Horse gram: ಈ ಕಾಳಿನಲ್ಲಿದೆ ಲೈಂಗಿಕ ಶಕ್ತಿಯೊಂದಿಗೆ ವೀರ್ಯಾಣುಗಳ ಸಂಖ್ಯೆ ಹೆಚ್ಚಿಸುವ ಶಕ್ತಿ
ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಕೆಟ್ಟ ಜೀವನ ಶೈಲಿಯಿಂದ ಲೈಂಗಿಕ ಶಕ್ತಿಯೂ ಕುಂಠಿತಗೊಳ್ಳುತ್ತಿದ್ದು, ಇದನ್ನು ಪರಿಹರಿಸಿಕೊಳ್ಳಲು ಹಲವಾರು ರೀತಿಯ ಔಷಧಗಳ ಮೊರೆ ಹೋಗುತ್ತಿದ್ದಾರೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ಆದರೆ ನಿಮ್ಮ ಮನೆಗಳಲ್ಲಿ ಸಿಗುವ ಒಂದು ಧಾನ್ಯವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಲೈಂಗಿಕ ಶಕ್ತಿ ಹೆಚ್ಚಾಗುತ್ತದೆ. ಹಾಗದರೆ ಇದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ರೋಗಗಳು ಕಾಣಿಸಿಕೊಳ್ಳುತ್ತಿದೆ. ಅದೂ ಅಲ್ಲದೆ ಬಿಪಿ ಮತ್ತು ಮಧುಮೇಹದಂತಹ ಕಾಯಿಲೆಗಳು ಚಿಕ್ಕ ವಯಸ್ಸಿನಲ್ಲಿ ಬರುತ್ತಿವೆ. ಹಾಗಾಗಿ ಸರಿಯಾದ ರೀತಿಯಲ್ಲಿ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಕೆಟ್ಟ ಜೀವನ ಶೈಲಿಯಿಂದ ಲೈಂಗಿಕ ಶಕ್ತಿಯೂ ಕುಂಠಿತಗೊಳ್ಳುತ್ತಿದ್ದು, ಇದನ್ನು ಪರಿಹರಿಸಿಕೊಳ್ಳಲು ಹಲವಾರು ರೀತಿಯ ಔಷಧಗಳ ಮೊರೆ ಹೋಗುತ್ತಿದ್ದಾರೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ಆದರೆ ನಿಮ್ಮ ಮನೆಗಳಲ್ಲಿ ಸಿಗುವ ಒಂದು ಧಾನ್ಯವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಲೈಂಗಿಕ ಶಕ್ತಿ ಹೆಚ್ಚಾಗುತ್ತದೆ. ಹಾಗದರೆ ಇದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಹುರಳಿ ಕಾಳಿನ ಬಗ್ಗೆ ನೀವು ಕೇಳಿರಬಹುದು. ಸಾಮಾನ್ಯವಾಗಿ ಇದನ್ನು ಕುದುರೆಗಳಿಗೆ ಮೇವಾಗಿ ಕೊಡಲಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಲವೆಡೆ ಈ ಬೀಜಗಳನ್ನು ಮೆಂತ್ಯ ಸೊಪ್ಪಿನೊಂದಿಗೆ ಸೇವನೆ ಮಾಡುತ್ತಾರೆ. ಹುರಳಿ ಬೀಜವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ. ಇದರಲ್ಲಿ ಕಬ್ಬಿಣದ ಅಂಶ, ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಬಿ, ವಿಟಮಿನ್ ಬಿ 2, ವಿಟಮಿನ್ ಬಿ 6, ರಂಜಕ, ಸಿ ಜೀವಸತ್ವಗಳು ಸಮೃದ್ಧವಾಗಿವೆ. ಇದಲ್ಲದೆ, ಹುರುಳಿಯಲ್ಲಿ ಅತ್ಯಧಿಕ ಪ್ರೊಟೀನ್ ಇದೆ. ಈ ಧಾನ್ಯದ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಸಿಗರೇಟ್ ಸೇದುವುದರಿಂದ ತುಟಿಯ ಕ್ಯಾನ್ಸರ್ ಬರಬಹುದು ಎಚ್ಚರ!
ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ
ಇದು ಮಹಿಳೆಯರಲ್ಲಿ ಹೈಪರ್ಯೂರಿಸೆಮಿಯಾ ಮತ್ತು ಮುಟ್ಟಿನ ಸಮಸ್ಯೆಗಳಿಗೆ ಪವಾಡವಾಗಿ ಕಾರ್ಯ ನಿರ್ವಹಿಸುತ್ತದೆ. ಇದರ ಸೇವನೆಯು ಚರ್ಮದ ಸೌಂದರ್ಯಕ್ಕೂ ಒಳ್ಳೆಯದು ಅಲ್ಲದೆ ಇದು ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ. ಮೂತ್ರಪಿಂಡದ ಕಲ್ಲುಗಳ ಸಮಸ್ಯೆಗೂ ಇದು ಉತ್ತಮ ಔಷಧಿ. ಅಲ್ಲದೆ ಈ ಧಾನ್ಯದ ಸೇವನೆಯು ರಕ್ತಹೀನತೆಯನ್ನು ತಡೆಗಟ್ಟುತ್ತದೆ. ಈ ಕಾಳುಗಳು ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಅನೇಕ ಸಂಶೋಧನೆಗಳಿಂದ ತಿಳಿದು ಬಂದಿದೆ. ಅಲ್ಲದೆ ಇದು ಪುರುಷರಲ್ಲಿ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಆದರೆ ಇದನ್ನು ಅತಿಯಾಗಿ ಸೇವನೆ ಮಾಡಬೇಡಿ.
(ಸೂಚನೆ: ಇದನ್ನು ಅನುಸರಿಸುವ ಮೊದಲು ನಿಮ್ಮ ಆಹಾರ ತಜ್ಞರನ್ನು ಸಂಪರ್ಕಿಸಿ)
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ