ಕರಬೂಜ ಹಣ್ಣು
ಕರಬೂಜ ಹಣ್ಣಿನ ಬಗ್ಗೆ ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಒಳ್ಳೆಯದು. ಅಲ್ಲದೆ ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ನೀರಿನ ಪ್ರಮಾಣ ಹೇರಳವಾಗಿದ್ದು ದೇಹಕ್ಕೆ ತಂಪನ್ನು ನೀಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಅಷ್ಟೇ ಅಲ್ಲ ಕರಬೂಜ ಹಣ್ಣಿನಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ, ಫೋಲಿಕ್ ಆಮ್ಲ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಇತರ ಕೆಲವು ಪೋಷಕಾಂಶಗಳು ಸಮೃದ್ಧವಾಗಿವೆ.
- ಜ್ವರದಿಂದ ಬಳಲುತ್ತಿರುವವರು ಕರಬೂಜ ಹಣ್ಣಿನ ರಸಕ್ಕೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೈಹಿಕ ಆಯಾಸ ಕಡಿಮೆಯಾಗುತ್ತದೆ ಜೊತೆಗೆ ಈ ಆಹಾರ ನಿಮಗೆ ಶಕ್ತಿಯನ್ನು ನೀಡುತ್ತದೆ.
- ಮಲಬದ್ಧತೆಯ ಸಮಸ್ಯೆ ಇರುವವರು ಪ್ರತಿದಿನ ಕರಬೂಜ ಹಣ್ಣನ್ನು ಸೇವನೆ ಮಾಡಿದರೆ ಈ ಸಮಸ್ಯೆ ನಿವಾರಣೆಯಾಗುತ್ತದೆ. ಇದರಲ್ಲಿರುವ ಫೈಬರ್ ಅಂಶವು ಮಲಬದ್ಧತೆಯನ್ನು ತಡೆಯುತ್ತದೆ. ಅಲ್ಲದೆ ದೇಹದಿಂದ ತ್ಯಾಜ್ಯವನ್ನು ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ.
- ಮೂತ್ರವಿಸರ್ಜನೆ ಮಾಡುವಾಗ ಉರಿ, ತುರಿಕೆ ಕಂಡು ಬರುತ್ತಿರುವವರಿಗೆ ಈ ಹಣ್ಣು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ.
- ಕರಬೂಜ ಹಣ್ಣನ್ನು ಸೇವನೆ ಮಾಡುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ. ಇದು ಚರ್ಮದ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.
- ಈ ಹಣ್ಣಿನಲ್ಲಿ ಬೀಟಾ ಕ್ಯಾರೋಟಿನ್, ಫೋಲಿಕ್ ಆಮ್ಲ, ಪೊಟ್ಯಾಸಿಯಮ್ ಮತ್ತು ಎ ಮತ್ತು ಸಿ ಜೀವಸತ್ವಗಳು ಉತ್ಕರ್ಷಣ ನಿರೋಧಕಗಳಿವೆ.
- ಕರಬೂಜವು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಹಣ್ಣಿನ ರಸವನ್ನು ಕುಡಿಯುವುದರಿಂದ ಮೆದುಳಿಗೆ ಉತ್ತಮ ಆಮ್ಲಜನಕದ ಪೂರೈಕೆಗೆ ಸಹಾಯ ಮಾಡುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.
- ಕರಬೂಜ ಹಣ್ಣಿನ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡಗಳಲ್ಲಿನ ಕಲ್ಲುಗಳನ್ನು ಕರಗಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
- ಈ ಹಣ್ಣಿನಲ್ಲಿ ಫೋಲಿಕ್ ಆಮ್ಲವು ಸಮೃದ್ಧವಾಗಿದೆ, ಇದು ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮಗುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
- ಕರಬೂಜದಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು, ಇದು ಹೃದಯಕ್ಕೆ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿರುವ ಫೋಲೇಟ್ ಹೃದಯದ ಕಾಯಿಲೆಗಳಿಂದ ರಕ್ಷಿಸುತ್ತದೆ.
- ಈ ಹಣ್ಣು ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು ಹೆಚ್ಚಿನ ಫೈಬರ್ ಅಂಶವಿರುವುದರಿಂದ ಹೆಚ್ಚುವರಿ ತೂಕವನ್ನು ಕಡಿಮೆ ಮಾಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ