Mint Leaves: ಈ ಎಲೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಯಬಹುದು

ಪುದೀನಾ ಎಲೆ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಪುದೀನಾವನ್ನು ನೈಸರ್ಗಿಕ ಔಷಧೀಯ ಸಸ್ಯ ಎಂದು ಕರೆಯಲಾಗುತ್ತದೆ. ಇದು ನೆಗಡಿ, ಕೆಮ್ಮು, ಬಾಯಿ ಸಮಸ್ಯೆಗಳು, ಗಂಟಲು ನೋವು, ಸೈನಸ್ ಸೋಂಕುಗಳು, ಉಸಿರಾಟದ ಸೋಂಕುಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಬಾಯಿ ಅಥವಾ ಗಂಟಲಿನ ಉರಿಯೂತವನ್ನು ನಿವಾರಿಸಲು ಪುದೀನಾವನ್ನು ಔಷಧಿಯಾಗಿ ಬಳಸಬಹುದು.ಅದಕ್ಕಾಗಿಯೇ ತಜ್ಞರು ಪುದೀನಾ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ಹೇಳುತ್ತಾರೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಪ್ರತಿದಿನ ಕನಿಷ್ಠ ಎಷ್ಟು ಎಲೆಗಳನ್ನು ಸೇವನೆ ಮಾಡಬೇಕು? ಇಲ್ಲಿದೆ ಮಾಹಿತಿ.

Mint Leaves: ಈ ಎಲೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಯಬಹುದು
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 16, 2024 | 2:18 PM

ಪುದೀನಾ ಎಲೆಯಲ್ಲಿ ಅನೇಕ ಔಷಧೀಯ ಗುಣಗಳಿವೆ ಎಂಬುದು ನಿಮಗೆಲ್ಲರಿಗೂ ತಿಳಿದಿರಬಹುದು. ಹಾಗಾಗಿಯೇ ಇದರ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಪುದೀನಾವನ್ನು ನೈಸರ್ಗಿಕ ಔಷಧೀಯ ಸಸ್ಯ ಎಂದು ಕರೆಯಲಾಗುತ್ತದೆ. ಇದು ನೆಗಡಿ, ಕೆಮ್ಮು, ಬಾಯಿ ಸಮಸ್ಯೆಗಳು, ಗಂಟಲು ನೋವು, ಸೈನಸ್ ಸೋಂಕುಗಳು, ಉಸಿರಾಟದ ಸೋಂಕುಗಳನ್ನು ನಿವಾರಿಸಲು ಸಹಕಾರಿಯಾಗಿದೆ. ಬಾಯಿ ಅಥವಾ ಗಂಟಲಿನ ಉರಿಯೂತವನ್ನು ನಿವಾರಿಸಲು ಪುದೀನಾವನ್ನು ಔಷಧಿಯಾಗಿ ಬಳಸಬಹುದು. ಅಲ್ಲದೆ ಈ ಎಲೆ ಕ್ಯಾನ್ಸರ್ ಬೆಳವಣಿಗೆಯ ಅಂಶಗಳನ್ನು ತಡೆಯುತ್ತದೆ. ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಸಂಭಾವ್ಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಜೊತೆಗೆ ಇದು ಜೀರ್ಣಕಾರಿ ಆರೋಗ್ಯಕ್ಕೆ ಸಹಾಯ ಮಾಡುತ್ತದೆ, ಅಲರ್ಜಿ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ತಜ್ಞರು ಪುದೀನಾ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡಿ ಎಂದು ಹೇಳುತ್ತಾರೆ. ಹಾಗಾದರೆ ಇದರ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಪ್ರತಿದಿನ ಕನಿಷ್ಠ ಎಷ್ಟು ಎಲೆಗಳನ್ನು ಸೇವನೆ ಮಾಡಬೇಕು? ಇಲ್ಲಿದೆ ಮಾಹಿತಿ.

ಪುದೀನಾ ಎಲೆಗಳನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳು:

  • ಪ್ರತಿದಿನ ಕನಿಷ್ಠ 5- 6 ಪುದೀನಾ ಎಲೆಗಳನ್ನು ಜಗಿದು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
  • ಈ ಎಲೆಯ ರಸ ಅಥವಾ ಇದನ್ನು ಸೇರಿಸಿ ಮಾಡಿದ ಆಹಾರಗಳ ನಿಯಮಿತ ಸೇವನೆಯು ಎದೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಪುದೀನಾದಲ್ಲಿರುವ ಮೆಂಥೋಲ್ ಡಿಕಾಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹವಾದ ಲೋಳೆಯನ್ನು ಹೊರಹಾಕುತ್ತದೆ. ಇದರಿಂದ ಸುಲಭವಾಗಿ ಉಸಿರಾಡಬಹದು.
  • ಪುದೀನಾದ ಔಷಧೀಯ ಗುಣಗಳು ಮತ್ತು ಅದರ ಸುವಾಸನೆ ಅರೋಮಾಥೆರಪಿಗೆ ಸಹಾಯ ಮಾಡುತ್ತದೆ. ಅದರಲ್ಲಿರುವ ಉಲ್ಲಾಸದಾಯಕ ಪರಿಮಳ ನಿಮಗೆ ಬೇಗನೆ ಶಾಂತ ಮತ್ತು ಉಲ್ಲಾಸದ ಭಾವನೆಯನ್ನು ನೀಡುತ್ತದೆ. ಪುದೀನಾ ರಸದ ಸುವಾಸನೆ ಮಾನಸಿಕ ಒತ್ತಡ, ಖಿನ್ನತೆಯನ್ನು ತ್ವರಿತವಾಗಿ ನಿವಾರಿಸುತ್ತದೆ.
  • ಪುದೀನಾ ಎಲೆಗಳನ್ನು ಜಗಿದು ತಿನ್ನುವುದರಿಂದ ಬಾಯಿಯ ನೈರ್ಮಲ್ಯ ಮತ್ತು ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ ನಾಲ್ಕರಿಂದ ಐದು ಪುದೀನಾ ಎಲೆಗಳನ್ನು ಜಗಿಯುವುದರಿಂದ ಹಲ್ಲುನೋವು, ದವಡೆ ರಕ್ತಸ್ರಾವವನ್ನು ತಡೆಯಬಹುದು. ಜೊತೆಗೆ ಇದು ಒಸಡುಗಳನ್ನು ಬಲಪಡಿಸುತ್ತದೆ ಮತ್ತು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ.
  • ಪುದೀನಾ ಎಲೆಗಳನ್ನು ವಿವಿಧ ರೀತಿಯಲ್ಲಿ ಬಳಸುವುದರಿಂದ ಚರ್ಮದ ಕಾಯಿಲೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.
  • ಪುದೀನಾ ಎಲೆಗಳ ರಸವನ್ನು ಜೇನುತುಪ್ಪ ಅಥವಾ ಕೆಂಪು ಕಲ್ಲು ಸಕ್ಕರೆ ಮತ್ತು ನಿಂಬೆ ರಸದೊಂದಿಗೆ ಬೆರೆಸಿ ಸೇವಿಸುವುದರಿಂದ ಆಯಾಸ, ಆಲಸ್ಯ ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಅಲ್ಲದೆ ಮನಸ್ಸನ್ನು ಉಲ್ಲಾಸಗೊಳಿಸುತ್ತದೆ.
  • ಜಜ್ಜಿದ ಪುದೀನಾ ಎಲೆಗಳು ತಲೆನೋವು ಮತ್ತು ತಲೆ ತಿರುಗುವಿಕೆಯನ್ನು ನಿವಾರಿಸುತ್ತದೆ. ಜೇನುತುಪ್ಪದೊಂದಿಗೆ ಪುದೀನಾ ಕಷಾಯವನ್ನು ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

(ಸೂಚನೆ: ಇದನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್