ಶುಂಠಿ ಯಾವುದೇ ಆಯುರ್ವೇದ ಔಷಧಿಗೂ ಕಡಿಮೆಯಿಲ್ಲದಂತಹ ಅನೇಕ ರೀತಿಯ ಆರೋಗ್ಯ ಗುಣಗಳನ್ನು ಹೊಂದಿರುವ ನೈಸರ್ಗಿಕ ಮದ್ದಾಗಿದೆ. ಇದು ತನ್ನಲ್ಲಿ ಹಲವು ರೀತಿಯ ಪೋಷಕಾಂಶಗಳನ್ನು ಒಳಗೊಂಡಿದ್ದು ಹಸಿಯಾಗಿ ಅದನ್ನು ಜಗಿದು ತಿನ್ನಬಹುದು. ಇದರ ರಸವನ್ನು ಸೇವನೆ ಮಾಡಬಹುದು ಅಥವಾ ಇದನ್ನು ನಾನಾ ರೀತಿಯ ಗಿಡಮೂಲಿಕೆಗಳೊಂದಿಗೆ ಬೆರೆಸಿ ಚಹಾ ಮಾಡಿ ಕುಡಿಯಬಹುದು. ಹಾಗಾದರೆ ಶುಂಠಿಯನ್ನು ಯಾವ ರೀತಿ ಮತ್ತು ಯಾವ ಸಮಯದಲ್ಲಿ ಸೇವನೆ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಬೇಕು. ವಾಸ್ತವದಲ್ಲಿ ಶುಂಠಿ ನಮ್ಮ ಅಡುಗೆ ಮನೆಯ ಪ್ರಮುಖ ಭಾಗವಾಗಿರುವುದರಿಂದ ಇದರ ಸಹಾಯದಿಂದ ನಾವು ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯವ ಮೂಲಕ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬಹುದು. ಶುಂಠಿಯಲ್ಲಿರುವ ಜಿಂಜರಾಲ್ ಎಂಬ ಸಂಯುಕ್ತವು ತುಂಬಾ ಪ್ರಯೋಜನಕಾರಿಯಾಗಿದ್ದು ಇದಲ್ಲದೆ, ಇದು ವಿಟಮಿನ್ ಬಿ 3, ವಿಟಮಿನ್ ಬಿ 6, ವಿಟಮಿನ್ ಸಿ, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ರಂಜಕ, ಸತು, ಫೋಲೇಟ್, ರಿಬೋಫ್ಲೇವಿನ್ ಮತ್ತು ನಿಯಾಸಿನ್ ನಂತಹ ಪೋಷಕಾಂಶಗಳನ್ನು ಸಹ ಒಳಗೊಂಡಿದ್ದು ಇದರ ಸೇವನೆಯಿಂದ ಸಿಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಶುಂಠಿಯಲ್ಲಿರುವ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಆ ಮೂಲಕ ಗ್ಯಾಸ್, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶುಂಠಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದ್ದು ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ನೈಸರ್ಗಿಕ ಮೂತ್ರವರ್ಧಕಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ: ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿರಿಸುವುದಲ್ಲದೆ ಹೊಳೆಯುವಂತೆ ಮಾಡುತ್ತದೆ. ಚರ್ಮದ ಸೌಂದರ್ಯವನ್ನು ಹೆಚ್ಚಿಸುತ್ತದೆ.
ತೂಕ ನಷ್ಟ: ಶುಂಠಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಏಕೆಂದರೆ ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಶೀತ – ಕೆಮ್ಮನ್ನು ತಡೆಯುತ್ತದೆ: ಶುಂಠಿ ಶಾಖವನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ಶೀತ ಮತ್ತು ಕೆಮ್ಮನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಮಧುಮೇಹ ತಡೆಗಟ್ಟುತ್ತದೆ: ಶುಂಠಿ ಸೇವನೆಯು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಸಂಧಿವಾತ ರೋಗಿಗಳಿಗೆ ಒಳ್ಳೆಯದು: ಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣಗಳು ಸಂಧಿವಾತ ರೋಗಿಗಳಿಗೆ ಅಮೃತದಂತೆ ಕಾರ್ಯ ನಿರ್ವಹಿಸುತ್ತದೆ.
ಒತ್ತಡವನ್ನು ಕಡಿಮೆ ಮಾಡುತ್ತದೆ: ಶುಂಠಿ ಸೇವನೆಯು ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.
ಅಲ್ಝೈಮರ್‌ನಿಂದ ರಕ್ಷಣೆ: ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಅಲ್ಝೈಮರ್ ನಂತಹ ಮಾನಸಿಕ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
(ಸೂಚನೆ: ಇಲ್ಲಿ ನೀಡಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ನಿಮ್ಮ ತಜ್ಞರ ಸಲಹೆ ಪಡೆಯಿರಿ.)
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ