Guava Benefits: ಗುಲಾಬಿ ಮತ್ತು ಬಿಳಿ ಪೇರಳೆಯಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?

ಮಾರುಕಟ್ಟೆಯಲ್ಲಿ ಎಲ್ಲೆಂದರಲ್ಲಿ ಪೇರಳೆ(Guava)ಯ ಮಾರಾಟ ಮಾಡುವುದನ್ನು ನೀವು ನೋಡಿಯೇ ಇರುತ್ತೀರಿ. ನಿಮಗೆ ಪೇರಳೆ ಹಣ್ಣು ಇಷ್ಟವೆಂದಾದಲ್ಲಿ ನೀವು ಹಣ್ಣನ್ನು ಖರೀದಿಸುವಾಗ ಅದು ಯಾವ ಬಣ್ಣದ್ದು ಎಂದು ಪ್ರಶ್ನೆ ಮಾಡಲು ಹೋಗುವುದಿಲ್ಲ, ಹಣ್ಣು ಚೆನ್ನಾಗಿದ್ದರೆ ಹಾಗೆಯೇ ಖರೀದಿ ಮಾಡಿ ತಂದುಬಿಡುತ್ತೀರಿ.

Guava Benefits: ಗುಲಾಬಿ ಮತ್ತು ಬಿಳಿ ಪೇರಳೆಯಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
Guava BenefitsImage Credit source: Mashed
Follow us
| Updated By: ನಯನಾ ರಾಜೀವ್

Updated on: Sep 20, 2022 | 12:01 PM

ಮಾರುಕಟ್ಟೆಯಲ್ಲಿ ಎಲ್ಲೆಂದರಲ್ಲಿ ಪೇರಳೆ(Guava)ಯ ಮಾರಾಟ ಮಾಡುವುದನ್ನು ನೀವು ನೋಡಿಯೇ ಇರುತ್ತೀರಿ. ನಿಮಗೆ ಪೇರಳೆ ಹಣ್ಣು ಇಷ್ಟವೆಂದಾದಲ್ಲಿ ನೀವು ಹಣ್ಣನ್ನು ಖರೀದಿಸುವಾಗ ಅದು ಯಾವ ಬಣ್ಣದ್ದು ಎಂದು ಪ್ರಶ್ನೆ ಮಾಡಲು ಹೋಗುವುದಿಲ್ಲ, ಹಣ್ಣು ಚೆನ್ನಾಗಿದ್ದರೆ ಹಾಗೆಯೇ ಖರೀದಿ ಮಾಡಿ ತಂದುಬಿಡುತ್ತೀರಿ.

ಪೋಷಕಾಂಶಗಳಿಂದ ಕೂಡಿದ ಪೇರಳೆಯು ನಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ವಿಟಮಿನ್ ಸಿ, ಲೈಕೋಪೀನ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಪೇರಳೆಯಲ್ಲಿ ಕಂಡುಬರುವ ಮ್ಯಾಂಗನೀಸ್ ಆಹಾರದಲ್ಲಿರುವ ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಇದರಲ್ಲಿ ಕಂಡುಬರುವ ಫೋಲೇಟ್ ಫಲವತ್ತತೆಯನ್ನು ಹೆಚ್ಚಿಸಲು ಸಹಾಯಕವಾಗಿದೆ ಎಂದು ಸಾಬೀತುಪಡಿಸುತ್ತದೆ. ಬಹುಪಾಲು ಪೇರಳೆಯು ದೇಹಕ್ಕೆ ಪ್ರಯೋಜನವನ್ನು ನೀಡುತ್ತದೆ. ಗುಲಾಬಿ ಮತ್ತು ಬಿಳಿ ಪೇರಳೆಗಳಲ್ಲಿ ಯಾವುದು ನಮ್ಮ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ಗೊತ್ತೇ| ಗುಲಾಬಿ ಮತ್ತು ಬಿಳಿ ಪೇರಳೆಯನ್ನು ಹೋಲಿಕೆ ಮಾಡಿ, ಅದಕ್ಕೂ ಮೊದಲು ಪೇರಳೆಯ ಇತರ ಪ್ರಯೋಜನಗಳೇನು ಎಂದು ತಿಳಿಯೋಣ.

ಪೇರಳೆಯನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ

ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸರಿಪಡಿಸಲು ಪೇರಳೆಯು ಸಹಾಯ ಮಾಡುತ್ತದೆ ಎಂದು ಆಹಾರ ತಜ್ಞರು ನಂಬುತ್ತಾರೆ. ಪೇರಳೆಯಲ್ಲಿ ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ, ಇದು ಮೂಳೆಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರುತ್ತದೆ.

ಇದರೊಂದಿಗೆ, ತೂಕ ನಷ್ಟದ ಸಮಯದಲ್ಲಿ ಇದು ಬಹಳಷ್ಟು ಸಹಾಯ ಮಾಡುತ್ತದೆ. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಿಳಿ ಮತ್ತು ಗುಲಾಬಿ ಪೇರಳೆಯ ನಡುವೆ ಯಾವುದು ಹೆಚ್ಚು ಪ್ರಯೋಜನಕಾರಿ? ಗುಲಾಬಿ ಪೇರಳೆಯು ಬಿಳಿ ಪೇರಳೆಗಿಂತ ಕಡಿಮೆ ಪ್ರಮಾಣದ ಸಕ್ಕರೆ ಮತ್ತು ಪಿಷ್ಟವನ್ನು ಹೊಂದಿರುತ್ತದೆ.

ಆಂಟಿಆಕ್ಸಿಡೆಂಟ್ ಗುಣಗಳು ಗುಲಾಬಿಗಿಂತ ಬಿಳಿ ಪೇರಳದಲ್ಲಿ ಹೆಚ್ಚು ಕಂಡುಬರುತ್ತವೆ, ಆದರೆ ಆಹಾರ ತಜ್ಞರ ಪ್ರಕಾರ, ಗುಲಾಬಿ ಪೇರಳೆ ದೇಹಕ್ಕೆ ಉತ್ತಮವಾಗಿದೆ.

ವಿಟಮಿನ್ ಎ ಮತ್ತು ಸಿ ಗುಲಾಬಿ ಪೇರಳೆಯಲ್ಲಿ ಹೇರಳವಾಗಿ ಕಂಡುಬರುತ್ತದೆ. ಇದರೊಂದಿಗೆ ಒಮೆಗಾ 3 ಮತ್ತು ಒಮೆಗಾ 6 ಬಹುಅಪರ್ಯಾಪ್ತ ಕೊಬ್ಬಿನಾಮ್ಲಗಳು ಸಹ ಕಂಡುಬರುತ್ತವೆ.

ಒಮೆಗಾ 3 ಮತ್ತು ಒಮೆಗಾ 6 ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಗಂಭೀರ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಫೈಬರ್ ಮಧುಮೇಹ ರೋಗಿಗಳಿಗೆ ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ.

ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಹೊಟ್ಟೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?