AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple Health Benefits: ದಿನಕ್ಕೊಂದು ಸೇಬು ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು

ಒಂದೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳುವುದು ಉತ್ತಮ.

Apple Health Benefits: ದಿನಕ್ಕೊಂದು ಸೇಬು ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Aug 09, 2021 | 8:56 AM

Share

ಸಾಮಾನ್ಯವಾಗಿ ಸೇಬು ಹಣ್ಣು ಎಲ್ಲರಿಗೂ ಇಷ್ಟವಾಗುವ ಹಣ್ಣು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ರೋಗದ ಅಪಾಯವನ್ನು ತಡೆಗಟ್ಟುತ್ತದೆ. ಸಾಕಷ್ಟು ಪ್ರಮಾಣದ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಧುಮೇಹ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಹಣ್ಣುಗಳು ಎಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಇಷ್ಟ. ಒಂದೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳುವುದು ಉತ್ತಮ.

ಸೇಬು ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ ಸೇಬು ಹಣ್ಣುಗಳಲ್ಲಿ ಪಾಲಿಫಿನಾಲ್​ನಿಂದ ಸಮೃದ್ಧವಾಗಿದೆ. ದೇಹವನ್ನು ಆರೋಗ್ಯವಾಗಿಡಲು ಇದು ಸಹಾಯಕವಾಗಿದೆ. ಜತೆಗೆ ಫೈಬರ್ ಅಂಶವನ್ನು ಹೆಚ್ಚು ಹೊಂದಿರುವುದರಿಂದ ಆರೋಗ್ಯಕ್ಕೆ ಉತ್ತಮ.

ತೂಕ ನಷ್ಟಕ್ಕೆ ಸಹಾಯಕ ಫೈಬರ್​ನಲ್ಲಿ ನೀರಿನ ಅಂಶ ಹೆಚ್ಚಾಗಿರುವದರಿಂದ ಜತೆಗೆ ಕರಗುವ ಫೈಬರ್ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬು ಹಣ್ಣಿನಲ್ಲಿರುವ ಪಾಲಿಫಿನಾಲ್​ಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಮಧುಮೇಹ ಅಪಾಯವನ್ನು ಕಡಿಮೆ ಮಾಡುತ್ತದೆ ದಿನಕ್ಕೆ ಒಂದು ಸಂಪೂರ್ಣ ಸೇಬು ಹಣ್ಣನ್ನು ಸೇವಿಸುವುದರಿಂದ ಟೈಪ್ 2 ಮಧುಮೇಹ ಅಪಾಯವನ್ನು ಶೇ. 28ರಷ್ಟು ಕಡಿಮೆ ಮಾಡಬಹುದು. ಜತೆಗೆ ಅಸ್ತಮಾ ಅಪಾಯವನ್ನು ಕಡಿಮೆ ಮಾಡುತ್ತದೆ. ಸೇಬು ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ರೋಗ ಅಪಾಯವನ್ನು ಕಡಿಮೆ ಮಾಡುತ್ತದೆ. ಜತೆಗೆ ಆರೋಗ್ಯದ ಸ್ಥಿತಿಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ:

Health Tips: ಉತ್ತಮ ಆರೋಗ್ಯಕ್ಕೆ ಯಾವ ಯಾವ ಹಣ್ಣು ಪೂರಕ?

Dates Health Benefits: ಮಳೆಗಾಲದ ಸಮಯದಲ್ಲಿ ಆರೋಗ್ಯ ಸುಧಾರಣೆಗೆ ಖರ್ಜೂರ ಒಳ್ಳೆಯದು- ತಜ್ಞರ ಸಲಹೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್