AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ಎಷ್ಟೇ ದಪ್ಪವಿದ್ದರೂ ಕರಗಿಸಲು ಇಲ್ಲಿದೆ ಸರಳ ಉಪಾಯ

ನಮ್ಮ ಆಹಾರದಲ್ಲಿ ಕೆಲವು ಆರೋಗ್ಯಕರ ಬದಲಾವಣೆ ಮಾಡಿಕೊಳ್ಳುವ ಮೂಲಕ ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದು ಅಷ್ಟು ಸುಲಭವಲ್ಲವಾದರೂ ಕೂಡ ಸ್ವಲ್ಪ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವುದರಿಂದ ಮುಂದೆ ಹೆಚ್ಚಿನ ಪ್ರತಿಫಲ ನೀಡುತ್ತದೆ ಎಂಬುದು ಸುಳ್ಳಲ್ಲ. ಇದಕ್ಕೆ ಪೂರಕವೆಬಂತೆ ಅಂಜೂರ, ಬೊಜ್ಜಿನ ಸಮಸ್ಯೆಯಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಹೇಗೆ? ಹಾಗಾದರೆ ಇದರ ಸೇವನೆ ಯಾವ ರೀತಿ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಹೊಟ್ಟೆ ಎಷ್ಟೇ ದಪ್ಪವಿದ್ದರೂ ಕರಗಿಸಲು ಇಲ್ಲಿದೆ ಸರಳ ಉಪಾಯ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 26, 2025 | 4:09 PM

ಇತ್ತೀಚಿನ ದಿನಗಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಕೂಡ ಬೊಜ್ಜಿನ ವಿರುದ್ಧ ಸಮರ ಸಾರಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಬೊಜ್ಜಿನ ವಿರುದ್ಧದ ಹೋರಾಟವನ್ನು ಬಲಪಡಿಸಲು ಮತ್ತು ಆಹಾರದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡ ನಮ್ಮ ಆಹಾರದಲ್ಲಿ ಕೆಲವು ಆರೋಗ್ಯಕರ ಬದಲಾವಣೆ ಮಾಡಿಕೊಳ್ಳುವ ಮೂಲಕ ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದು ಅಷ್ಟು ಸುಲಭವಲ್ಲವಾದರೂ ಕೂಡ ಸ್ವಲ್ಪ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವುದರಿಂದ ಮುಂದೆ ಹೆಚ್ಚಿನ ಪ್ರತಿಫಲ ನೀಡುತ್ತದೆ ಎಂಬುದು ಸುಳ್ಳಲ್ಲ. ಇದಕ್ಕೆ ಪೂರಕವೆಬಂತೆ ಅಂಜೂರ, ಬೊಜ್ಜಿನ ಸಮಸ್ಯೆಯಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಹೇಗೆ? ಇದರ ಸೇವನೆ ಯಾವ ರೀತಿ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಅಂಜೂರದಲ್ಲಿ ಅನೇಕ ರೀತಿಯ ಪೋಷಕಾಂಶಗಳಿವೆ ಜೊತೆಗೆ ಇದರಲ್ಲಿ ಔಷಧೀಯ ಗುಣಗಳು ಕೂಡ ಇವೆ. ಅವು ಆರೋಗ್ಯಕ್ಕೆ ಒಳ್ಳೆಯದು ಮತ್ತು ಅನೇಕ ರೋಗಗಳು ಬರದಂತೆ ತಡೆಯುತ್ತವೆ. ಅದಲ್ಲದೆ ಅಂಜೂರ ಬೊಜ್ಜನ್ನು ದೂರವಿಡುತ್ತದೆ ಮತ್ತು ನಿಮ್ಮನ್ನು ಆರೋಗ್ಯವಾಗಿರಿಸುತ್ತದೆ. ಅಂಜೂರದ ಹಣ್ಣಿನಲ್ಲಿ ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಬಿ 6 ಮುಂತಾದ ಪೋಷಕಾಂಶಗಳಿವೆ. ಆದರೆ ಇವುಗಳನ್ನು ಹಾಗೆಯೇ ತಿನ್ನುವ ಬದಲು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಹೆಚ್ಚು ಪರಿಣಾಮಕಾರಿ ಎಂದು ವೈದ್ಯರು ಹೇಳುತ್ತಾರೆ. ಅದಲ್ಲದೆ ಅಂಜೂರ ಕೇವಲ ದೇಹದ ಕೊಬ್ಬನ್ನು ಕರಗಿಸಲು ಮಾತ್ರವಲ್ಲ ಇನ್ನು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾದರೆ ಅಂಜೂರ ತಿನ್ನುವುದರಿಂದ ಸಿಗುವ ಆರೋಗ್ಯಕರ ಲಾಭಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: ಒಂದೇ ರಕ್ತ ಪರೀಕ್ಷೆಯಿಂದ ನೀವು ಯಾವಾಗ ಮತ್ತು ಹೇಗೆ ಸಾಯುತ್ತೀರಿ ಎಂದು ಹೇಳಬಹುದು! ಸಂಶೋಧನೆಯಲ್ಲಿ ಬಹಿರಂಗ

ಇದನ್ನೂ ಓದಿ
Image
ಮಕ್ಕಳಲ್ಲಿ ‘ಬೊಜ್ಜು’ ಬರುಲು ಪೋಷಕರೇ ಕಾರಣ, ಅದು ಹೇಗೆ?
Image
ಸ್ಥೂಲಕಾಯತೆಯನ್ನು ಎದುರಿಸುವ ಕುರಿತು ಜಾಗೃತಿ ಮೂಡಿಸಿದ ಏಮ್ಸ್
Image
ಮೋದಿ ಫಿಟ್ ಇಂಡಿಯಾ ಕರೆಗೆ ಅಕ್ಷಯ್ ಕುಮಾರ್, ವೈದ್ಯರು,ಕ್ರೀಡಾಪಟುಗಳ ಬೆಂಬಲ
Image
ಸ್ಥೂಲಕಾಯತೆಯಿಂದ ಬಳಲುತ್ತಿದ್ದೀರಾ? ಆಹಾರದಲ್ಲಿ ಈ ಬದಲಾವಣೆ ಮಾಡಿ

ಅಂಜೂರದ ಆರೋಗ್ಯ ಪ್ರಯೋಜನಗಳು;

ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಪೊಟ್ಯಾಸಿಯಮ್ ತುಂಬಾ ಅವಶ್ಯಕ. ನೆನೆಸಿದ ಈ ಅಂಜೂರದ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದನ್ನು ಬೆಳಿಗ್ಗೆ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ: ನೆನೆಸಿದ ಅಂಜೂರವನ್ನು ತಿನ್ನುವುದರಿಂದ ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದರಲ್ಲಿ ನಾರಿನಂಶ ಅಧಿಕವಾಗಿರುವುದರಿಂದ ಕರುಳಿನ ಚಲನೆಯನ್ನು ಸುಗಮಗೊಳಿಸಿ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು: ಅಂಜೂರದಲ್ಲಿ ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ, ಇದು ಚರ್ಮದ ಆರೋಗ್ಯಕ್ಕೆ ಅವಶ್ಯಕವಾಗಿದೆ. ಈ ನೆನೆಸಿದ ಅಂಜೂರ ತಿನ್ನುವುದು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಹೊಳೆಯುವ ಚರ್ಮವನ್ನು ಪಡೆಯಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ: ಅಂಜೂರದಲ್ಲಿ ಕ್ಯಾಲ್ಸಿಯಂ ಮತ್ತು ರಂಜಕ ಸಮೃದ್ಧವಾಗಿದೆ. ಇದು ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ: ನೆನೆಸಿದ ಅಂಜೂರವು ಮಧುಮೇಹಿಗಳಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಈ ಹಣ್ಣಿನಲ್ಲಿ ಅಬ್ಸಿಸಿಕ್ ಆಮ್ಲ, ಮಾಲಿಕ್ ಆಮ್ಲ ಮತ್ತು ಕ್ಲೋರೊಜೆನಿಕ್ ಆಮ್ಲದಂತಹ ಸಂಯುಕ್ತಗಳಿವೆ. ಅವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಅಂಜೂರದಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಫ್ರೀ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ: ದೇಹದ ತೂಕವನ್ನು ನಿಯಂತ್ರಿಸಲು ಬಯಸುವವರು ಫೈಬರ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕಾಗುತ್ತದೆ. ಆದ್ದರಿಂದ, ನೀವು ಅಂಜೂರವನ್ನು ನಿಮ್ಮ ಆಹಾರದ ಒಂದು ಭಾಗವಾಗಿ ಮಾಡಿಕೊಂಡು ಪ್ರತಿದಿನ ಸೇವಿಸುವುದರಿಂದ ತೂಕ ಇಳಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Wed, 26 February 25