ಈ ಒಣಹಣ್ಣನ್ನು ನೆನೆಸಿಟ್ಟು ತಿಂದರೆ ತೂಕ ಇಳಿಯೋದು ಗ್ಯಾರಂಟಿ
ಕೆಲವರಿಗೆ ಒಣಹಣ್ಣುಗಳನ್ನು ತಿನ್ನುವ ಅಭ್ಯಾಸವಿರುತ್ತದೆ. ಈ ಹಣ್ಣುಗಳಲ್ಲಿ ಅಂಜೂರದ ಹಣ್ಣು ಕೂಡ ಸೇರಿದೆ. ತಾಜಾ ಹಣ್ಣುಗಳು ತಿನ್ನಲು ರುಚಿಕರವಾಗಿದ್ದು ಮೃದುವಾಗಿರುತ್ತದೆ. ಆದರೆ ಒಣ ಅಂಜೂರ ಹಣ್ಣನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಖಾಲಿ ಹೊಟ್ಟೆಗೆ ನೀರು ಸಹಿತ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಈ ನೆನೆಸಿಟ್ಟ ಒಣ ಅಂಜೂರದ ಹಣ್ಣುಗಳ ಸೇವನೆಯೂ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಬಹಳ ಪರಿಣಾಮಕಾರಿಯಾಗಿದೆ ಎನ್ನುತ್ತಾರೆ ತಜ್ಞರು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ

ಒಣ ಅಂಜೂರ
ಎಲ್ಲರೂ ಇಷ್ಟ ಪಟ್ಟು ಸೇವಿಸುವ ಒಣಹಣ್ಣಾದ ಅಂಜೂರವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಸಿಹಿ ರುಚಿ ಹೊಂದಿರುವ ಈ ಅಂಜೂರದಲ್ಲಿ ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಕೆ ಮತ್ತು ವಿಟಮಿನ್ ಬಿ 6 ಪೋಷಕಾಂಶಗಳನ್ನು ಹೊಂದಿದೆ. ಇದನ್ನು ಹಾಗೆಯೇ ತಿನ್ನುವುದಕ್ಕಿಂತ ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಒಣ ಅಂಜೂರ ಸೇವನೆ ಮಾಡುವುದು ಪರಿಣಾಮಕಾರಿಯಾಗಿದೆ. ಇದರ ನಿಯಮಿತ ಸೇವನೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ವಿದಾಯ ಹೇಳಬಹುದಾಗಿದೆ
- ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ : ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ನೆನೆಸಿಟ್ಟ ಅಂಜೂರ ಹಣ್ಣಿನ ಸೇವನೆಯೂ ಪರಿಣಾಮಕಾರಿಯಾಗಿದೆ. ಇದರಲ್ಲಿ ಫೈಬರ್ ಹೆಚ್ಚಿದ್ದು, ಇದು ಕರುಳಿನ ಚಲನೆ ಹಾಗೂ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆಯಂತಹ ಸಮಸ್ಯೆಯನ್ನು ನಿವಾರಿಸುತ್ತದೆ
- ಅಧಿಕ ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ : ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಪೊಟ್ಯಾಸಿಯಮ್ ಅತ್ಯಗತ್ಯ. ಈ ನೆನೆಸಿಟ್ಟ ಅಂಜೂರದಲ್ಲಿ ಪೊಟ್ಯಾಸಿಯಮ್ ಹೇರಳವಾಗಿದ್ದು, ನೆನೆಸಿಟ್ಟ ಅಂಜೂರ ಬೆಳಗ್ಗೆ ಸೇವಿಸಿದರೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
- ಚರ್ಮದ ಆರೋಗ್ಯಕ್ಕೆ ಉತ್ತಮ : ಅಂಜೂರದಲ್ಲಿ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಹೇರಳವಾಗಿದ್ದು, ಇದು ಚರ್ಮದ ಆರೋಗ್ಯಕ್ಕೆ ಬಹಳ ಅಗತ್ಯವಾಗಿದೆ. ಈ ನೆನೆಸಿಟ್ಟ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಚರ್ಮದ ಆರೋಗ್ಯ ಕಾಪಾಡಿ, ಕಾಂತಿಯುತ ಚರ್ಮವನ್ನು ಪಡೆಯಲು ಸಹಕಾರಿಯಾಗಿದೆ.
- ಮೂಳೆಗಳನ್ನು ಬಲಗೊಳಿಸುತ್ತದೆ : ಅಂಜೂರದ ಹಣ್ಣುಗಳಲ್ಲಿ ಕ್ಯಾಲ್ಸಿಯಂ ಮತ್ತು ರಂಜಕಗಳಿಂದ ಸಮೃದ್ಧವಾಗಿದೆ. ಇದು ಮೂಳೆಯ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಇದರ ನಿಯಮಿತ ಸೇವನೆ ಮೂಳೆಗಳನ್ನು ಗಟ್ಟಿಮುಟ್ಟಾಗಿಸುತ್ತದೆ.
- ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ : ಮಧುಮೇಹಿಗಳಿಗೆ ನೆನೆಸಿಟ್ಟ ಅಂಜೂರ ಹಣ್ಣು ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಈ ಹಣ್ಣಿನಲ್ಲಿ ಅಬ್ಸಿಸಿಕ್ ಆಮ್ಲ, ಮ್ಯಾಲಿಕ್ ಆಮ್ಲ ಮತ್ತು ಕ್ಲೋರೊಜೆನಿಕ್ ಆಮ್ಲದಂತಹ ಸಂಯುಕ್ತಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ.
- ಹೃದಯದ ಆರೋಗ್ಯಕ್ಕೆ ಒಳ್ಳೆಯದು : ಅಂಜೂರದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ದೇಹದಲ್ಲಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ಇದು ರಕ್ತದ ಒತ್ತಡವನ್ನು ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
- ತೂಕ ಇಳಿಕೆಗೆ ಸಹಕಾರಿ : ದೇಹದ ತೂಕವನ್ನು ನಿಯಂತ್ರಿಸಬೇಕೆನ್ನುವವರಿಗೆ ನಾರಿನ ಅಂಶವಿರುವ ಆಹಾರ ಸೇವಿಸುವುದು ಉತ್ತಮ. ಹೀಗಾಗಿ ನೀವು ಅಂಜೂರ ಹಣ್ಣನ್ನು ಆಹಾರದ ಭಾಗವಾಗಿಸಿಕೊಳ್ಳಬಹುದು. ಇದನ್ನು ದಿನನಿತ್ಯ ಸೇವಿಸುವುದರಿಂದ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ