Health tips: ಕಿತ್ತಳೆ ಸಿಪ್ಪೆಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ
ಚಳಿಗಾಲದಲ್ಲಿ ಜನರು ಸಾಕಷ್ಟು ಕಿತ್ತಳೆ ಹಣ್ಣುಗಳನ್ನು ಸೇವಿಸುತ್ತಾರೆ. ಇದನ್ನು ತಿನ್ನುವುದರಿಂದ ನಮ್ಮ ಚರ್ಮ ಆರೋಗ್ಯವಾಗಿರುತ್ತದೆ. ಆದರೆ ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಅಥವಾ ತೊಗಟೆಯನ್ನು ಎಸೆಯುತ್ತಾರೆ. ನಿಮಗೆ ಗೊತ್ತೆ? ಇದರಲ್ಲಿ ಅನೇಕ ರೀತಿಯ ಆರೋಗ್ಯ ಗುಣಗಳಿವೆ. ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಇದರಲ್ಲಿ ಆಂಟಿ ಆಕ್ಸಿಡೆಂಟ್ಗಳು, ವಿಟಮಿನ್ ಸಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ನಮ್ಮ ಆರೋಗ್ಯಕ್ಕೆ ಮಾತ್ರವಲ್ಲದೆ ದೈನಂದಿನ ದಿನಚರಿಯಲ್ಲೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಸಾಮಾನ್ಯವಾಗಿ ಕಿತ್ತಳೆ ಹಣ್ಣನ್ನು ಎಲ್ಲರೂ ಇಷ್ಟ ಪಟ್ಟು ತಿನ್ನುತ್ತಾರೆ. ಇದು ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಜನರು ಸಾಕಷ್ಟು ಕಿತ್ತಳೆ ಹಣ್ಣುಗಳನ್ನು ಸೇವಿಸುತ್ತಾರೆ. ಇದನ್ನು ತಿನ್ನುವುದರಿಂದ ನಮ್ಮ ಚರ್ಮ ಆರೋಗ್ಯವಾಗಿರುತ್ತದೆ. ಆದರೆ ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಅಥವಾ ತೊಗಟೆಯನ್ನು ಎಸೆಯುತ್ತಾರೆ. ನಿಮಗೆ ಗೊತ್ತೆ? ಇದರಲ್ಲಿ ಅನೇಕ ರೀತಿಯ ಆರೋಗ್ಯ ಗುಣಗಳಿವೆ. ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಇದರಲ್ಲಿ ಆಂಟಿಆಕ್ಸಿಡೆಂಟ್ಗಳು, ವಿಟಮಿನ್ ಸಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ನಮ್ಮ ಆರೋಗ್ಯಕ್ಕೆ ಮಾತ್ರವಲ್ಲದೆ ದೈನಂದಿನ ದಿನಚರಿಯಲ್ಲೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅದಲ್ಲದೆ ಕಿತ್ತಳೆ ಸಿಪ್ಪೆಯನ್ನು ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಇತರ ಕೆಲಸಗಳಿಗೆ ಬಳಸಲಾಗುತ್ತದೆ. ಹಾಗಾದರೆ ಉಪಯುಕ್ತವಾಗಿ ಕಿತ್ತಳೆ ಸಿಪ್ಪೆಯನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿದುಕೊಳ್ಳಿ.
- ಸಾಮಾನ್ಯವಾಗಿ ಕಿತ್ತಳೆ ಸಿಪ್ಪೆಯ ಪುಡಿ ನೈಸರ್ಗಿಕ ಸ್ಕ್ರಬ್ ಆಗಿ ಕಾರ್ಯ ನಿರ್ವಹಿಸುತ್ತದೆ. ಇದು ಚರ್ಮದಿಂದ ಟ್ಯಾನಿಂಗ್ ಅನ್ನು ತೆಗೆಯುತ್ತದೆ, ಇದರೊಂದಿಗೆ ಮೊಡವೆಗಳನ್ನು ಕಡಿಮೆ ಮಾಡಲು ಮತ್ತು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ನೀವು ಕಿತ್ತಳೆ ಸಿಪ್ಪೆಯ ಪುಡಿಯನ್ನು ತಯಾರಿಸಿ ಫೇಸ್ ಪ್ಯಾಕ್ ತಯಾರಿಸಿ ಚರ್ಮಕ್ಕೆ ಬಳಸಬಹುದು.
- ಕಿತ್ತಳೆ ಸಿಪ್ಪೆಯಲ್ಲಿ ಆಮ್ಲೀಯ ಗುಣಗಳಿವೆ. ಇದು ಅಡುಗೆ ಮನೆಯಲ್ಲಿರುವ ಕಲೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಹಾಗೆಯೇ ಕಿತ್ತಳೆ ಸಿಪ್ಪೆಯು ನೈಸರ್ಗಿಕ ಸುವಾಸನೆಗಳನ್ನು ಹೊಂದಿರುವುದರಿಂದ ಇದು ಮನೆಯನ್ನು ಪರಿಮಳಯುಕ್ತವಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಕೆಟ್ಟ ವಾಸನೆಗಳಿಂದ ಮುಕ್ತಿ ನೀಡುತ್ತದೆ.
- ಕಿತ್ತಳೆ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಬಳಿಕ ಅದನ್ನು ಪುಡಿ ಮಾಡಿ ಇಟ್ಟುಕೊಳ್ಳಬಹುದು. ಇದರಿಂದ ನೀವು ಚಹಾ, ಕಷಾಯ ಮಾಡಿ ಕುಡಿಯಬಹುದು. ಈ ರೀತಿ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
- ಕಿತ್ತಳೆ ಸಿಪ್ಪೆಯಲ್ಲಿರುವ ಪೋಷಕಾಂಶಗಳು ಸಸ್ಯಕ್ಕೆ ಗೊಬ್ಬರವಾಗಿ ಕಾರ್ಯ ನಿರ್ವಹಿಸುತ್ತವೆ. ಅದರ ತೊಗಟೆಯನ್ನು ಒಣಗಿಸಿ, ಪುಡಿ ಮಾಡಿ ಜೇಡಿಮಣ್ಣಿನೊಂದಿಗೆ ಬೆರೆಸಿ ಅದನ್ನು ಗಿಡಗಳಿಗೆ ಹಾಕಿ. ಇದು ನಿಮ್ಮ ಸಸ್ಯಗಳಿ ಅನೇಕ ರೀತಿಯ ಪ್ರಯೋಜನವನ್ನು ನೀಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ