Bili Patra Benefits : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ತಿಂದರೆ ಏನಾಗುತ್ತೆ ತಿಳಿದುಕೊಳ್ಳಿ

ಬಿಲ್ವಪತ್ರೆ ದೇವರ ಪೂಜೆಗೆ ಮಾತ್ರ ಸೀಮಿತವಾಗಿಲ್ಲ ಬದಲಾಗಿ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್ ಎ, ಸಿ, ಬಿ 1 ಮತ್ತು ಬಿ 6 ಇದೆ. ಇದಲ್ಲದೆ, ಕ್ಯಾಲ್ಸಿಯಂ ಮತ್ತು ಫೈಬರ್ ಕೂಡ ಇದೆ. ಇದೊಂದು ಗಿಡ ಮನೆಯಲ್ಲಿ ಇದ್ದರೆ ಎಲ್ಲ ರೀತಿಯ ಆರೋಗ್ಯ ಸಮಸ್ಯೆಗೂ ಗುಡ್ ಬೈ ಹೇಳಬಹುದು. ಹಾಗಾದರೆ ಬಿಲ್ವಪತ್ರೆ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದರಿಂದ ಆರೋಗ್ಯವನ್ನು ಯಾವ ರೀತಿಯಲ್ಲಿ ಕಾಪಾಡಿಕೊಳ್ಳಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ.

Bili Patra Benefits : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ತಿಂದರೆ ಏನಾಗುತ್ತೆ ತಿಳಿದುಕೊಳ್ಳಿ
ಬಿಲ್ವಪತ್ರೆ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 06, 2025 | 2:11 PM

ಶಿವನಿಗಿಷ್ಟವಾದ ಬಿಲ್ವಪತ್ರೆ ದೇವರ ಪೂಜೆಗೆ ಮಾತ್ರ ಸೀಮಿತವಾಗಿಲ್ಲ ಬದಲಾಗಿ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್ ಎ, ಸಿ, ಬಿ 1 ಮತ್ತು ಬಿ 6 ಇದೆ. ಇದಲ್ಲದೆ, ಕ್ಯಾಲ್ಸಿಯಂ ಮತ್ತು ಫೈಬರ್ ಕೂಡ ಇದೆ. ಇದೊಂದು ಗಿಡ ಮನೆಯಲ್ಲಿ ಇದ್ದರೆ ಎಲ್ಲ ರೀತಿಯ ಆರೋಗ್ಯ ಸಮಸ್ಯೆಗೂ ಗುಡ್ ಬೈ ಹೇಳಬಹುದು. ಇದು ಇಂದು ರೀತಿ ಆರೋಗ್ಯಕ್ಕೆ ಔಷಧಿ ಇದ್ದಂತೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಯನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ. ಇದು ಗ್ಯಾಸ್, ಆಮ್ಲೀಯತೆ ಮತ್ತು ಅಜೀರ್ಣದಂತಹ ಸಮಸ್ಯೆಗೆ ತಕ್ಷಣ ಪರಿಹಾರ ನೀಡುತ್ತದೆ. ಹಾಗಾದರೆ ಬಿಲ್ವಪತ್ರೆ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದರಿಂದ ಆರೋಗ್ಯವನ್ನು ಯಾವ ರೀತಿಯಲ್ಲಿ ಕಾಪಾಡಿಕೊಳ್ಳಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಬಿಲ್ವಪತ್ರೆಯಲ್ಲಿ ಉತ್ತಮ ಪ್ರಮಾಣದ ಫೈಬರ್ ಕಂಡುಬರುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ನಿಮಗೆ ಜೀರ್ಣಕಾರಿ ಸಮಸ್ಯೆ ಇದ್ದರೆ ನೀವು ಇದನ್ನು ಪ್ರತಿನಿತ್ಯ ಸೇವನೆ ಮಾಡಬಹುದು.
  • ಹೃದ್ರೋಗದ ಸಮಸ್ಯೆ ಇರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಬಿಲ್ವಪತ್ರೆಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳಿವೆ, ಇದು ಹೃದಯವನ್ನು ರೋಗಗಳಿಂದ ರಕ್ಷಿಸುತ್ತದೆ ಮತ್ತು ಹೃದಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ.
  • ಮಧುಮೇಹ ರೋಗಿಗಳಿಗೂ ಈ ಬಿಲ್ವಪತ್ರೆ ವರದಾನವಿದ್ದಂತೆ. ಈ ಎಲೆಯನ್ನು ತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದರಲ್ಲಿರುವ ಫೈಬರ್ ಮತ್ತು ಇತರ ಪೋಷಕಾಂಶಗಳು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
  • ಇನ್ನು ಈ ಎಲೆಯಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಎರಡು ಅಥವಾ ಮೂರು ಎಲೆಗಳನ್ನು ಚೆನ್ನಾಗಿ ಜಗಿದು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೆಮ್ಮು ಮತ್ತು ಶೀತದಂತಹ ಸಮಸ್ಯೆಗಳು ದೂರವಿರುತ್ತದೆ.
  • ಪೈಲ್ಸ್ ಸಮಸ್ಯೆ ಇರುವವರು, ಖಾಲಿ ಹೊಟ್ಟೆಯಲ್ಲಿ ಬಿಲ್ವಪತ್ರೆ ತಿನ್ನುವುದು ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಈ ಎಲೆ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ ಹಾಗಾಗಿ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಈ ಎಲೆ ತುಂಬಾ ತಂಪಾಗಿದ್ದು ಇದರ ಸೇವನೆ ಮಾಡುವುದರಿಂದ ದೇಹವೂ ತಂಪಾಗಿರುತ್ತದೆ. ಹೀಟ್ ಸ್ಟ್ರೋಕ್ ನಿಂದ ರಕ್ಷಿಸಿಕೊಳ್ಳಲು ಇದರ ಸೇವನೆ ಮಾಡಬಹುದು. ಅದರ ಜೊತೆಗೆ ಬಾಯಿಯಲ್ಲಿ ಗುಳ್ಳೆಗಳು ಎದ್ದಾಗಲೂ ಇದರ ಸೇವನೆ ಮಾಡಬಹುದು. ಹಾಗಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಜಗಿದು ತಿನ್ನುವುದರಿಂದ ಅನೇಕ ರೀತಿಯ ಪ್ರಯೋಜನವನ್ನು ಪಡೆಯಬಹುದು.
  • ಈ ಎಲೆಗಳಲ್ಲಿ ಕಡಿಮೆ ಕ್ಯಾಲೊರಿಗಳು ಮತ್ತು ಹೆಚ್ಚಿನ ಫೈಬರ್ ಇದೆ, ಹಾಗಾಗಿ ಇದು ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ .
  • ಬಿಲ್ವಪತ್ರೆಯ ಎಲೆಗಳನ್ನು ಸೇವಿಸುವ ಮೂಲಕ, ಆಮ್ಲೀಯತೆ, ಗ್ಯಾಸ್, ಮಲಬದ್ಧತೆ ಅಥವಾ ಅಜೀರ್ಣದಂತಹ ಸಮಸ್ಯೆಗಳಿಂದ ಪರಿಹಾರ ಪಡೆದುಕೊಳ್ಳಬಹುದು. ಈ ಎಲೆಗಳಲ್ಲಿ ಫೈಬರ್ ಅಂಶವಿದ್ದು ಇದು ಹೊಟ್ಟೆಯನ್ನು ಶುದ್ಧೀಕರಿಸುತ್ತದೆ ಮತ್ತು ಆಮ್ಲೀಯತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಬಿಲ್ವಪತ್ರೆ ಎಲೆಯ ರಸವನ್ನು ಕುಡಿಯುವುದರಿಂದ ಮೂತ್ರಪಿಂಡ ಆರೋಗ್ಯಕರವಾಗಿರುತ್ತದೆ. ಇದರಲ್ಲಿರುವ ಪೋಷಕಾಂಶಗಳು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಮೂತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಆದರೆ ಸರಿಯಾದ ಪ್ರಮಾಣದ ಬೀಟ್ರೂಟ್ ರಸವನ್ನು ಸೇವಿಸಿದರೆ ಮಾತ್ರ ಅದು ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಇದನ್ನು ಬಳಸುವ ಮೊದಲು ವೈದ್ಯರನ್ನು ಸಂಪರ್ಕಿಸಿ.)

ಆರೊಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ