ತೊಂಡೆಕಾಯಿ ತಿಂದರೆ ಮರೆಗುಳಿತನ ಬರುವುದಿಲ್ಲ, ಬುದ್ಧಿಶಕ್ತಿ ಜಾಸ್ತಿಯಾಗುತ್ತೆ
ತೊಂಡೆಕಾಯಿ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದವರು ಎಂದಿಗೂ ಈ ತರಕಾರಿಯನ್ನು ಸೇವನೆ ಮಾಡದೆಯೇ ಇರುವುದಿಲ್ಲ. ಅಷ್ಟೇ ಅಲ್ಲ, ಆಯುರ್ವೇದದಲ್ಲಿಯೂ ಈ ತರಕಾರಿಗೆ ಬಹಳ ಮಹತ್ವ ನೀಡಲಾಗಿದೆ. ಇದರಲ್ಲಿ ಫೈಬರ್, ವಿಟಮಿನ್ ಬಿ 1, ಬಿ 2, ಬಿ 3, ಬಿ 6, ಬಿ 9, ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಸತುವಿನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಸಾಮಾನ್ಯವಾಗಿ ತೊಂಡೆಕಾಯಿಯನ್ನು ನೋಡಿದಾಗ ಮೂಗು ಮುರಿಯುವವರೇ ಹೆಚ್ಚು. ಅದರಲ್ಲಿಯೂ ಈ ತರಕಾರಿ ತಿಂದರೆ ಬುದ್ಧಿಶಕ್ತಿ ಕಡಿಮೆಯಾಗುತ್ತದೆ ಎಂಬ ಕಲ್ಪನೆ ಜನರ ಮನಸ್ಸಲ್ಲಿ ಅಚ್ಚೋತ್ತಿರುವುದರಿಂದ, ಪೋಷಕರು ಕೂಡ ಮಕ್ಕಳಿಗೆ ಈ ತರಕಾರಿಯನ್ನು ಕೊಡಲು ಹಿಂಜರಿಯುತ್ತಾರೆ. ಆದರೆ ಪೌಷ್ಟಿಕ ತಜ್ಞರು ಇಂತಹ ತಪ್ಪು ಗ್ರಹಿಕೆಗಳನ್ನು ನಂಬಬಾರದು ಎಂದು ಹೇಳುತ್ತಾರೆ. ಏಕೆಂದರೆ ತೊಂಡೆಕಾಯಿ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದವರು ಎಂದಿಗೂ ಈ ತರಕಾರಿಯನ್ನು ಸೇವನೆ ಮಾಡದೆಯೇ ಇರುವುದಿಲ್ಲ. ಅಷ್ಟೇ ಅಲ್ಲ, ಆಯುರ್ವೇದದಲ್ಲಿಯೂ ಈ ತರಕಾರಿಗೆ ಬಹಳ ಮಹತ್ವ ನೀಡಲಾಗಿದೆ. ಇದರಲ್ಲಿ ಫೈಬರ್, ವಿಟಮಿನ್ ಬಿ 1, ಬಿ 2, ಬಿ 3, ಬಿ 6, ಬಿ 9, ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಸತುವಿನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.
ಆಯುರ್ವೇದದಲ್ಲಿ ತೊಂಡೆಕಾಯಿಯನ್ನು ಮಧುಮೇಹಕ್ಕೆ ಔಷಧಿಯಾಗಿ ಬಳಸಲಾಗುತ್ತದೆ. ಇದು ಆಂಟಿ- ಅಡಿಪೊಜೆನಿಕ್ ಏಜೆಂಟ್ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ವಾರಕ್ಕೊಮ್ಮೆ ತೊಂಡೆಕಾಯಿ ತಿನ್ನುವುದು ಅಥವಾ ಅದರ ಎಲೆಗಳ ರಸವನ್ನು ಕುಡಿಯುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ನಾರಿನಂಶ ಅಧಿಕವಾಗಿರುತ್ತದೆ. ಇದು ಥಿಯಾಮಿನ್ ಅನ್ನು ಸಹ ಹೊಂದಿರುತ್ತದೆ. ಜೊತೆಗೆ ಇದು ಕಾರ್ಬೋಹೈಡ್ರೇಟ್ ಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸುತ್ತದೆ. ಈ ಕಾರಣದಿಂದಾಗಿ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ. ಇದು ಹುಣ್ಣು ಮತ್ತು ಗ್ಯಾಸ್ ನಂತಹ ಸಮಸ್ಯೆಗಳನ್ನು ದೂರವಿರಿಸುತ್ತದೆ. ಜೊತೆಗೆ ಇದರಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದ್ದು ಇದು ವಿಟಮಿನ್ ಎ ಆಗಿ ಬದಲಾಗುತ್ತದೆ ಮತ್ತು ದೃಷ್ಟಿ ದೋಷಗಳನ್ನು ಸರಿಪಡಿಸುತ್ತದೆ.
ಇದನ್ನೂ ಓದಿ: ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ
ಅಲ್ಝೈಮರ್ ಕಾಯಿಲೆಗೆ ತೊಂಡೆಕಾಯಿಯಲ್ಲಿದೆ ಮದ್ದು
ಸಾಮಾನ್ಯವಾಗಿ ತೊಂಡೆಕಾಯಿ ತಿಂದರೆ ಮರೆಗುಳಿತನ ಬರುತ್ತದೆ ಜೊತೆಗೆ ಬುದ್ದಿ ಮಂದವಾಗುತ್ತದೆ ಎಂಬ ಮಾತನ್ನು ನೀವು ಕೇಳಿರಬಹುದು ಆದರೆ ಇದು ನರಮಂಡಲವನ್ನು ಬಲಪಡಿಸುತ್ತದೆ ಮತ್ತು ಅಲ್ಝೈಮರ್ ನಂತಹ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳಿಂದ ಸಾಬೀತಾಗಿದೆ. ಅಷ್ಟೇ ಅಲ್ಲ, ತೂಕ ಇಳಿಸಿಕೊಳ್ಳಲು ಬಯಸುವವರಿಗೆ ತೊಂಡೆಕಾಯಿ ಸೇವನೆ ಬಹಳ ಒಳ್ಳೆಯದು. ಇದು ಬೊಜ್ಜು ವಿರೋಧಿ ಗುಣಗಳನ್ನು ಹೊಂದಿದೆ. ಜೊತೆಗೆ ಚಯಾಪಚಯ ಕ್ರಿಯೆಯ ದರವನ್ನು ಹೆಚ್ಚಿಸುತ್ತದೆ. ಅಲ್ಲದೆ ಕಬ್ಬಿಣದ ಕೊರತೆಯಿಂದ ಬಳಲುತ್ತಿರುವವರು ತೊಂಡೆಕಾಯಿ ತಿನ್ನುವುದರಿಂದ ಪ್ರಯೋಜನ ಪಡೆಯಬಹುದು. ಇದರಲ್ಲಿ ಕಬ್ಬಿಣಾಂಶ ಅಧಿಕವಾಗಿರುತ್ತದೆ. ಅದಲ್ಲದೆ ರಕ್ತಹೀನತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಉತ್ತಮವಾಗಿದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ