ ಫೈಬರ್ ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ ಮತ್ತು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ