ಪ್ರತಿದಿನ ಒಂದು ಚಮಚ ತೆಂಗಿನ ಎಣ್ಣೆ ಸೇವನೆ ಮಾಡಿದರೆ ಏನಾಗುತ್ತೆ ನೋಡಿ

ನಿಮಗೆ ತಿಳಿದಿರಬಹುದು ತೆಂಗಿನ ಎಣ್ಣೆಯನ್ನು ನಾವು ಹಲವು ರೀತಿಯಲ್ಲಿ ಬಳಸುತ್ತೇವೆ. ಇದು ಶ್ರೇಷ್ಠ ಕೂಡ. ಇದು ಸ್ವಲ್ಪ ಸಿಹಿಯಾಗಿರುವುದರಿಂದ ಅಡಿಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹೆಚ್ಚು ಪೌಷ್ಟಿಕವಾಗಿದ್ದು ಕೂದಲು ಸೊಂಪಾಗಿ ಬೆಳೆಯಲು, ಚರ್ಮ ಕಾಂತಿಯುತವಾಗಿರಲು ಸಹಾಯ ಮಾಡುತ್ತದೆ. ಹಾಗಾಗಿ ತೆಂಗಿನ ಎಣ್ಣೆ ಪೋಷಕಾಂಶಗಳ ಸಂಪತ್ತು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಆಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ತೆಂಗಿನ ಎಣ್ಣೆಯಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಸಿ ಮತ್ತು ವಿಟಮಿನ್ ಇ ಸಹ ಇದೆ. ಅದಕ್ಕಾಗಿಯೇ ತೆಂಗಿನ ಎಣ್ಣೆಯನ್ನು ಆಯುರ್ವೇದದಲ್ಲಿ ಹೆಚ್ಚು ಹೆಚ್ಚು ಬಳಕೆ ಮಾಡಲಾಗುತ್ತದೆ.

ಪ್ರತಿದಿನ ಒಂದು ಚಮಚ ತೆಂಗಿನ ಎಣ್ಣೆ ಸೇವನೆ ಮಾಡಿದರೆ ಏನಾಗುತ್ತೆ ನೋಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 05, 2024 | 2:53 PM

ತೆಂಗಿನ ಮರವನ್ನು ಕಲ್ಪವೃಕ್ಷ ಎಂದು ಕರೆಯುತ್ತೇವೆ. ಏಕೆಂದರೆ ಈ ಮರದಿಂದ ಸಿಗುವಂತಹ ಎಲ್ಲಾ ವಸ್ತುಗಳು ಕೂಡ ಉಪಯೋಗಕ್ಕೆ ಬರುತ್ತದೆ. ಈ ಮರದ ಕಾಯಿ, ಅದರಿಂದ ಸಿಗುವ ಎಣ್ಣೆ, ಎಳನೀರು ಇವೆಲ್ಲವೂ ಆರೋಗ್ಯಕ್ಕೆ ಬಹಳ ಉಪಯುಕ್ತ. ನಿಮಗೆ ತಿಳಿದಿರಬಹುದು ತೆಂಗಿನ ಎಣ್ಣೆಯನ್ನು ನಾವು ಹಲವು ರೀತಿಯಲ್ಲಿ ಬಳಸುತ್ತೇವೆ. ಇದು ಶ್ರೇಷ್ಠ ಕೂಡ. ಇದು ಸ್ವಲ್ಪ ಸಿಹಿಯಾಗಿರುವುದರಿಂದ ಅಡಿಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹೆಚ್ಚು ಪೌಷ್ಟಿಕವಾಗಿದ್ದು ಕೂದಲು ಸೊಂಪಾಗಿ ಬೆಳೆಯಲು, ಚರ್ಮ ಕಾಂತಿಯುತವಾಗಿರಲು ಸಹಾಯ ಮಾಡುತ್ತದೆ. ಹಾಗಾಗಿ ತೆಂಗಿನ ಎಣ್ಣೆ ಪೋಷಕಾಂಶಗಳ ಸಂಪತ್ತು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಆಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ತೆಂಗಿನ ಎಣ್ಣೆಯಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಸಿ ಮತ್ತು ವಿಟಮಿನ್ ಇ ಸಹ ಇದೆ. ಅದಕ್ಕಾಗಿಯೇ ತೆಂಗಿನ ಎಣ್ಣೆಯನ್ನು ಆಯುರ್ವೇದದಲ್ಲಿ ಹೆಚ್ಚು ಹೆಚ್ಚು ಬಳಕೆ ಮಾಡಲಾಗುತ್ತದೆ.

ತೆಂಗಿನ ಎಣ್ಣೆಯನ್ನು ಟಾನಿಕ್ ಆಗಿ ತೆಗೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಅನೇಕ ರೀತಿಯ ಪ್ರಯೋಜನಗಳಿವೆ ಎಂದು ಸಾಬೀತಾಗಿದೆ. ಇನ್ನೇನು ಚಳಿಗಾಲ ಆರಂಭವಾಗುತ್ತಿದೆ ಈ ಸಮಯದಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಒಂದು ಚಮಚ ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ ದೇಹಕ್ಕೆ ಐದು ರೀತಿಯ ಶಕ್ತಿಯುತ ಪ್ರಯೋಜನಗಳು ಲಭ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ತೆಂಗಿನೆಣ್ಣೆ ಕುಡಿಯುವುದರಿಂದ ಆಗುವ ಪ್ರಯೋಜನಗಳೇನು?

ಶಕ್ತಿ ವರ್ಧಕ:

ತೆಂಗಿನ ಎಣ್ಣೆ ದೇಹಕ್ಕೆ ಶಕ್ತಿ ನೀಡುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ, ದೇಹ ಮಂದವಾಗಿರುತ್ತದೆ. ಹಾಗಾಗಿ ಒಂದು ಚಮಚ ತೆಂಗಿನೆಣ್ಣೆ ಕುಡಿಯುವುದರಿಂದ ದಿನವಿಡೀ ಉಲ್ಲಾಸದಿಂದ ಕೂಡಿರುವಂತೆ ನೋಡಿಕೊಳ್ಳುತ್ತದೆ. ಬೆಳಿಗ್ಗೆ ತೆಂಗಿನೆಣ್ಣೆ ಸೇವನೆ ಮಾಡಿದರೆ ದೇಹ ದುರ್ಬಲವಾಗುವುದಿಲ್ಲ.

ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ:

ಬೆಳಿಗ್ಗೆ ಒಂದು ಚಮಚ ತೆಂಗಿನ ಎಣ್ಣೆಯನ್ನು ಕುಡಿಯುವುದರಿಂದ ದೇಹದಲ್ಲಿನ ಜೀವಕೋಶಗಳ ಆರೋಗ್ಯ ಸುಧಾರಿಸುತ್ತದೆ. ತೆಂಗಿನ ಎಣ್ಣೆ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಇದು ನಿಮ್ಮ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ನಿಮ್ಮ ಮೆದುಳನ್ನು ಆರೋಗ್ಯಕರವಾಗಿರಿಸುತ್ತದೆ.

ಹೃದಯದ ಆರೋಗ್ಯಕ್ಕೆ, ಜೀರ್ಣಕ್ರಿಯೆಗೆ ಒಳ್ಳೆಯದು:

ತೆಂಗಿನ ಎಣ್ಣೆ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ. ಒಂದು ಚಮಚ ತೆಂಗಿನ ಎಣ್ಣೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಚೆನ್ನಾಗಿರುತ್ತದೆ. ವಿಶೇಷವಾಗಿ ಮಲಬದ್ಧತೆಯ ಸಮಸ್ಯೆ ದೂರವಾಗುತ್ತದೆ. ಅಲ್ಲದೆ ಇದು ಹೃದಯಕ್ಕೂ ಒಳ್ಳೆಯದು.

ತೂಕ ನಷ್ಟಕ್ಕೆ ಸಹಕಾರಿ:

ತೆಂಗಿನ ಎಣ್ಣೆಯಲ್ಲಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ ಪದಾರ್ಥಗಳಿವೆ. ಇದರಲ್ಲಿರುವ ಆಂಟಿವೈರಲ್ ಗುಣಲಕ್ಷಣಗಳ ಜೊತೆಗೆ ಹೆಚ್ಚಿನ ಪೋಷಕಾಂಶಗಳಿವೆ. ಈ ಕಾರಣದಿಂದಾಗಿ, ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯು ಬಲಗೊಳ್ಳುತ್ತದೆ. ಅಲ್ಲದೆ ಇದು ನಿಮ ಹಸಿವನ್ನು ಕಡಿಮೆ ಮಾಡಿ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸ್ವಾತಿ ಮಳೆಯ ಔಷಧೀಯ ಗುಣಗಳು ತಿಳಿದರೆ ಆಶ್ಚರ್ಯ ಪಡುತ್ತೀರಿ

ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಒಳ್ಳೆಯದು:

ತೆಂಗಿನ ಎಣ್ಣೆಯನ್ನು ಕುಡಿಯುವುದರಿಂದ ಚರ್ಮವು ತೇವಾಂಶದಿಂದ ಕೂಡಿರುತ್ತದೆ ಮತ್ತು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದು ಮುಖದ ಮೇಲಿನ ಕಲೆಗಳನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಕೂದಲು ಬಲವಾಗಿ ಮತ್ತು ಹೊಳೆಯುವಂತೆ ನೋಡಿಕೊಳ್ಳುತ್ತದೆ.

(ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ನಿಮಗೆ ಯಾವುದೇ ರೀತಿಯ ಸಂದೇಹಗಳಿದ್ದರೂ, ತಜ್ಞರನ್ನು ಸಂಪರ್ಕಿಸಿ.)

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ