AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರೇ ತುಪ್ಪದಲ್ಲಿ ಹುರಿದ ಖರ್ಜೂರ ಸೇವನೆ ಮಾಡಿ, ನಿಮ್ಮ ದೇಹದಲ್ಲಾಗುವ ಬದಲಾವಣೆ ನೋಡಿ

ಖರ್ಜೂರ, ನೈಸರ್ಗಿಕ ಸಕ್ಕರೆ ಅಂಶವನ್ನು ಒಳಗೊಂಡಿರುವುದರಿಂದ ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ. ಇನ್ನು ತುಪ್ಪವು ಕೂಡ ಅದರದ್ದೇ ಆದ ಪ್ರಯೋಜನಗಳನ್ನು ಹೊಂದಿದೆ. ತುಪ್ಪ ಆರೋಗ್ಯಕರ ಕೊಬ್ಬನ್ನು ಹೊಂದಿದ್ದು ಇವೆರಡನ್ನೂ ಒಟ್ಟಿಗೆ ಸೇವಿಸಿದರೆ, ಅನೇಕ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಖರ್ಜೂರದಲ್ಲಿರುವ ನೈಸರ್ಗಿಕ ಸಕ್ಕರೆಗಳಾದ ಗ್ಲೂಕೋಸ್, ಫ್ರಕ್ಟೋಸ್ ಮತ್ತು ಸುಕ್ರೋಸ್ ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತವೆ. ಈ ಸಕ್ಕರೆಗಳು ಸುಲಭವಾಗಿ ಜೀರ್ಣವಾಗುತ್ತವೆ. ಅಷ್ಟೇ ಅಲ್ಲ, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ತುಪ್ಪದಲ್ಲಿ ಹುರಿದುಕೊಂಡು ಖರ್ಜೂರ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಮಹಿಳೆಯರೇ ತುಪ್ಪದಲ್ಲಿ ಹುರಿದ ಖರ್ಜೂರ ಸೇವನೆ ಮಾಡಿ, ನಿಮ್ಮ ದೇಹದಲ್ಲಾಗುವ ಬದಲಾವಣೆ ನೋಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Oct 02, 2024 | 11:06 AM

Share

ಖರ್ಜೂರವು ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ನೈಸರ್ಗಿಕ ಸಕ್ಕರೆ ಅಂಶವನ್ನು ಒಳಗೊಂಡಿರುವುದರಿಂದ ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ. ಇನ್ನು ತುಪ್ಪವು ಕೂಡ ಅದರದ್ದೇ ಆದ ಪ್ರಯೋಜನಗಳನ್ನು ಹೊಂದಿದೆ. ತುಪ್ಪ ಆರೋಗ್ಯಕರ ಕೊಬ್ಬನ್ನು ಹೊಂದಿದ್ದು ಇವೆರಡನ್ನೂ ಒಟ್ಟಿಗೆ ಸೇವಿಸಿದರೆ, ಅನೇಕ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಖರ್ಜೂರದಲ್ಲಿರುವ ನೈಸರ್ಗಿಕ ಸಕ್ಕರೆಗಳಾದ ಗ್ಲೂಕೋಸ್, ಫ್ರಕ್ಟೋಸ್ ಮತ್ತು ಸುಕ್ರೋಸ್ ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತವೆ. ಈ ಸಕ್ಕರೆಗಳು ಸುಲಭವಾಗಿ ಜೀರ್ಣವಾಗುತ್ತವೆ. ಅಷ್ಟೇ ಅಲ್ಲ, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ತುಪ್ಪದಲ್ಲಿ ಹುರಿದುಕೊಂಡು ಖರ್ಜೂರ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ತುಪ್ಪದಲ್ಲಿ ಹುರಿದ ಖರ್ಜೂರವನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅಷ್ಟೇ ಅಲ್ಲ. ಇದು ನಮ್ಮ ದೇಹದ ಅಂಗಾಂಶಗಳ ಆರೋಗ್ಯವನ್ನು ಹೆಚ್ಚಿಸುತ್ತದೆ. ಖರ್ಜೂರ ಮತ್ತು ತುಪ್ಪ ಎರಡರಲ್ಲಿಯೂ ಉತ್ಕರ್ಷಣ ನಿರೋಧಕಗಳಿವೆ. ಅವು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ಮಹಿಳೆಯರ ಆರೋಗ್ಯಕ್ಕೆ ಒಳ್ಳೆಯದು;

ಆರೋಗ್ಯ ತಜ್ಞರ ಪ್ರಕಾರ, ತುಪ್ಪದಲ್ಲಿ ಹುರಿದ ಖರ್ಜೂರವು ಮಹಿಳೆಯರ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಿಶೇಷವಾಗಿ ಗರ್ಭಿಣಿಯರು ಇದನ್ನು ಸೇವನೆ ಮಾಡುವುದರಿಂದ ಗರ್ಭಕೋಶ ಆರೋಗ್ಯಕರವಾಗಿರುತ್ತದೆ. ಇದರ ಪರಿಣಾಮವಾಗಿ ಹೆರಿಗೆಯೂ ಚೆನ್ನಾಗಿ ಆಗಲು ಅವಕಾಶವಿರುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಜೊತೆಗೆ ತುಪ್ಪದಲ್ಲಿ ನೆನೆಸಿದ ಖರ್ಜೂರವು ಒತ್ತಡವನ್ನು ಕಡಿಮೆ ಮಾಡಲು ಮತ್ತು ಆತಂಕ ಮತ್ತು ಹೃದಯ ಬಡಿತದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮೂಳೆಗಳು ಮತ್ತು ಹೃದಯದ ಆರೋಗ್ಯವನ್ನು ಬಲಪಡಿಸಲು ಖರ್ಜೂರ ಒಳ್ಳೆಯದು.

ಇದನ್ನೂ ಓದಿ: ಆಲಿವ್ ಎಣ್ಣೆಯಲ್ಲಿ ಅಡಗಿರುವ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಖರ್ಜೂರವನ್ನು ತುಪ್ಪದಲ್ಲಿ ಹುರಿದು ತಿನ್ನುವುದು ಹೇಗೆ?

ಮೊದಲಿಗೆ, 10 ರಿಂದ 12 ಬೀಜ ರಹಿತ ಖರ್ಜೂರಗಳನ್ನು ತೆಗೆದುಕೊಂಡು ಅವುಗಳನ್ನು ಸರಿಯಾಗಿ ಒಣಗಿಸಿ. ನಂತರ ಒಲೆಯ ಮೇಲೆ ಬಾಣಲೆಯನ್ನು ಇರಿಸಿ ಅದಕ್ಕೆ 2 ಚಮಚ ತುಪ್ಪವನ್ನು ಸೇರಿಸಿ. ಇದು ಸ್ವಲ್ಪ ಬಿಸಿಯಾದ ನಂತರ, ಖರ್ಜೂರವನ್ನು ಸೇರಿಸಿ ಕಡಿಮೆ ಉರಿಯಲ್ಲಿ ಸ್ವಲ್ಪ ಸಮಯ ಹುರಿದುಕೊಳ್ಳಿ. ಹುರಿದ ಖರ್ಜೂರವನ್ನು ತಣ್ಣಗಾಗಿಸಿ ತುಪ್ಪ ಸೇರಿದಂತೆ ಗಾಳಿಯಾಡದ ಗಾಜಿನ ಬಾಟಲಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಿ. ಬಳಿಕ ಇದನ್ನು ದಿನನಿತ್ಯ ಸೇವನೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Wed, 2 October 24