ಹಸುವಿನ ಹಾಲು ಒಳ್ಳೆಯದಾ? ಎಮ್ಮೆಯ ಹಾಲು ಉತ್ತಮವಾ?

ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಈಗಂತೂ ಹಸುವಿನ ಹಾಲಿನ ಜೊತೆಗೆ ಮೇಕೆ, ಎಮ್ಮೆ ಹಾಲು ಕೂಡ ಫೇಮಸ್ ಆಗುತ್ತಿವೆ. ಆದರೆ, ಮೊದಲಿನಿಂದಲೂ ಎಮ್ಮೆ ಹಾಲು ಮತ್ತು ಹಸುವಿನ ಹಾಲಿನ ನಡುವೆ ಯಾವುದು ಬೆಸ್ಟ್​ ಎಂಬ ಬಗ್ಗೆ ಗೊಂದಲ ಇದ್ದೇ ಇದೆ. ಈ ಬಗ್ಗೆ ನಿಮಗೆ ಮಾಹಿತಿ ಇಲ್ಲಿದೆ.

ಹಸುವಿನ ಹಾಲು ಒಳ್ಳೆಯದಾ? ಎಮ್ಮೆಯ ಹಾಲು ಉತ್ತಮವಾ?
ಹಾಲುImage Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 27, 2023 | 3:31 PM

ಹಾಲು ಅತ್ಯಂತ ಪೌಷ್ಟಿಕವಾದ ಆಹಾರ ಎಂಬುದರಲ್ಲಿ ಸಂದೇಹವಿಲ್ಲ. ಹಾಲಿನಲ್ಲಿ ಅತಿ ಹೆಚ್ಚು ಕ್ಯಾಲ್ಸಿಯಂ ಅಂಶ ಇರುವುದರಿಂದ ಇದು ಬಲವಾದ ಮೂಳೆಗಳು ಮತ್ತು ಹಲ್ಲುಗಳಿಗೆ ಅವಶ್ಯಕವಾಗಿದೆ. ಅದರಲ್ಲೂ ಮಕ್ಕಳ ಬೆಳವಣಿಗೆಗೆ ಕ್ಯಾಲ್ಸಿಯಂ ಅತ್ಯಂತ ಉಪಯುಕ್ತವಾದುದು. ದೊಡ್ಡವರಿಗೂ ಆರೋಗ್ಯವಾಗಿರಲು ವೈದ್ಯರು ಪ್ರತಿದಿನ ಹಾಲು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ನೀವು ಹಸು ಮತ್ತು ಎಮ್ಮೆ ಹಾಲಿನ ನಡುವೆ ಯಾವುದಾದರೂ ಒಂದನ್ನು ಆಯ್ಕೆ ಮಾಡಬೇಕಾದಾಗ ಯಾವುದು ಉತ್ತಮ? ಎಂಬ ಗೊಂದಲ ಉಂಟಾಗುವುದು ಸಹಜ. ಎರಡೂ ರೀತಿಯ ಹಾಲಿನಲ್ಲಿ ಕೆಲವು ಒಳ್ಳೆಯ ಮತ್ತು ಕೆಲವು ಕೆಟ್ಟ ಅಂಶಗಳಿವೆ. ಆದ್ದರಿಂದ, ಇವೆರಡರ ನಡುವಿನ ಪ್ರಮುಖ ವ್ಯತ್ಯಾಸವೇನು ಎಂಬ ಮಾಹಿತಿ ಇಲ್ಲಿದೆ.

1. ನೀರು:

ಪ್ರತಿಯೊಬ್ಬ ವ್ಯಕ್ತಿಗೆ ನೀರು ಅತ್ಯಗತ್ಯ. ಆದ್ದರಿಂದ ನಿಮ್ಮ ದೇಹದಲ್ಲಿ ನೀರಿನ ಪ್ರಮಾಣವನ್ನು ಹೆಚ್ಚಿಸಲು ನೀವು ಬಯಸಿದರೆ ಹಸುವಿನ ಹಾಲನ್ನು ಕುಡಿಯಲು ಪ್ರಾರಂಭಿಸಿ. ಹಸುವಿನ ಹಾಲು ಶೇ. 90ರಷ್ಟು ನೀರನ್ನು ಹೊಂದಿರುತ್ತದೆ. ಇದು ನಿಮ್ಮ ದೇಹವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹೊಳೆಯುವ ತ್ವಚೆಗೆ ಹಸಿ ಹಾಲು ಸೇವನೆ! ಹಸಿ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಚಳಿಗಾಲದಲ್ಲಿ ಆ ಸಮಸ್ಯೆಗಳು ಬರುವುದಿಲ್ಲ!

2. ಕೊಬ್ಬು:

ಹಾಲಿನ ಸ್ಥಿರತೆಗೆ ಕೊಬ್ಬು ಕಾರಣವಾಗಿದೆ. ಹಸುವಿನ ಹಾಲಿನಲ್ಲಿ ಎಮ್ಮೆಯ ಹಾಲಿಗಿಂತ ಕಡಿಮೆ ಕೊಬ್ಬಿನ ಅಂಶವಿರುತ್ತದೆ. ಎಮ್ಮೆ ಹಾಲು ಹಸುವಿನ ಹಾಲಿಗಿಂತ ದಪ್ಪವಾಗಿರಲು ಇದೇ ಕಾರಣ. ಹಸುವಿನ ಹಾಲು ಶೇ. 3-4ರಷ್ಟು ಕೊಬ್ಬನ್ನು ಹೊಂದಿರುತ್ತದೆ. ಆದರೆ ಎಮ್ಮೆಯ ಹಾಲು ಶೇ. 7-8ರಷ್ಟು ಕೊಬ್ಬನ್ನು ಹೊಂದಿರುತ್ತದೆ. ಎಮ್ಮೆ ಹಾಲು ಹೊಟ್ಟೆಗೆ ಭಾರವಾಗಿರುತ್ತದೆ. ಆದ್ದರಿಂದ ಅದನ್ನು ಜೀರ್ಣಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಎಮ್ಮೆಯ ಹಾಲನ್ನು ಕುಡಿದ ನಂತರ ನಿಮಗೆ ದೀರ್ಘಕಾಲ ಹಸಿವಾಗುವುದಿಲ್ಲ.

3. ಕ್ಯಾಲೋರಿಗಳು:

ಎಮ್ಮೆಯ ಹಾಲು ಹೆಚ್ಚು ಕ್ಯಾಲೊರಿಗಳನ್ನು ಹೊಂದಿರುತ್ತದೆ. ಏಕೆಂದರೆ, ಇದು ಹೆಚ್ಚು ಪ್ರೋಟೀನ್ ಮತ್ತು ಕೊಬ್ಬಿನ ಅಂಶವನ್ನು ಹೊಂದಿರುತ್ತದೆ. ಒಂದು ಕಪ್ ಎಮ್ಮೆ ಹಾಲು 237 ಕ್ಯಾಲೋರಿಗಳನ್ನು ಹೊಂದಿದ್ದರೆ, ಒಂದು ಕಪ್ ಹಸುವಿನ ಹಾಲಿನಲ್ಲಿ 148 ಕ್ಯಾಲೋರಿಗಳಿರುತ್ತವೆ.

ಇದನ್ನೂ ಓದಿ: ಮಕ್ಕಳಿಗೆ ಹಸುವಿನ ಹಾಲಿನ ಬದಲು ಮೇಕೆ ಹಾಲು ಕೊಡಬಹುದೇ?

4. ಪ್ರೋಟೀನ್:

ಹಸುವಿನ ಹಾಲಿಗೆ ಹೋಲಿಸಿದರೆ ಎಮ್ಮೆಯ ಹಾಲಿನಲ್ಲಿ ಶೇ. 10-11ರಷ್ಟು ಪ್ರೋಟೀನ್ ಇರುತ್ತದೆ. ಹೆಚ್ಚಿನ ಪ್ರಮಾಣದ ಪ್ರೋಟೀನ್‌ನಿಂದಾಗಿ ಎಮ್ಮೆಯ ಹಾಲನ್ನು ಚಿಕ್ಕ ಮಕ್ಕಳು ಮತ್ತು ವೃದ್ಧರಿಗೆ ಕುಡಿಯಲು ಸೂಚಿಸುವುದಿಲ್ಲ.

5. ಕೊಲೆಸ್ಟ್ರಾಲ್:

ಹಸು ಮತ್ತು ಎಮ್ಮೆಯ ಹಾಲಿನಲ್ಲಿರುವ ಕೊಲೆಸ್ಟ್ರಾಲ್ ಪ್ರಮಾಣ ಭಿನ್ನವಾಗಿರುತ್ತದೆ. ಎಮ್ಮೆಯ ಹಾಲು ಕಡಿಮೆ ಕೊಲೆಸ್ಟ್ರಾಲ್ ಅಂಶವನ್ನು ಹೊಂದಿದೆ. ಆದ್ದರಿಂದ ಇದು PCOD, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ತೊಂದರೆಗಳು ಮತ್ತು ಬೊಜ್ಜುಗಳಿಂದ ಬಳಲುತ್ತಿರುವವರಿಗೆ ಅತ್ಯುತ್ತಮವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ