Health Tips: ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ
ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಸಮೃದ್ಧವಾಗಿದ್ದು, ಹಲವಾರು ಔಷಧೀಯ ಗುಣಗಳು ಅಡಗಿವೆ. ಕೊತ್ತಂಬರಿ ಸೊಪ್ಪಿನ ರಸವನ್ನು ದಿನನಿತ್ಯ ಸೇವಿಸುವುದರಿಂದ ದೇಹಕ್ಕೆ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ. ಕೊತ್ತಂಬರಿ ಸೊಪ್ಪಿನ ರಸವನ್ನು ಕುಡಿಯುವುದರಿಂದ ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಕೊತ್ತಂಬರಿಯು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು, ಸೋಂಕುಗಳ ವಿರುದ್ಧ ಹೋರಾಡಲು, ಹೃದಯ, ಮೆದುಳು, ಚರ್ಮ, ಯಕೃತ್ತು, ಮೂಳೆಗಳು, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.
ಕೊತ್ತಂಬರಿ ಸೊಪ್ಪಿನ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೀಲು ಊತ ಮತ್ತು ಕೀಲು ನೋವು ಕಡಿಮೆಯಾಗುತ್ತದೆ. ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಇದನ್ನೂ ಓದಿ: ತೂಕ ನಿರ್ವಹಣೆಯಿಂದ ಜೀರ್ಣಕಾರಿ ಸಮಸ್ಯೆಗಳವರೆಗೆ, ಎಲ್ಲದಕ್ಕೂ ಒಂದೇ ಪರಿಹಾರ..!
ಕೊತ್ತಂಬರಿ ಜ್ಯೂಸ್ ತಯಾರಿಸುವುದು ಹೇಗೆ?
ಕೊತ್ತಂಬರಿ ಜ್ಯೂಸ್ ತಯಾರಿಸುವ ಮೊದಲು, ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆಯಬೇಕು. ನಂತರ, ಚಾಕುವಿನಿಂದ ಕತ್ತರಿಸಿ. ಅಗತ್ಯಕ್ಕೆ ತಕ್ಕಂತೆ ನೀರು ಸೇರಿಸಿ ಮತ್ತೆ ರುಬ್ಬಿಕೊಳ್ಳಿ. ಅದರ ರಸವನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಅದಕ್ಕೆ ಸೋಸಿಕೊಳ್ಳಿ. ಅದಕ್ಕೆ ಸ್ವಲ್ಪ ನಿಂಬೆ ರಸ ಮತ್ತು ಸಿಹಿಗೆ ಬೇಕಾದರೆ ಜೇನುತುಪ್ಪ ಸೇರಿಸಿ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ