AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಬರಬಾರದು ಎಂದರೆ ಈ ಹಣ್ಣು ತಿನ್ನುವುದನ್ನು ಮರೆಯಬೇಡಿ

ಬೋರೆ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಖನಿಜ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಸ್ನಾಯುಗಳು, ನರಮಂಡಲ ಮತ್ತು ಚರ್ಮಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳಿಂದ ತುಂಬಿದೆ. ಬೋರೆ ಹಣ್ಣುಗಳಲ್ಲಿರುವ ಪೊಟ್ಯಾಸಿಯಮ್, ರಂಜಕ, ಮ್ಯಾಂಗನೀಸ್, ಕಬ್ಬಿಣ ಹಾಗೂ ಸತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದರಲ್ಲಿರುವ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಋತುವಿನಲ್ಲಿ ಇದನ್ನು ತಪ್ಪದೆ ಸೇವನೆ ಮಾಡಬೇಕು ಎನ್ನಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕ್ಯಾನ್ಸರ್ ಬರಬಾರದು ಎಂದರೆ ಈ ಹಣ್ಣು ತಿನ್ನುವುದನ್ನು ಮರೆಯಬೇಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Dec 05, 2024 | 11:15 AM

Share

ಬೋರೆ ಹಣ್ಣು, ಬಾರೆ ಹಣ್ಣು, ಬುಗುರಿ ಹಣ್ಣು ಹೀಗೆ ನಾನಾ ಹೆಸರುಗಳಿಂದ ಕರೆಸಿಕೊಳ್ಳುವ ಹಣ್ಣನ್ನು ನೀವು ತಿಂದಿರಬಹುದು. ಇದು ಬಾಲ್ಯದ ನೆನಪನ್ನು ಮತ್ತೆ ಹಸುರಾಗಿಸುತ್ತದೆ. ಈ ಋತುವಿನಲ್ಲಿ ಮಾರುಕಟ್ಟೆಯಲ್ಲಿ ಯಥೇಚ್ಛವಾಗಿ ಮಾರಾಟ ಮಾಡಲಾಗುವ ಈ ಹಣ್ಣಿನ ಬಣ್ಣ, ಆಕಾರವೇ ಇದನ್ನು ಖರೀದಿಸುವಂತೆ ಮಾಡುತ್ತದೆ. ಅದರಲ್ಲಿಯೂ ಇವುಗಳ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಲ್ಲಿ ವಿಟಮಿನ್ ಎ, ಸಿ ಮತ್ತು ಖನಿಜ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಸ್ನಾಯುಗಳು, ನರಮಂಡಲ ಮತ್ತು ಚರ್ಮಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳಿಂದ ತುಂಬಿದೆ. ಬೋರೆ ಹಣ್ಣುಗಳಲ್ಲಿರುವ ಪೊಟ್ಯಾಸಿಯಮ್, ರಂಜಕ, ಮ್ಯಾಂಗನೀಸ್, ಕಬ್ಬಿಣ ಹಾಗೂ ಸತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದರಲ್ಲಿರುವ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಋತುವಿನಲ್ಲಿ ಇದನ್ನು ತಪ್ಪದೆ ಸೇವನೆ ಮಾಡಬೇಕು ಎನ್ನಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು

ಬೋರೆ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿದ್ದು ಇದು ಮೈಬಣ್ಣಕ್ಕೆ ಹೆಚ್ಚಿನ ಕಾಂತಿ ನೀಡಲು ಸಹಕಾರಿಯಾಗಿದೆ. ಅಲ್ಲದೆ ಮೊಡವೆಗಳು ಇಲ್ಲದಂತೆ ಚರ್ಮವನ್ನು ರಕ್ಷಿಸುತ್ತದೆ. ಈ ಹಣ್ಣನ್ನು ಒಣಗಿಸಿ ತಿನ್ನುವುದರಿಂದ ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ರಂಜಕದ ಅಂಶ ಮೂಳೆಗಳನ್ನು ಬಲಪಡಿಸಲು ಬಹಳ ಉಪಯುಕ್ತವಾಗಿದೆ. ಅಲ್ಲದೆ ಈ ಹಣ್ಣುಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಆಂಟಿಆಕ್ಸಿಡೆಂಟ್ ಫೈಟೊಕೆಮಿಕಲ್ಸ್, ಪಾಲಿಸ್ಯಾಕರೈಡ್ಗಳು, ಫ್ಲೇವನಾಯ್ಡ್ಗಳು ಮತ್ತು ಸಪೋನಿನ್ಗಳು ಉತ್ತಮ ನಿದ್ರೆಗೆ ಸಹಾಯ ಮಾಡುತ್ತವೆ. ಅದಲ್ಲದೆ ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಗುಣವನ್ನು ಹೊಂದಿರುವುದರಿಂದ ಮಧುಮೇಹಿಗಳಿಗೂ ಒಳ್ಳೆಯದು. ಮಲಬದ್ಧತೆಯ ಸಮಸ್ಯೆ ಇರುವವರು ಇದನ್ನು ನಿಯಮಿತವಾಗಿ ಸೇವನೆ ಮಾಡುವುದು ಉತ್ತಮ.

ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ

ಬೋರೆ ಹಣ್ಣು ಆಸ್ಟಿಯೋಆರ್ಥ್ರೈಟಿಸ್ ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಹಣ್ಣುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತವೆ. ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಹಣ್ಣಿನ ಪೇಸ್ಟ್ ಮಾಡಿ ಅದನ್ನು ಚರ್ಮದ ಮೇಲೆ ಹಚ್ಚುವುದರಿಂದ ಗಾಯವು ಗುಣವಾಗುತ್ತದೆ ಮತ್ತು ಚರ್ಮವನ್ನು ಮೃದುಗೊಳಿಸುತ್ತದೆ. ಅಲ್ಲದೆ ಈ ಹಣ್ಣಿನ ಆಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ, ಇದು ಸೋಂಕುಗಳನ್ನು ತಡೆಯುತ್ತದೆ. ಜೊತೆಗೆ ಹಸಿವನ್ನು ತಡೆದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದ: ಬಾಳೆಹಣ್ಣಿನ ಅತಿಯಾದ ಸೇವನೆಯಿಂದ ಆಗುವ ಅಡ್ಡಪರಿಣಾಮಗಳು

ಕ್ಯಾನ್ಸರ್ ನಿಂದ ದೂರವಿಡುತ್ತದೆ

ಬೋರೆ ಹಣ್ಣು ತಿನ್ನುವುದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಇದು ಅನೇಕ ರೋಗಗಳನ್ನು ದೂರವಿಡಬಹುದು. ಈ ಹಣ್ಣುಗಳಲ್ಲಿ ಹೆಚ್ಚಿನ ಮಟ್ಟದ ಉತ್ಕರ್ಷಣ ನಿರೋಧಕಗಳು ಇರುವುದರಿಂದ, ದೇಹದಲ್ಲಿನ ತ್ಯಾಜ್ಯ ಹೊರಹೋಗುತ್ತದೆ. ಪಿತ್ತಜನಕಾಂಗದ ಕಾರ್ಯನಿರ್ವಹಣೆಯೂ ಸರಿಯಾಗಿ ಆಗುತ್ತದೆ. ಅಲ್ಲದೆ ಕೆಲವು ಸಂಶೋಧನೆಗಳು ಹೇಳುವ ಪ್ರಕಾರ ಇದನ್ನು ತಿನ್ನುವುದರಿಂದ ಕ್ಯಾನ್ಸರ್ ಅಂಶಗಳನ್ನು ದೂರವಿಡಬಹುದಾಗಿದೆ. ಇದರ ಅನೇಕ ಉತ್ತಮ ಗುಣಗಳು ಕ್ಯಾನ್ಸರ್ ನಂತಹ ಭಯಾನಕ ಕಾಯಿಲೆಗಳಿಂದ ದೂರವಿಡುತ್ತವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ