ಕೆಂಪು ಅಕ್ಕಿ ಅಥವಾ ಬಿಳಿ ಅಕ್ಕಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?
ಭಾರತೀಯರು ಅನ್ನವನ್ನು ದೇವರಂತೆ ನೋಡುತ್ತಾರೆ. ನಮ್ಮ ಪ್ರಮುಖ ಆಹಾರಗಳಲ್ಲಿ ಇದು ಒಂದಾಗಿದೆ. ಅನ್ನ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ತೂಕ ನಿಯಂತ್ರಣ, ಹೃದಯದ ಆರೋಗ್ಯ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಇದು ಎಲ್ಲರಿಗೂ ಒಳ್ಳೆಯದೇ? ಕೆಂಪು ಅಕ್ಕಿ ಅಥವಾ ಬಿಳಿ ಅಕ್ಕಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? ನಿಯಮಿತವಾಗಿ ಅನ್ನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ತಿಳಿದುಕೊಳ್ಳಿ.

ಭಾರತೀಯರು ಅನ್ನವನ್ನು ದೇವರಂತೆ ನೋಡುತ್ತಾರೆ. ನಮ್ಮ ಪ್ರಮುಖ ಆಹಾರಗಳಲ್ಲಿ ಇದು ಒಂದಾಗಿದೆ. ಅಲ್ಲದೆ, ಅನ್ನ(Cooked rice) ದೇಹಕ್ಕೆ ಅನೇಕ ರೀತಿಯ ಅಗತ್ಯ ಪೋಷಕಾಂಶಗಳನ್ನು ಒದಗಿಸುವುದು ಮಾತ್ರವಲ್ಲದೆ ಶಕ್ತಿ, ತೂಕ ನಿಯಂತ್ರಣ(Weight Control) ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೂಡ ಸಹಾಯ ಮಾಡುತ್ತದೆ. ಇದು ಕಾರ್ಬೋಹೈಡ್ರೇಟ್(Carbohydrate) ಗಳ ಉತ್ತಮ ಮೂಲವಾಗಿರುವುದರಿಂದ ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ. ಅದರಲ್ಲಿಯೂ ವಿಶೇಷವಾಗಿ ಬಿಳಿ ಅಕ್ಕಿಯ ಸೇವನೆ ಗ್ಲೈಕೋಜೆನ್ ಸಂಗ್ರಹವನ್ನು ಹೆಚ್ಚಿಸಿ ಶಕ್ತಿ ನೀಡುತ್ತದೆ. ಆದ್ದರಿಂದ ದೈಹಿಕ ಚಟುವಟಿಕೆ ಮಾಡುವವರಿಗೆ, ಅನ್ನ ಸೇವನೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಆದರೆ ಇದು ಎಲ್ಲರಿಗೂ ಒಳ್ಳೆಯದೇ? ಕೆಂಪು ಅಕ್ಕಿ(red rice) ಅಥವಾ ಬಿಳಿ ಅಕ್ಕಿ(White rice) ಆರೋಗ್ಯಕ್ಕೆ ಯಾವುದು ಒಳ್ಳೆಯದು? ನಿಯಮಿತವಾಗಿ ಅನ್ನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ತಿಳಿದುಕೊಳ್ಳಿ.
ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ;
ಕೆಂಪು ಅಕ್ಕಿ ದೇಹಕ್ಕೆ ಒಳ್ಳೆಯದು ಇದರಿಂದ ಮಾಡುವ ಗಂಜಿಯಿಂದ ಆರೋಗ್ಯ ಸಮಸ್ಯೆಗಳು ದೂರವಾಗಿ ದೇಹ ರೋಗಗಳಿಂದ ದೂರವಿರುತ್ತದೆ. ಇದರ ನಿಯಮಿತ ಸೇವನೆಯಿಂದ ತೂಕ ಇಳಿಸಿಕೊಳ್ಳಲು ಅಥವಾ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಲ್ಲಿರುವ ಫೈಬರ್ ಅಂಶವೂ ಕೂಡ ದೇಹದ ತೂಕವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಅನ್ನದಲ್ಲಿರುವ ಪೋಷಕಾಂಶಗಳು ದೇಹಕ್ಕೆ ಅಗತ್ಯವಾದ ಪ್ರೋಟೀನ್ ಮತ್ತು ಫೈಬರ್ ಅನ್ನು ಒದಗಿಸುತ್ತವೆ ಜೊತೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಆದರೆ ಇದರ ಅತಿಯಾದ ಸೇವನೆ ಒಳ್ಳೆಯದಲ್ಲ.
ಮಧುಮೇಹಿಗಳಿಗೆ ಒಳ್ಳೆಯದು;
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅನ್ನ ಸಹಾಯ ಮಾಡುತ್ತದೆ. ಆದರೆ ಇದಕ್ಕೆ ಬಿಳಿ ಅಕ್ಕಿಗಿಂತ ಕೆಂಪು ಅಕ್ಕಿ ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಇದರಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇದ್ದು, ಮಧುಮೇಹ ಇರುವವರು ಅಕ್ಕಿಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಹೃದಯದ ಆರೋಗ್ಯ ಕಾಪಾಡುತ್ತದೆ;
ಅನ್ನದಲ್ಲಿ ಫೋಲಿಕ್ ಆಮ್ಲ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳಿವೆ. ಇವು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೃದ್ರೋಗಗಳನ್ನು ತಪ್ಪಿಸಲು ಬ್ರೌನ್ ರೈಸ್ ಉತ್ತಮ ಆಯ್ಕೆಯಾಗಿದೆ. ಬಿಳಿ ಅಕ್ಕಿ, ಕೆಂಪು ಅಕ್ಕಿಯಂತಹ ಅಕ್ಕಿ ಪ್ರಭೇದಗಳು ಗ್ಲುಟೆನ್ ಮುಕ್ತವಾಗಿರುವುದರಿಂದ ಇದರ ಸೇವನೆ ಮೂಲಕ ಆರೋಗ್ಯವಾಗಿರಬಹುದು.
ಇದನ್ನೂ ಓದಿ: ಮಡಕೆಯಲ್ಲಿ ಇಟ್ಟ ಮೊಸರು ಹುಳಿ ಬರದಿರಲು ಕಾರಣವೇನು?
ಪ್ರತಿದಿನ ಅನ್ನ ಸೇವನೆ ಮಾಡುವುದರಿಂದ ದೇಹಕ್ಕೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅಕ್ಕಿಯನ್ನು ಸಮತೋಲಿತ ಮತ್ತು ಸೀಮಿತ ರೀತಿಯಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ. ಕೆಂಪು ಅಕ್ಕಿಯಂತಹ ಆರೋಗ್ಯಕರ ಆಯ್ಕೆಗಳನ್ನು ಆಹಾರದಲ್ಲಿ ಸೇರಿಸುವ ಮೂಲಕ, ಶಕ್ತಿ, ತೂಕ ನಿಯಂತ್ರಣ, ಹೃದಯದ ಆರೋಗ್ಯವನ್ನು ಕಾಪಾಡಬಹುದು.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ