Health Tips: ಶುಂಠಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆಯೇ? ತಜ್ಞರು ಹೇಳುವುದೇನು?
ಸಾಮಾನ್ಯವಾಗಿ ಚಳಿಗಾಲದಲ್ಲಿ ರಕ್ತದೊತ್ತಡ ಹೆಚ್ಚಾಗಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಒತ್ತಡ ಹೆಚ್ಚಾದಾಗ ನಮ್ಮ ದಿನನಿತ್ಯದ ಕೆಲಸಕ್ಕೆ ತೊಂದರೆಯಾಗುತ್ತದೆ ಅದಲ್ಲದೆ ಇತರರಿಗೆ ಹೋಲಿಸಿದರೆ ಅಂತವರು ಬಿಪಿ ಸಮಸ್ಯೆಗಳು ಬರುವ ಅಪಾಯದಲ್ಲಿರುತ್ತಾರೆ. ಹಾಗಾಗಿ ಹೆಚ್ಚು ಕರಿದ ಆಹಾರ, ಜಂಕ್ ಫುಡ್, ಯಾವುದೇ ವ್ಯಾಯಾಮ ಮಾಡದಿರುವುದು, ಸರಿಯಾಗಿ ನಿದ್ರೆ ಮಾಡದಿರುವುದು ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಬಹುದು. ಇಂತಹ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ನಮ್ಮ ಆಹಾರದಲ್ಲಿ ಕೆಲವು ನೈಸರ್ಗಿಕವಾದವುಗಳನ್ನು ಸೇರಿಸಿಕೊಳ್ಳುವುದು ಬಹಳ ಒಳ್ಳೆಯದು.
ಸಾಮಾನ್ಯವಾಗಿ ಚಳಿಗಾಲದಲ್ಲಿ ನಮ್ಮ ಜೀವನಶೈಲಿಯಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು ಮಾಡಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಇದು ದೇಹದಲ್ಲಿ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಜೊತೆಗೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾಗಿ ಈ ಋತುವಿನಲ್ಲಿ ನಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು ಅನೇಕ ರೀತಿಯ ಆಹಾರ ಪದಾರ್ಥಗಳು ಲಭ್ಯವಿದ್ದು, ಇವು ನಮ್ಮ ಮುಕ್ಕಾಲು ಭಾಗ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ದೈಹಿಕ ಚಟುವಟಿಕೆ ಕುಂಠಿತ ಮತ್ತು ಅಪಧಮನಿಗಳ ಕಿರಿದಾಗುವಿಕೆಯಿಂದಾಗಿ ಚಳಿಗಾಲದಲ್ಲಿ ರಕ್ತದೊತ್ತಡ ಹೆಚ್ಚಾಗಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಒತ್ತಡ ಹೆಚ್ಚಾದಾಗ ನಮ್ಮ ದಿನನಿತ್ಯದ ಕೆಲಸಕ್ಕೆ ತೊಂದರೆಯಾಗುತ್ತದೆ ಅದಲ್ಲದೆ ಇತರರಿಗೆ ಹೋಲಿಸಿದರೆ ಅಂತವರು ಬಿಪಿ ಸಮಸ್ಯೆಗಳು ಬರುವ ಅಪಾಯದಲ್ಲಿರುತ್ತಾರೆ. ಹಾಗಾಗಿ ಹೆಚ್ಚು ಕರಿದ ಆಹಾರ, ಜಂಕ್ ಫುಡ್, ಯಾವುದೇ ವ್ಯಾಯಾಮ ಮಾಡದಿರುವುದು, ಸರಿಯಾಗಿ ನಿದ್ರೆ ಮಾಡದಿರುವುದು ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಬಹುದು. ಇಂತಹ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ನಮ್ಮ ಆಹಾರದಲ್ಲಿ ಕೆಲವು ನೈಸರ್ಗಿಕವಾದವುಗಳನ್ನು ಸೇರಿಸಿಕೊಳ್ಳುವುದು ಬಹಳ ಒಳ್ಳೆಯದು.
ಸಾಮಾನ್ಯವಾಗಿ ಶುಂಠಿಯನ್ನು ಪ್ರತಿಯೊಬ್ಬರ ಮನೆಯಲ್ಲಿಯೂ ಒಂದಲ್ಲಾ ಒಂದು ರೀತಿಯಲ್ಲಿ ಉಪಯೋಗ ಮಾಡುತ್ತಾರೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದ್ದು ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ ನೈಸರ್ಗಿಕ ಆಹಾರವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ಶುಂಠಿ ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಮಾತ್ರವಲ್ಲದೆ ಇತರ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಶುಂಠಿಯನ್ನು ನಿಮ್ಮ ಆಹಾರದ ಒಂದು ಭಾಗವಾಗಿ ಮಾಡಿಕೊಳ್ಳಿ.
ಶುಂಠಿಯಲ್ಲಿರುವ ಆರೋಗ್ಯ ಪ್ರಯೋಜನಗಳು:
ಇದರಲ್ಲಿ ಅನೇಕ ಜೈವಿಕ ಸಕ್ರಿಯ ಸಂಯುಕ್ತಗಳಿವೆ, ಇದು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹತೋಟಿಯಲ್ಲಿಡಲು ಸಹಾಯ ಮಾಡುತ್ತದೆ. ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ನಂತಹ ಸಂಯುಕ್ತಗಳು ಕಂಡುಬರುತ್ತವೆ. ಇದಲ್ಲದೆ, ಇದು ಸಾಕಷ್ಟು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಜೊತೆಗೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತನಾಳಗಳು ಸಡಿಲಗೊಳ್ಳುತ್ತವೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಈ ಎಲ್ಲಾ ಅಂಶಗಳು ಬಿಪಿ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
ಶುಂಠಿಯಲ್ಲಿ ಉರಿಯೂತ ಶಮನಕಾರಿ ಗುಣಗಳಿವೆ. ದೇಹದ ಯಾವುದೇ ಭಾಗದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಅವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಜೊತೆಗೆ ಶುಂಠಿ ತಿನ್ನುವುದು ದೇಹವನ್ನು ನಿರ್ವಿಷಗೊಳಿಸುತ್ತದೆ. ಕೀಲುಗಳು ಮತ್ತು ಸ್ನಾಯುಗಳಲ್ಲಿ ನೋವು ಇದ್ದವರು ಇದನ್ನು ತಿನ್ನುವುದು ಬಹಳ ಪ್ರಯೋಜನಕಾರಿಯಾಗಿದೆ.
ಇದನ್ನೂ ಓದಿ: ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ
ಸಾಮಾನ್ಯವಾಗಿ ಚಳಿಗಾಲದಲ್ಲಿ ಪದೇ ಪದೇ ಕಂಡು ಬರುವ ಶೀತ ಮತ್ತು ಕೆಮ್ಮಿಗೂ ಸಹ ಶುಂಠಿ ಪರಿಣಾಮಕಾರಿ ಮದ್ದಾಗಿದೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದಲ್ಲಿ ಶುಂಠಿ ಸೇವನೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದೆಲ್ಲದರ ಜೊತೆಗೆ ಶುಂಠಿಯನ್ನು ತಿನ್ನುವ ಮೂಲಕ ವೈರಲ್ ಮತ್ತು ಕಾಲೋಚಿತ ಸೋಂಕುಗಳ ಅಪಾಯವನ್ನು ಕೂಡ ತಪ್ಪಿಸಬಹುದು.
(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.)
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:53 pm, Sat, 18 January 25