Health Tips: ಕ್ಯಾರೆಟ್ ಸೇವನೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಇಲ್ಲಿವೆ ತಜ್ಞರ ಸಲಹೆಗಳು

ನಿಮ್ಮ ಆರೋಗ್ಯವನ್ನು ವಿಶೇಷವಾಗಿ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಕ್ಯಾರೆಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನಿಮ್ಮ ಆಹಾರ ಕ್ರಮದಲ್ಲಿ ಪ್ರತಿದಿನ ಕ್ಯಾರೆಟ್ ಅನ್ನು ಸೇರಿಸಿಕೊಳ್ಳಿ.

Health Tips: ಕ್ಯಾರೆಟ್ ಸೇವನೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಇಲ್ಲಿವೆ ತಜ್ಞರ ಸಲಹೆಗಳು
Health Benefits of CarrotsImage Credit source: Cleveland Clinic
Follow us
| Updated By: ಅಕ್ಷತಾ ವರ್ಕಾಡಿ

Updated on: Nov 15, 2022 | 11:00 AM

ಇಂದಿನ ಒತ್ತಡದ ಜೀವನಶೈಲಿಯಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು, ಹೃದಯಘಾತಗಳು ಹೆಚ್ಚಾಗಿ ಕಂಡುಬರುತ್ತಿದೆ. ನಗರಗಳನ್ನು ಕೇಂದ್ರೀಕರಿಸಿದ ಅಭಿವೃದ್ಧಿಯಿಂದಾಗಿ ಧೂಳು, ಹೊಗೆ ಮಾಲಿನ್ಯಗಳು ಹೆಚ್ಚಾಗಿದ್ದು ಇದ್ದರಿಂದಾಗಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಉಸಿರಾಟದ ತೊಂದರೆಗಳು, ಹೃದಯಘಾತಗಳಿಗೂ ಕಾರಣವಾಗುತ್ತದೆ.

ಆದ್ದರಿಂದ ನಿಮ್ಮ ಆರೋಗ್ಯವನ್ನು ವಿಶೇಷವಾಗಿ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಕ್ಯಾರೆಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನಿಮ್ಮ ಆಹಾರ ಕ್ರಮದಲ್ಲಿ ಪ್ರತಿದಿನ ಕ್ಯಾರೆಟ್ ಅನ್ನು ಸೇರಿಸಿಕೊಳ್ಳಿ.ಈ ಚಳಿಗಾಲದಲ್ಲಿ ಬರುವ ಕಾಯಿಲೆಯಿಂದ ನಿಮ್ಮನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ ಕ್ರಮ ರೂಢಿಸಿಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ಈ ಚಳಿಗಾಲದಲ್ಲಿ ಬಿಸಿಯಾದ ಕುರುಕುಲಾದ ಕ್ಯಾರೆಟ್ ಉಪಯೋಗಿಸಿದ ಮಾಡಿದ ತಿಂಡಿಯನ್ನು ಸೇವಿಸಿ ಆರೋಗ್ಯವಾಗಿರಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಕ್ಯಾರೆಟ್‌ನಲ್ಲಿ ಬೀಟಾ-ಕ್ಯಾರೋಟಿನ್, ಫೈಬರ್, ರೋಗ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಹಲವಾರು ಅಗತ್ಯ ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿದೆ. ಆದ್ದರಿಂದ ಇದು ನಿಮ್ಮ ತೂಕ ನಷ್ಟ, ಜೀರ್ಣಕ್ರಿಯೆ, ಕಣ್ಣು, ಚರ್ಮಗಳ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ.

ಮೊದಲೇ ಹೇಳಿದಂತೆ, ಕ್ಯಾರೆಟ್‌ನಲ್ಲಿ ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿದೆ. ನಿಮ್ಮ ಆಹಾರದಲ್ಲಿ ಬೀಟಾ-ಕ್ಯಾರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ. ಮತ್ತು ಈ ಪರಿವರ್ತನೆ, ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಲಿನಾಯ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೃದಯದ ಆರೋಗ್ಯದ ಮೇಲೆ ಬೀಟಾ-ಕ್ಯಾರೋಟಿನ್‌ನ ಪರಿಣಾಮಗಳನ್ನು ಕಂಡುಹಿಡಿಯಲು ಸಂಶೋಧಕರು ಅಧ್ಯಯನಗಳನ್ನು ನಡೆಸಿದ್ದರು.

ಈ ಅಧ್ಯಯನದಲ್ಲಿ, ಸಂಶೋಧಕರು 18 ಮತ್ತು 25 ರ ನಡುವಿನ ವಯಸ್ಸಿನ 767 ಆರೋಗ್ಯವಂತ ಯುವಕರ ರಕ್ತ ಮತ್ತು DNA ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಬೀಟಾ ಕ್ಯಾರೋಟಿನ್ ಆಕ್ಸಿಜನೇಸ್ 1 (BCO1) ಎಂದು ಕರೆಯಲ್ಪಡುವ ಅಂಶವು ಬೀಟಾ-ಕ್ಯಾರೋಟಿನ್ ಪರಿವರ್ತನೆಗೆ ಕಾರಣವಾಗಿದೆ ಮತ್ತು ವಿಟಮಿನ್ ಎ ಗೆ ಮತ್ತು ಕೊಲೆಸ್ಟ್ರಾಲ್ ಮಟ್ಟದೊಂದಿಗೆ ಸಂಬಂಧವನ್ನು ಹೊಂದಿದೆ. ಕಡಿಮೆ ಸಕ್ರಿಯ ಕಿಣ್ವವನ್ನು ಹೊಂದಿರುವ ಜನರು ಕಡಿಮೆ ವಿಟಮಿನ್ ಎ ಅನ್ನು ಉತ್ಪಾದಿಸುತ್ತಾರೆ ಮತ್ತು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ಹೊಂದಿರುತ್ತಾರೆ ಎಂದು ಅಧ್ಯಯನವು ತಿಳಿಸುತ್ತದೆ.

ಮೇಲಿನ ಅಂಶಗಳನ್ನು ಪರಿಗಣಿಸಿ, ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸಾಧ್ಯವಾದಷ್ಟು ರುಚಿಕರವಾದ ರೀತಿಯಲ್ಲಿ ಸೇರಿಸಲು ಸಹಾಯ ಮಾಡುವ ಕೆಲವು ಆರೋಗ್ಯಕರ ಪಾಕವಿಧಾನಗಳು ಇಲ್ಲಿವೆ.

ಕ್ಯಾರೆಟ್ ಶುಂಠಿ ಸೂಪ್ ಇದು ಆರೋಗ್ಯಕರ ಮತ್ತು ಪೌಷ್ಟಿಕಾಂಶಗಳನ್ನು ಹೊಂದಿದ್ದು ನಿಮ್ಮ ಆಹಾರದಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳನ್ನು ಸೇರಿಸುವುದರ ಜೊತೆಗೆ, ಈ ಕ್ಯಾರೆಟ್-ಶುಂಠಿ ಸೂಪ್ ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಾಗಿಸುತ್ತದೆ.

ಇದನ್ನು ಓದಿ: ಮೂಲಂಗಿಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ನಿಮ್ಮ ದೈನಂದಿನ ಊಟದೊಂದಿಗೆ ಕ್ಯಾರೆಟ್ ಅನ್ನು ಉಪಯೋಗಿಸಿ ತಯಾರಿಸಿದ ಉಪ್ಪಿನಕಾಯಿಯನ್ನು ಬಳಸಿ. ಇದು ಆರೋಗ್ಯ ಪ್ರಯೋಜನಕಾರಿ ಪೋಷಕಾಂಶಗಳಿಂದ ತುಂಬಿರುತ್ತದೆ ಮತ್ತು ರೊಟ್ಟಿ-ಸಬ್ಜಿ ಅಥವಾ ಅನ್ನದೊಂದಿಗೆ ಉತ್ತಮ ರುಚಿಯನ್ನು ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​