AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕೃತ್ತಿನ ಆರೋಗ್ಯ ಕಾಪಾಡಲು ಮಲಗುವ ಮೊದಲು ಇದರ ನೀರನ್ನು ಕುಡಿಯಿರಿ

ಮಲಗುವ ಮೊದಲು ಲವಂಗದ ನೀರನ್ನು ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ, ಬಾಯಿಯ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಲವಂಗದಲ್ಲಿರುವ ಯೂಜೆನಾಲ್ ಅನೇಕ ರೀತಿಯ ಪ್ರಯೋಜನಗಳಿಗೆ ಕಾರಣವಾಗಿದೆ.

ಯಕೃತ್ತಿನ ಆರೋಗ್ಯ ಕಾಪಾಡಲು ಮಲಗುವ ಮೊದಲು ಇದರ ನೀರನ್ನು ಕುಡಿಯಿರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 24, 2025 | 1:51 PM

Share

ಲವಂಗ ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೇ ಇರುತ್ತದೆ. ಅದರ ಪರಿಮಳಕ್ಕೆ ನಮ್ಮ ಆಹಾರದ ರುಚಿಯನ್ನು ದುಪ್ಪಟ್ಟು ಮಾಡುವ ಶಕ್ತಿ ಇದೆ. ಇದು ಕೇವಲ ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಕೂಡ ನೀಡುತ್ತದೆ. ಅದಲ್ಲದೆ ಲವಂಗದ ನೀರು ಕೂಡ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿರ್ಮೂಲನೆ ಮಾಡುವ ಶಕ್ತಿಯನ್ನು ಒಳಗೊಂಡಿರುತ್ತದೆ. ಹಾಗಾಗಿಯೇ ಇದನ್ನು ಮನೆಮದ್ದಾಗಿ ಉಪಯೋಗ ಮಾಡಲಾಗುತ್ತದೆ. ಇದನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಆದರೆ ಅದನ್ನು ಯಾವ ಸಮಯದಲ್ಲಿ ಕುಡಿಯಬೇಕು ಎಂಬುದು ತಿಳಿದಿರಬೇಕಾಗುತ್ತದೆ. ಹಾಗಾದರೆ ಮಲಗುವ ಸ್ವಲ್ಪ ಮೊದಲು ಲವಂಗದ ನೀರನ್ನು ಕುಡಿಯುವ ಅಭ್ಯಾಸ ಯಾವ ರೀತಿಯ ಪ್ರಯೋಜನಗಳನ್ನು ನೀಡಬಹುದು ಎಂಬುದನ್ನು ತಿಳಿದುಕೊಳ್ಳಿ.

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ

ಸಾಮಾನ್ಯವಾಗಿ ಆರು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರ ವರೆಗೂ ಈ ಲವಂಗದ ನೀರಿನ ಸೇವನೆ ಬಹಳ ಒಳ್ಳೆಯದು. ಇದು ಚಿಕ್ಕ ಮಕ್ಕಳಲ್ಲಿ ಪದೇ ಪದೇ ಕಂಡುಬರುವ ಹೊಟ್ಟೆ ನೋವು ಮತ್ತು ರಾತ್ರಿ ಸಮಯದಲ್ಲಿ ಉಂಟಾಗುವ ಗ್ಯಾಸ್ ನಂತಹ ಜೀರ್ಣಕಾರಿ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಾದರೂ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅವರಿಗೆ ಲವಂಗದ ನೀರನ್ನು ಕುಡಿಯಲು ಕೊಡುವುದು ಉತ್ತಮ ಪರಿಹಾರವಾಗಿದೆ. ಜರ್ನಲ್ ಆಫ್ ಫಾರ್ಮಾಕೊಗ್ನೋಸಿ ಮತ್ತು ಫೈಟೊಕೆಮಿಸ್ಟ್ರಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಲವಂಗವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಉಪಯುಕ್ತವಾಗಿದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ ಮತ್ತು ಜೀರ್ಣಕ್ರಿಯೆ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಯಾವಾಗಲೂ ಅನಾರೋಗ್ಯಕ್ಕೆ ಒಳಗಾಗುತ್ತೀರಾ? ಹೌದು ಎಂದಾದರೆ, ಬಹುಶಃ ನಿಮ್ಮ ರೋಗನಿರೋಧಕ ಶಕ್ತಿ ಕುಂಠಿತಗೊಂಡಿರಬಹುದು. ಹಾಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ಲವಂಗದ ನೀರನ್ನು ಪ್ರತಿನಿತ್ಯ ಕುಡಿಯಬಹುದು. ಲವಂಗವು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಇದು ದೇಹದಲ್ಲಿನ ಹಾನಿಕಾರಕ ಸೂಕ್ಷ್ಮಜೀವಿಗಳನ್ನು ಪ್ರತಿರೋಧಿಸುವ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ವೈದ್ಯರು ಕೂಡ ಲವಂಗದ ನೀರು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ.

ಒತ್ತಡವನ್ನು ಕಡಿಮೆ ಮಾಡುತ್ತದೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ (ಎನ್ಐಎಚ್) ಪ್ರಕಾರ, ಲವಂಗವು ಯೂಜೆನಾಲ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ, ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಮಲಗುವ ಮೊದಲು ಲವಂಗದ ನೀರನ್ನು ಕುಡಿಯುವುದರಿಂದ ನಿಮ್ಮ ಮಾನಸಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಈ ನೀರನ್ನು ಸ್ವಲ್ಪ ಬಿಸಿ ಬಿಸಿ ಇರುವಾಗ ಕುಡಿಯುವುದರಿಂದ ಹೆಚ್ಚು ಪ್ರಯೋಜನ ಪಡೆಯಬಹುದು.

ಇದನ್ನೂ ಓದಿ: ಪೇರಳೆ ಹಣ್ಣಷ್ಟೇ ಅಲ್ಲ, ಈ ಎಲೆಯ ರಸದಲ್ಲಿದೆ ಆರೋಗ್ಯ

ಬಾಯಿಯ ಆರೋಗ್ಯಕ್ಕೆ ಒಳ್ಳೆಯದು

ಯೂಜೆನಾಲ್ ಹೊಂದಿರುವ ಕಾರಣ, ಲವಂಗವು ಬಾಯಿಯ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಯೂಜೆನಾಲ್ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ, ಇದು ಬಾಯಿಯಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ. ಮಲಗುವ ಮೊದಲು ಇದನ್ನು ಸೇವಿಸುವುದರಿಂದ ನಿಮ್ಮ ಬಾಯಿಯನ್ನು ಆರೋಗ್ಯಕರವಾಗಿಡಬಹುದು. ದುರ್ವಾಸನೆಯನ್ನು ತಡೆಯಬಹುದು.

ಯಕೃತ್ತಿನ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ

ಲವಂಗದ ನೀರನ್ನು ಕುಡಿಯುವುದರಿಂದ ನಿಮ್ಮ ಯಕೃತ್ತಿನ ವಿಷವನ್ನು ನಿರ್ವಿಷಗೊಳಿಸಬಹುದು. ಎನ್ಐಎಚ್ ಅಧ್ಯಯನದಲ್ಲಿ ತಿಳಿಸಿರುವಂತೆ ಈ ಲವಂಗದಲ್ಲಿರುವ ಯೂಜೆನಾಲ್ ಯಕೃತ್ತನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುತ್ತದೆ. ಅಲ್ಲದೆ, ಇದು ಯಕೃತ್ತಿನ ಅಸ್ವಸ್ಥತೆಗಳಿಗೆ ಮುಖ್ಯ ಕಾರಣಗಳಾದ ಊತ, ಆಕ್ಸಿಡೇಟಿವ್ ಒತ್ತಡ ಇತ್ಯಾದಿಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ