AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಹಾಲಿಗೆ ಒಂದು ಚಮಚ ಈ ಎಲೆಗಳ ಪುಡಿಯನ್ನು ಬೆರೆಸಿ ಕುಡಿದರೆ ಕೀಲು ನೋವು ಎಂದಿಗೂ ಬರುವುದಿಲ್ಲ

ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಬಳಸಲಾಗುತ್ತದೆ. ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿಯುವುದರಿಂದ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಮಧುಮೇಹ ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ.

ಪ್ರತಿದಿನ ಹಾಲಿಗೆ ಒಂದು ಚಮಚ ಈ ಎಲೆಗಳ ಪುಡಿಯನ್ನು ಬೆರೆಸಿ ಕುಡಿದರೆ ಕೀಲು ನೋವು ಎಂದಿಗೂ ಬರುವುದಿಲ್ಲ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 13, 2025 | 11:00 AM

Share

ನುಗ್ಗೆಕಾಯಿ ಸೇರಿಸಿ ಮಾಡಿದ ಪದಾರ್ಥಗಳು ಬಹಳ ರುಚಿಯಾಗಿರುತ್ತವೆ. ಅದೇ ರೀತಿ ಅವುಗಳ ಎಲೆಗಳಿಂದಲೂ ಕೂಡ ನಾನಾ ರೀತಿಯ ಅಡುಗೆಗಳನ್ನು ಮಾಡುತ್ತಾರೆ ಇದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಆ ಎಲೆಗಳ ಪುಡಿಗಳಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ತಿಳಿದಿದೆಯೇ? ಆಯುರ್ವೇದದಲ್ಲಿ, ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರಲ್ಲಿ ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದೆ. ಇದಲ್ಲದೆ, ಫೈಬರ್ ಮತ್ತು ಜೀವಸತ್ವಗಳು ಸಹ ಸಮೃದ್ಧವಾಗಿವೆ. ಅದರಲ್ಲಿಯೂ ಹಾಲಿನೊಂದಿಗೆ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಊಹೆಗೂ ನಿಲುಕದಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಅನೇಕರು ನುಗ್ಗೆಯನ್ನು ಇಷ್ಟ ಪಟ್ಟು ತಿನ್ನುತ್ತಾರೆ, ಇನ್ನು ಕೆಲವರು ಅದರ ಎಲೆಗಳನ್ನು ನಾನಾ ರೀತಿಯ ಆಹಾರ ಪದಾರ್ಥಗಳ ತಯಾರಿಕೆಗೆ ಬಳಸುತ್ತಾರೆ. ಇನ್ನು ಕೆಲವರು ಆ ಸೊಪ್ಪಿನಿಂದ ತಯಾರಾಗುವ ಪುಡಿಯನ್ನು ಸೇವನೆ ಮಾಡಲು ಇಷ್ಟಪಡುತ್ತಾರೆ. ಏಕೆಂದರೆ ಇವುಗಳಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿದ್ದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇವುಗಳಿಂದ ನಾನಾ ರೀತಿಯ ಅನುಕೂಲಗಳಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೂಳೆಗಳನ್ನು ಬಲಪಡಿಸುತ್ತದೆ: ಹಾಲು ಯಾವಾಗಲೂ ಮೂಳೆಗಳಿಗೆ ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಅಲ್ಲದೆ ಇದರಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಹಾಲು ಮತ್ತು ನುಗ್ಗೆಸೊಪ್ಪಿನ ಪುಡಿಯನ್ನು ಒಟ್ಟು ಸೇರಿಸಿ ಕುಡಿದರೆ, ಇದು ಮೂಳೆಗಳನ್ನು ಬಲಪಡಿಸುತ್ತದೆ. ಪ್ರತಿದಿನ ಸಂಜೆ ಚಹಾದ ಬದಲು ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಮೂಳೆ ಮತ್ತು ಕೀಲು ನೋವಿಗೆ ಪರಿಹಾರ ಸಿಗುತ್ತದೆ.

ತೂಕ ಇಳಿಸಿಕೊಳ್ಳಲು ಪ್ರಯೋಜನಕಾರಿ: ನೀವು ತೂಕ ಕಡಿಮೆ ಮಾಡಿಕೊಳ್ಳಲು ಬಯಸುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡಬಹುದು. ಈ ಪುಡಿಯಲ್ಲಿ ಫೈಬರ್ ಅಧಿಕವಾಗಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ನೀವು ಈ ಪುಡಿಯನ್ನು ಪ್ರತಿದಿನ ಹಾಲಿನೊಂದಿಗೆ ಸೇರಿಸಿ ಕುಡಿಯಬಹುದು.

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ನೀವು ಕೂಡ ಮಧುಮೇಹದಿಂದ ಬಳಲುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡುವುದು ಬಹಳ ಪ್ರಯೋಜನಕಾರಿಯಾಗಿದೆ. ಈ ಪುಡಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಪುಡಿಯನ್ನು ನೀವು ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಹಾಲಿನೊಂದಿಗೆ ಸೇವನೆ ಮಾಡಬೇಕು. ಆಗದಿದ್ದರೆ ಬೆಚ್ಚಗಿನ ನೀರಿನೊಂದಿಗೆ ಸಹ ಸೇವಿಸಬಹುದು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗನಿರೋಧಕ ಶಕ್ತಿಯನ್ನು ಆರೋಗ್ಯಕರವಾಗಿ ಹೆಚ್ಚಿಸಿಕೊಳ್ಳಲು ಆಹಾರದಲ್ಲಿ ನುಗ್ಗೆಸೊಪ್ಪಿನ ಪುಡಿಯನ್ನು ಸೇರಿಸಬಹುದು. ಏಕೆಂದರೆ ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಈ ಪುಡಿಯನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಅಥವಾ ದಿನಬಿಟ್ಟು ದಿನ, ಹಾಲಿನೊಂದಿಗೆ ನುಗ್ಗೆಸೊಪ್ಪಿನ ಪುಡಿಯನ್ನು ಸೇವಿಸಬಹುದು.

ಇದನ್ನೂ ಓದಿ: ಹೊಟ್ಟೆ ಕೆಟ್ಟಿದ್ದರೆ ರಾತ್ರಿ ಮಲಗುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ

ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದು ಹೇಗೆ?

ಸಾಮಾನ್ಯವಾಗಿ ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇವಿಸಬಹುದು. ಇಲ್ಲವಾದಲ್ಲಿ ನೀರಿನೊಂದಿಗೆ ಸೇವನೆ ಮಾಡಬಹುದು. ಇದಕ್ಕಾಗಿ ಒಂದು ಲೋಟ ಹಾಲಿಗೆ ಒಂದು ಟೀ ಸ್ಪೂನ್ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಸರಿಯಾಗಿ ಮಿಶ್ರಣ ಮಾಡಿಕೊಂಡು ಕುಡಿಯಿರಿ. ನೀವು ನುಗ್ಗೆಸೊಪ್ಪಿನ ಪುಡಿ ಸೇರಿಸಿದ ಹಾಲನ್ನು ಸಂಜೆ ಅಥವಾ ರಾತ್ರಿ ಸೇವಿಸಬಹುದು. ನಿರಂತರವಾಗಿ ಹಲವು ದಿನಗಳ ವರೆಗೆ ಪ್ರತಿದಿನ ಈ ಹಾಲನ್ನು ಕುಡಿಯುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ, ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ