ಗೋಡಂಬಿಯಲ್ಲಿ ತಾಮ್ರ, ಸತು, ಮೆಗ್ನೀಶಿಯಂ, ಕಬ್ಬಿಣ ಮತ್ತು ರಂಜಕದಂತಹ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರ ಜೊತೆಯಲ್ಲಿ ಇದು ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ಜತೆಗೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅಧಿಕ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
ತೂಕ ಇಳಿಕೆಗೆ ಸಹಾಯಕ
ಕಡಲೆಕಾಯಿ, ಬಾದಾಮಿಗೆ ಹೋಲಿಸಿದರೆ ಗೋಡಂಬಿ ಬೀಜಗಳಲ್ಲಿ ಕೊಬ್ಬು ಮತ್ತು ಕ್ಯಾಲೊರಿ ಅಂಶ ಕಡಿಮೆ. ಹಾಗಾಗಿ ಇದು ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿದೆ. ದೇಹದಕ್ಕೆ ಬೇಕಾದ ವಿಟಮಿನ್, ಕ್ಯಾಲೊರಿಯನ್ನು ಒದಗಿಸುತ್ತದೆ. ಉತ್ತಮ ಫೈಬರ್ಯುಕ್ತವಾಗಿರುವದರಿಂದ ಆರೋಗ್ಯಕ್ಕೆ ಉತ್ತಮ.
ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ
ಎಲ್ಡಿಎಲ್ ಮತ್ತು ಹೆಚ್ಡಿಎಲ್ ಎಂಬ ಎರಡು ಕೊಲೆಸ್ಟ್ರಾಲ್ಗಳನ್ನು ಇದು ಹೊಂದಿದೆ. ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಗೋಡಂಬಿಯನ್ನು ಆಹಾರದಲ್ಲಿ ಸೇರಿಸುವುದು ಹೆಚ್ಡಿಎಲ್ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಹೃದಯಕ್ಕೆ ಒಳ್ಳೆಯದು
ವಾರಕ್ಕೆ ನಾಲ್ಕು ಬಾರಿ ಗೋಡಂಬಿಯನ್ನು ಸೇವಿಸುವವರಿಗೆ ಹೃದಯದ ಖಾಯಿಲೆಯ ಅಪಾಯವು ಶೇ.37ರಷ್ಟು ಕಡಿಮೆ. ಗೋಡಂಬಿ ಹೃದಯ ನಾಳದ ಖಾಯಿಲೆಗಳ ಅಪಾಯವನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ.
ಜೀವಕೋಶದ ಹಾನಿಯನ್ನು ತಡೆಗಟ್ಟುತ್ತದೆ
ಗೋಡಂಬಿ ಬೀಜಗಳು ಉತ್ಕರ್ಷಣ ನಿರೋಧಕ ಅಂಶಕ್ಕೆ ಹೆಸರುವಾಸಿಯಾಗಿದೆ. ಅವು ಹಾನಿ ಉಂಟುಮಾಡುವ ಕೋಶಗಳನ್ನು ತಡೆಯಲು ಸಹಾಯ ಮಾಡುತ್ತವಡ. ದೇಹವನ್ನು ರೋಗಗಳಿಂದ ರಕ್ಷಿಸುತ್ತವೆ. ಜತೆಗೆ ಉರಿಯೂತವನ್ನು ಕಡಿಮೆ ಮಾಡುತ್ತವೆ. ಹುರಿದ ಗೋಡಂಬಿ ಹಸಿ ಗೋಡಂಬಿಗಿಂತ ಹೆಚ್ಚಿನ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ಗೋಡಂಬಿ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಗೋಡಂಬಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಹೀಗಾಗಿ ಇದು ನಿಧಾನವಾಗಿ ಮತ್ತು ಸ್ಥಿರವಾಗಿ ಗ್ಲುಕೋಸ್ಅನ್ನು ಬಿಡುಗಡೆ ಮಾಡುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಿಳವನ್ನು ತಡೆಯಲು ಸಹಾಯಕ.
ಇದನ್ನೂ ಓದಿ:
Health Tips: ಹೃದಯಾಘಾತದಿಂದ ಪಾರಾಗಲು 10 ಮಾರ್ಗಗಳು; ಆಯುರ್ವೇದ ತಜ್ಞರ ಸಲಹೆ ಇಲ್ಲಿದೆ
Health Tips: ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಸರಳ ವಿಧಾನವನ್ನು ಅನುಸರಿಸಿ
(Health Benefits of cashew nuts check in Kannada)