AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Capsicum Benefits: ಡೊಳ್ಳುಮೆಣಸು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

ಡೊಳ್ಳು ಮೆಣಸು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮೆಣಸು ಜಾತಿಗೆ ಸೇರಿದ ಕ್ಯಾಪ್ಸಿಕಂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.

Capsicum Benefits: ಡೊಳ್ಳುಮೆಣಸು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ
Capsicum
TV9 Web
| Edited By: |

Updated on: Sep 09, 2022 | 1:25 PM

Share

ಡೊಳ್ಳು ಮೆಣಸು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮೆಣಸು ಜಾತಿಗೆ ಸೇರಿದ ಕ್ಯಾಪ್ಸಿಕಂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಪ್ರತಿ ಖಾದ್ಯವನ್ನು ಮಸಾಲೆಯುಕ್ತವಾಗಿಸಲು ಕ್ಯಾಪ್ಸಿಕಂ  ಅನ್ನು ಸೇರಿಸಲಾಗುತ್ತದೆ. ಕ್ಯಾಪ್ಸಿಕಂ ಅನ್ನು ಪಿಜ್ಜಾದಿಂದ ಹಿಡಿದು ಪರೋಟದವರೆಗೆ ಬಳಸಲಾಗುತ್ತದೆ. ಆದರೆ ಈ ರುಚಿಕರವಾದ ತರಕಾರಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ.

ಡೊಳ್ಳುಮೆಣಸು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರ ಸಿಪ್ಪೆಯಿಂದ ಹಿಡಿದು ಬೀಜದವರೆಗೆ ಎಲ್ಲವೂ ಪ್ರಯೋಜನಕಾರಿ. ಈಗ ಅದರ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ತಿಳಿಯೋಣ.

ಕ್ಯಾಪ್ಸಿಕಂ ಬೀಜಗಳ ಪ್ರಯೋಜನಗಳು ಈ ತರಕಾರಿಯ ಪ್ರತಿಯೊಂದು ಭಾಗವು ಪ್ರಯೋಜನಕಾರಿಯಾಗಿದ್ದರೂ, ವಿಶೇಷವಾಗಿ ಇದರ ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕ್ಯಾಪ್ಸಿಕಂ ಬೀಜಗಳು ಆರೋಗ್ಯಕ್ಕೆ ಉತ್ತಮವಾದ ಅನೇಕ ಖನಿಜಗಳನ್ನು ಹೊಂದಿರುತ್ತವೆ. ಇವು ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕ್ಯಾಪ್ಸಿಕಂನ ಪ್ರಯೋಜನಗಳು ಕ್ಯಾಪ್ಸಿಕಂ ತಿನ್ನುವುದು ಹೃದಯಕ್ಕೆ ಒಳ್ಳೆಯದು. ಇದು ಫ್ಲೇವನಾಯ್ಡ್‌ಗಳು ಮತ್ತು ಸೈಟೋಕೆಮಿಕಲ್‌ಗಳನ್ನು ಹೊಂದಿದ್ದು ಅದು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಕ್ಯಾಪ್ಸಿಕಂ ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕ್ಯಾಪ್ಸಿಕಂ ಕಡಿಮೆ ಕ್ಯಾಲೋರಿ ಹೊಂದಿದೆ. ಥರ್ಮೋಜೆನೆಸಿಸ್ ಇದರಲ್ಲಿ ಕಂಡುಬರುತ್ತದೆ. ಇದು ನಮ್ಮ ದೇಹದಲ್ಲಿನ ಕ್ಯಾಲೊರಿಗಳನ್ನು ಅತ್ಯಂತ ವೇಗವಾಗಿ ಕರಗಿಸುತ್ತದೆ. ಹಾಗಾಗಿ ನೀವು ಡಯಟ್‌ನಲ್ಲಿದ್ದರೂ.. ಕ್ಯಾಪ್ಸಿಕಂನಿಂದ ಮಾಡಿದ ಯಾವುದನ್ನಾದರೂ ಮುಕ್ತವಾಗಿ ತಿನ್ನಬಹುದು.

ಕ್ಯಾಪ್ಸಿಕಂ ಪ್ರೋಟೀನ್, ಕಾರ್ಬೋಹೈಡ್ರೇಟ್, ಸಕ್ಕರೆ, ಫೈಬರ್ ಮತ್ತು ಕೊಬ್ಬಿನಿಂದ ಸಮೃದ್ಧವಾಗಿದೆ. ಈ ಗುಣಲಕ್ಷಣಗಳು ದೇಹಕ್ಕೆ ಸಂಪೂರ್ಣ ಪೋಷಣೆಯನ್ನು ಒದಗಿಸುತ್ತದೆ.

ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ನಮ್ಮ ಕೂದಲು ಮತ್ತು ಚರ್ಮಕ್ಕೆ ಒಳ್ಳೆಯದು. ಇದು ಲುಟೀನ್ ಅನ್ನು ಸಹ ಹೊಂದಿದೆ, ಇದು ಕಣ್ಣುಗಳಿಗೆ ಒಳ್ಳೆಯದು.

ಕ್ಯಾಪ್ಸಿಕಂ ತಿನ್ನುವುದು ಮಧುಮೇಹ ರೋಗಿಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಉರಿಯೂತ ನಿವಾರಕ ಗುಣಗಳು ಹಲವು ಸಮಸ್ಯೆಗಳನ್ನು ದೂರ ಮಾಡುತ್ತವೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್